Ranji Trophy 2024: ಮೊದಲು ದ್ವಿಶತಕ, ಈಗ ತ್ರಿಶತಕ; ರಣಜಿಯಲ್ಲಿ ಮುಂದುವರೆದ ಜಗದೀಸನ್ ಸೂಪರ್ ಶೋ..!

Ranji Trophy 2024: ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್​ನಲ್ಲಿ ತಮಿಳುನಾಡು ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಾರಾಯಣ್ ಜಗದೀಸನ್ ಭರ್ಜರಿ ತ್ರಿಶತಕ ಸಿಡಿಸಿ ಮಿಂಚಿದ್ದಾರೆ. ಚಂಡೀಗಢ ವಿರುದ್ಧ ಕೊಯಮತ್ತೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಜಗದೀಸನ್ 321 ರನ್​ಗಳ ದಾಖಲಯ ಇನ್ನಿಂಗ್ಸ್ ಆಡಿದ್ದಾರೆ.

Ranji Trophy 2024: ಮೊದಲು ದ್ವಿಶತಕ, ಈಗ ತ್ರಿಶತಕ; ರಣಜಿಯಲ್ಲಿ ಮುಂದುವರೆದ ಜಗದೀಸನ್ ಸೂಪರ್ ಶೋ..!
ನಾರಾಯಣ್ ಜಗದೀಸನ್
Follow us
ಪೃಥ್ವಿಶಂಕರ
|

Updated on:Jan 27, 2024 | 8:12 PM

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ (Ranji Trophy 2024) ಸೀಸನ್​ನಲ್ಲಿ ತಮಿಳುನಾಡು ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನಾರಾಯಣ ಜಗದೀಸನ್ (Narayan Jagadeesan) ಭರ್ಜರಿ ತ್ರಿಶತಕ ಸಿಡಿಸಿ ಮಿಂಚಿದ್ದಾರೆ. ಚಂಡೀಗಢ ವಿರುದ್ಧ (Chandigarh vs Tamil Nadu) ಕೊಯಮತ್ತೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಜಗದೀಸನ್ 321 ರನ್​ಗಳ ದಾಖಲಯ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯಕ್ಕೂ ಮೊದಲು ನಡೆದ ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ 245 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದ ಜಗದೀಸನ್, ಇದೀಗ ಚಂಡೀಗಢ ವಿರುದ್ಧ 403 ಎಸೆತಗಳಲ್ಲಿ 23 ಬೌಂಡರಿ ಹಾಗೂ 5 ಸಿಕ್ಸರ್​ಗಳ ಸಹಿತ 321 ರನ್ ಸಿಡಿಸಿದರು. ಜಗದೀಸನ್ ಅವರ ಈ ಅಮೋಘ ಇನ್ನಿಂಗ್ಸ್​ನ ಆಧಾರದ ಮೇಲೆ ತಮಿಳುನಾಡು ತಂಡ ಮೊದಲ ಇನ್ನಿಂಗ್ಸ್​ನಲ್ಲಿ 610 ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

610 ರನ್​ ಕಲೆಹಾಕಿದ ತಮಿಳುನಾಡು

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚಂಡೀಗಢ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 111 ರನ್​ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ತಮಿಳುನಾಡು ತಂಡ ಜಗದೀಸನ್ ಅವರ ತ್ರಿಶತಕ ಹಾಗೂ ಪ್ರದೋಶ್ ರಂಜನ್ ಪಾಲ್ (105 ರನ್), ಬಾಬಾ ಇಂದ್ರಜಿತ್ (123 ರನ್) ಅವರ ಶತಕದ ಆಧಾರದ ಮೇಲೆ 4 ವಿಕೆಟ್ ಕಳೆದುಕೊಂಡು 610 ರನ್​ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ದಿನದಾಟದಂತ್ಯಕ್ಕೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಚಂಡೀಗಢ ತಂಡ ವಿಕೆಟ್ ನಷ್ಟವಿಲ್ಲದೆ 1 ರನ್ ಕಲೆಹಾಕಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದೆ.

Ranji Trophy 2024: ಐಪಿಎಲ್‌ನಲ್ಲಿ ಅನ್​ಸೋಲ್ಡ್; ರಣಜಿಯಲ್ಲಿ 245 ರನ್ ಚಚ್ಚಿದ ಜಗದೀಸನ್

321 ರನ್​ಗಳ ಸ್ಮರಣೀಯ ಇನ್ನಿಂಗ್ಸ್

ಇನ್ನು ಪಂದ್ಯದಲ್ಲಿ 321 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ ಜಗದೀಸನ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕನಿಷ್ಠ ಎರಡು ದ್ವಿಶತಕಗಳನ್ನು ಸಿಡಿಸಿದ ತಮಿಳುನಾಡಿನ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅವರಿಗಿಂತ ಮೊದಲು, WV ರಾಮನ್ 1988-89 ರ ಸೀಸನ್​ನಲ್ಲಿ 3 ದ್ವಿಶತಕಗಳನ್ನು ಸಿಡಿಸಿದ್ದರು. ಹಾಗೆಯೇ 1991-92ರಲ್ಲಿಯೂ ರಾಮನ್ 2 ದ್ವಿಶತಕ ಬಾರಿಸಿದ್ದರು. ನಾರಾಯಣ್ ಅವರಿಗಿಂತ ಮೊದಲು, ಅಭಿನವ್ ಮುಕುಂದ್ ಅವರು 2011-12ರ ರಣಜಿ ಸೀಸನ್​ನಲ್ಲಿ ಎರಡು ದ್ವಿಶತಕಗಳನ್ನು ಸಿಡಿಸಿದ ಸಾಧನೆ ಮಾಡಿದ್ದರು.

ತಮಿಳುನಾಡು ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚಂಡೀಗಢ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 111 ರನ್‌ಗಳಿಗೆ ಆಲೌಟ್ ಆಗಿತ್ತು. ತಂಡದ ಪರ ಕುನಾಲ್ ಮಹಾಜನ್ (28) ಅವರನ್ನು ಬಿಟ್ಟರೆ ಉಳಿದ ಯಾವ ಬ್ಯಾಟ್ಸ್‌ಮನ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ತಮಿಳುನಾಡು ಪರ ಸಂದೀಪ್ ವಾರಿಯರ್ ಮತ್ತು ಆರ್ ಸಾಯಿ ಕಿಶೋರ್ ತಲಾ 3 ವಿಕೆಟ್ ಪಡೆದರು.

ಐಪಿಎಲ್‌ನಲ್ಲಿ ಅನ್​ಸೋಲ್ಡ್

ರಣಜಿಯಲ್ಲಿ ದ್ವಿಶತಕ ಹಾಗೂ ತ್ರಿಶತಕ ಸಿಡಿಸಿ ದಾಖಲೆ ಬರೆದಿರುವ ಜಗದೀಸನ್ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದರು. ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ಅವರನ್ನು ಹರಾಜಿಗೂ ಮುನ್ನ ಫ್ರಾಂಚೈಸಿ ತಂಡದಿಂದ ಬಿಡುಗಡೆ ಮಾಡಿತ್ತು. ಇನ್ನು ಕಳೆದ ಐಪಿಎಲ್​ನಲ್ಲಿ ಕೆಕೆಆರ್ ಪರ 6 ಪಂದ್ಯಗಳನ್ನಾಡಿದ್ದ ಜಗದೀಸನ್ ಕೇವಲ 89 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Sat, 27 January 24

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ