Ranji Trophy 2024: 48 ಓವರ್​ಗಳಲ್ಲಿ 529 ರನ್; ಅತಿ ವೇಗದ ತ್ರಿಶತಕ ಸಿಡಿಸಿ ವಿಶ್ವದಾಖಲೆ ಬರೆದ ತನ್ಮಯ್..!

Ranji Trophy 2024: ತನ್ಮಯ್ ಅಗರ್ವಾಲ್ ಪ್ರಸ್ತುತ 160 ಎಸೆತಗಳಲ್ಲಿ 323 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರೆ, ಪಂದ್ಯದಲ್ಲಿ 201.87 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ತನ್ಮಯ್ ಅವರ ಇನ್ನಿಂಗ್ಸ್​ನಲ್ಲಿ 21 ಸಿಕ್ಸರ್‌ ಹಾಗೂ 33 ಬೌಂಡರಿಗಳು ಸೇರಿವೆ.

Ranji Trophy 2024: 48 ಓವರ್​ಗಳಲ್ಲಿ 529 ರನ್; ಅತಿ ವೇಗದ ತ್ರಿಶತಕ ಸಿಡಿಸಿ ವಿಶ್ವದಾಖಲೆ ಬರೆದ ತನ್ಮಯ್..!
ತನ್ಮಯ್ ಅಗರ್ವಾಲ್
Follow us
ಪೃಥ್ವಿಶಂಕರ
|

Updated on:Jan 26, 2024 | 7:13 PM

ಪ್ರಸಕ್ತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ (Ranji Trophy 2024) ಹೈದರಾಬಾದ್ ಮತ್ತು ಅರುಣಾಚಲ ಪ್ರದೇಶ (Arunachal Pradesh vs Hyderabad) ತಂಡಗಳು ಹೈದರಾಬಾದ್‌ನ ನೆಕ್ಸ್‌ಜೆನ್ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ 172 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದರೆ, ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಹೈದರಾಬಾದ್ ತಂಡ ಮೈದಾನದಲ್ಲಿ ರನ್​ಗಳ ಸುನಾಮಿ ಎಬ್ಬಿಸಿದೆ. ಮೊದಲ ದಿನದಾಟದಂತ್ಯಕ್ಕೆ 48 ಓವರ್​ಗಳ ಬ್ಯಾಟಿಂಗ್ ಮಾಡಿದ ಹೈದರಾಬಾದ್ ಕೇವಲ 1 ವಿಕೆಟ್ ಕಳೆದುಕೊಂಡು ಬರೋಬ್ಬರಿ 529 ರನ್ ಕಲೆಹಾಕಿದೆ. ತಂಡದ ಪರ ಆರಂಭಿಕ ಆಟಗಾರ ತನ್ಮಯ್ ಅಗರ್ವಾಲ್ (Tanmay Agarwal) ಅತಿ ವೇಗದ ತ್ರಿಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

147 ಎಸೆತಗಳಲ್ಲಿ ಅತಿ ವೇಗದ ತ್ರಿಶಕ

ಹೈದರಾಬಾದ್ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ತನ್ಮಯ್ ಅಗರ್ವಾಲ್ ಕೇವಲ 147 ಎಸೆತಗಳಲ್ಲಿ ಅತಿ ವೇಗದ ತ್ರಿಶಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ. ಇದರೊಂದಿಗೆ ಅಗರ್ವಾಲ್ 2017 ರಲ್ಲಿ 191 ಎಸೆತಗಳಲ್ಲಿ 300 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾದ ಮಾರ್ಕೊ ಮರೈಸ್ ಅವರ ದಾಖಲೆಯನ್ನು ಮುರಿದಿದ್ದಾರೆ. ಹಾಗೆಯೇ ಕೇವಲ 119 ಎಸೆತಗಳಲ್ಲಿ ದ್ವಿಶತಕ ಪೂರ್ಣಗೊಳಿಸುವ ಮೂಲಕ ಭಾರತದ ಮಾಜಿ ನಾಯಕ ರವಿಶಾಸ್ತ್ರಿ ಅವರ 39 ವರ್ಷಗಳ ಹಿಂದಿನ ಅತಿ ವೇಗದ ದ್ವಿಶತಕದ ದಾಖಲೆಯನ್ನು ಮುರಿದಿದ್ದಾರೆ.

ಕಿಶನ್ ದಾಖಲೆ ಉಡೀಸ್

ಈ ಪಂದ್ಯದ ಮೊದಲ ದಿನ ತನ್ಮಯ್ ಅಗರ್ವಾಲ್ 21 ಸಿಕ್ಸರ್‌ಗಳನ್ನು ಬಾರಿಸಿದ್ದು, ಇದು ರಣಜಿ ಟ್ರೋಫಿ ಇತಿಹಾಸದಲ್ಲೇ ದಾಖಲೆಯಾಗಿದೆ. ಭಾರತದ ಪ್ರಮುಖ ದೇಶೀಯ ಪಂದ್ಯಾವಳಿಯ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ಹಿಂದಿನ ದಾಖಲೆ ಇಶಾನ್ ಕಿಶನ್ ಹೆಸರಿನಲ್ಲಿತ್ತು. ಅವರು ಒಂದು ಇನ್ನಿಂಗ್ಸ್‌ನಲ್ಲಿ 14 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇದೀಗ ಈ ದಾಖೆಯ ತನ್ಮಯ್ ಪಾಲಾಗಿದೆ.

ಅಲ್ಲದೆ ಅಗರ್ವಾಲ್, ನಾಯಕ ರಾಹುಲ್ ಸಿಂಗ್ ಗೆಹ್ಲೋಟ್ ಅವರೊಂದಿಗೆ ಮೊದಲ ವಿಕೆಟ್‌ಗೆ ಕೇವಲ 40.2 ಓವರ್‌ಗಳಲ್ಲಿ 440 ರನ್​ಗಳ ಬೃಹತ್ ಜೊತೆಯಾಟವನ್ನು ಹಂಚಿಕೊಂಡರು. ಆದರೆ ನಾಯಕ ರಾಹುಲ್ 105 ಎಸೆತಗಳಲ್ಲಿ 185 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ತನ್ಮಯ್ ಅಗರ್ವಾಲ್ ಪ್ರಸ್ತುತ 160 ಎಸೆತಗಳಲ್ಲಿ 323 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರೆ, ಪಂದ್ಯದಲ್ಲಿ 201.87 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ಅವರು ಇನ್ನಿಂಗ್ಸ್​ನಲ್ಲಿ 21 ಸಿಕ್ಸರ್‌ ಹಾಗೂ 33 ಬೌಂಡರಿಗಳನ್ನು ಬಾರಿಸಿದ್ದಾರೆ.

ಒಂದೇ ದಿನದಲ್ಲಿ 701 ರನ್

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ ತಂಡ 172 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ಆದರೆ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಹೈದರಾಬಾದ್ ತಂಡ ಕೇವಲ 48 ಓವರ್‌ಗಳಲ್ಲಿ 529 ರನ್ ಕಲೆಹಾಕಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದೆ. ಈ ಮೂಲಕ ಇಡೀ ದಿನ ಒಟ್ಟು 701 ರನ್​ಗಳು ದಾಖಲಾಗಿದ್ದು ಈ ಪಂದ್ಯದಲ್ಲಿ ನಡೆದದ್ದು ಸಾಮಾನ್ಯ ಟೆಸ್ಟ್ ಪಂದ್ಯದಲ್ಲೂ ಕಾಣಸಿಗುವುದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Fri, 26 January 24

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ