Ranji Trophy Final: ರಹಾನೆ- ಮುಶೀರ್ ಖಾನ್ ಅರ್ಧಶತಕ; ಭದ್ರ ಸ್ಥಿತಿಯಲ್ಲಿ ಮುಂಬೈ
Ranji Trophy Final: 224 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ್ದ ಮುಂಬೈ ತಂಡ, ವಿದರ್ಭ ತಂಡವನ್ನು 105 ರನ್ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಮೊದಲ ಇನ್ನಿಂಗ್ಸ್ನಲ್ಲಿ 119 ರನ್ಗಳ ಮುನ್ನಡೆ ಪಡೆದ ಮುಂಬೈ, ಎರಡನೇ ಇನ್ನಿಂಗ್ಸ್ನಲ್ಲಿ ಎರಡನೇ ದಿನದಾಟದಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ.
ವಾಂಖೆಡೆ ಸ್ಟೇಡಿಯಂನಲ್ಲಿ ವಿದರ್ಭ ವಿರುದ್ಧ (Mumbai vs Vidarbha) ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯದಲ್ಲಿ ಮುಂಬೈ ತಂಡದ ನಾಯಕ ಅಜಿಂಕ್ಯ ರಹಾನೆ (Ajinkya Rahane) ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಟೀಕಾಕಾರರಿಗೆ ಉತ್ತರ ನೀಡುವ ಕೆಲಸವನ್ನು ರಹಾನೆ ಮಾಡಿದ್ದಾರೆ. ವಾಸ್ತವವಾಗಿ ರಹಾನೆ ನಾಯಕತ್ವದಲ್ಲಿ ಮುಂಬೈ ತಂಡ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಆದರೆ ಇಡೀ ಟೂರ್ನಿಯಲ್ಲಿ ರಹಾನೆ ಬ್ಯಾಟ್ ಮೌನಕ್ಕೆ ಶರಣಾಗಿತ್ತು. ಎಷ್ಟರ ಮಟ್ಟಿಗೆ ಎಂದರೆ ಈ ಆವೃತ್ತಿಯಲ್ಲಿ ರಹಾನೆ ಒಂದೇ ಒಂದು ಶತಕವನ್ನೂ ಬಾರಿಸಿರಲಿಲ್ಲ. ಇದರಿಂದಾಗಿ ರಹಾನೆ ವಿರುದ್ಧ ಎಲ್ಲೆಡೆ ಟೀಕೆ ವ್ಯಕ್ತವಾಗಿತ್ತು. ಆದರೆ ರಹಾನೆ ಅಂತಿಮ ಸುತ್ತಿನಲ್ಲಿ ಅರ್ಧಶತಕ ಬಾರಿಸುವ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ.
ಅಜಿಂಕ್ಯ ರಹಾನೆ 42ನೇ ಓವರ್‌ನ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿ ಅರ್ಧಶತಕ ಪೂರೈಸಿದರು. ಈ ಮೂಲಕ ಮುಂಬೈ ಪರ ಶಾರ್ದೂಲ್ ಠಾಕೂರ್ ನಂತರ ಫೈನಲ್‌ನಲ್ಲಿ ಅರ್ಧಶತಕ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅಲ್ಲದೆ, ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ಇದು ರಹಾನೆ ಅವರ ಎರಡನೇ ಅರ್ಧಶತಕವಾಗಿದೆ. ಈ ಪಂದ್ಯದಲ್ಲಿ ಅಜಿಂಕ್ಯ ರಹಾನೆ 88 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ ಅರ್ಧಶತಕ ದಾಖಲಿಸಿದರು. ಇದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅಜಿಂಕ್ಯ ಅವರ 37ನೇ ಅರ್ಧಶತಕವಾಗಿದೆ.
Ranji Trophy 2024 Final: ಮತ್ತೆ ಒಂದಂಕಿಗೆ ಸುಸ್ತಾದ ಶ್ರೇಯಸ್- ರಹಾನೆ
3ನೇ ವಿಕೆಟ್‌ಗೆ ಶತಕದ ಜೊತೆಯಾಟ
224 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ್ದ ಮುಂಬೈ ತಂಡ, ವಿದರ್ಭ ತಂಡವನ್ನು 105 ರನ್ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಮೊದಲ ಇನ್ನಿಂಗ್ಸ್ನಲ್ಲಿ 119 ರನ್ಗಳ ಮುನ್ನಡೆ ಪಡೆದ ಮುಂಬೈ, ಎರಡನೇ ಇನ್ನಿಂಗ್ಸ್ನಲ್ಲಿ ಎರಡನೇ ದಿನದಾಟದಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ. ಕೇವಲ 34 ರನ್ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆ ಮತ್ತು ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ಜೊತೆಗಿನ ಅಜೇಯ ಶತಕದ ಜೊತೆಯಾಟ ನೆರವಾಯಿತು. ಅಲ್ಲದೆ ಈ ಇಬ್ಬರು ತಲಾ ಅರ್ಧಶತಕ ಬಾರಿಸಿದಲ್ಲದೆ ನಾಳೆಗೂ ತಮ್ಮ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಉಭಯ ತಂಡಗಳು
ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ಪೃಥ್ವಿ ಶಾ, ಭೂಪೇನ್ ಲಾಲ್ವಾನಿ, ಮುಶೀರ್ ಖಾನ್, ಶ್ರೇಯಸ್ ಅಯ್ಯರ್, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಶಾಮ್ಸ್ ಮುಲಾನಿ, ಶಾರ್ದೂಲ್ ಠಾಕೂರ್, ತನುಷ್ ಕೋಟ್ಯಾನ್, ಧವಳ್ ಕುಲಕರ್ಣಿ ಮತ್ತು ತುಷಾರ್ ದೇಶಪಾಂಡೆ.
ವಿದರ್ಭ ತಂಡ: ಅಕ್ಷಯ್ ವಾಡ್ಕರ್ (ನಾಯಕ ಮತ್ತು ವಿಕೆಟ್ ಕೀಪರ್), ಅಥರ್ವ ತಾಯ್ಡೆ, ಧ್ರುವ ಶೌರೆ, ಅಮನ್ ಮೊಖಾಡೆ, ಕರುಣ್ ನಾಯರ್, ಯಶ್ ರಾಥೋಡ್, ಆದಿತ್ಯ ಸರ್ವತೆ, ಉಮೇಶ್ ಯಾದವ್, ಹರ್ಷ್ ದುಬೆ, ಯಶ್ ಠಾಕೂರ್ ಮತ್ತು ಆದಿತ್ಯ ಠಾಕ್ರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ