Ranji Trophy 2024: ನಂಬಲಸಾಧ್ಯವಾದರೂ ಇದು ಸತ್ಯ: ಕೇವಲ 2 ರನ್​ಗಳಿಂದ ಅರ್ಧಶತಕ ವಂಚಿತರಾದ ಯುಜ್ವೇಂದ್ರ ಚಹಾಲ್..!

Yuzvendra Chahal: ತಂಡದ ಪರ 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಯುಜ್ವೇಂದ್ರ ಚಹಾಲ್ ಉತ್ತಮ ಪ್ರದರ್ಶನ ನೀಡಿದರು. ಉತ್ತರ ಪ್ರದೇಶ ವಿರುದ್ಧ 152 ಎಸೆತಗಳನ್ನು ಎದುರಿಸಿದ ಚಹಾಲ್ 48 ರನ್‌ಗಳ ಇನಿಂಗ್ಸ್ ಆಡಿದರು. ಯುಜುವೇಂದ್ರ ಚಹಾಲ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡಿದ ದೊಡ್ಡ ಇನ್ನಿಂಗ್ಸ್ ಇದಾಗಿದೆ. ಈ ಇನ್ನಿಂಗ್ಸ್‌ನಲ್ಲಿ ಚಹಾಲ್ 6 ಬೌಂಡರಿಗಳನ್ನು ಸಹ ಬಾರಿಸಿದರು.

Ranji Trophy 2024: ನಂಬಲಸಾಧ್ಯವಾದರೂ ಇದು ಸತ್ಯ: ಕೇವಲ 2 ರನ್​ಗಳಿಂದ ಅರ್ಧಶತಕ ವಂಚಿತರಾದ ಯುಜ್ವೇಂದ್ರ ಚಹಾಲ್..!
ಯುಜ್ವೇಂದ್ರ ಚಹಾಲ್
Follow us
ಪೃಥ್ವಿಶಂಕರ
|

Updated on: Oct 20, 2024 | 9:43 PM

ಒಂದು ಸಮಯದಲ್ಲಿ ಟೀಂ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಗೂಗ್ಲಿ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಇದೀಗ ತಂಡದಲ್ಲಿ ಕಾಣಿಸಿಕೊಂಡು ಸಾಕಷ್ಟು ದಿನಗಳೇ ಕಳೆದುಹೋಗಿವೆ. ಅಪರೂಪಕ್ಕೊಮ್ಮೆ ಚಹಾಲ್ ತಂಡಕ್ಕೆ ಆಯ್ಕೆಯಾದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುತ್ತಿಲ್ಲ. ಈ ಹಿಂದೆ ನಡೆದ ಟಿ20 ವಿಶ್ವಕಪ್ ಇದಕ್ಕೆ ಉದಾಹರಣೆಯಾಗಿದೆ. ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಚಹಾಲ್​ಗೆ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೂ ಛಲ ಬಿಡದ ಚಹಾಲ್ ತಂಡದಲ್ಲಿ ಸ್ಥಾನ ಪಡೆಯುವ ಸಲುವಾಗಿ ವಿದೇಶಿ ಲೀಗ್​ಗಳನ್ನೆಲ್ಲ ಆಡಿ ಅಲ್ಲೂ ಅದ್ಭುತ ಪ್ರದರ್ಶನ ನೀಡಿದ್ದರು. ಆದರೂ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದೀಗ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಹರಿಯಾಣ ಪರ ಆಡುತ್ತಿರುವ ಚಹಾಲ್ ತಮ್ಮ ಬ್ಯಾಟಿಂಗ್‌ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಆದರೆ ಕೇವಲ ಎರಡೇ ಎರಡು ರನ್​ಗಳಿಂದ ಅರ್ಧಶತಕ ವಂಚಿತರಾಗಿದ್ದಾರೆ.

ಬಲಿಷ್ಠ ಸ್ಥಿತಿಯಲ್ಲಿ ಹರಿಯಾಣ

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ದೇಶೀ ಟೂರ್ನಿ ರಣಜಿ ಟ್ರೋಫಿಯಲ್ಲಿ ಹರಿಯಾಣ ಹಾಗೂ ಉತ್ತರ ಪ್ರದೇಶ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಹರಿಯಾಣ ತಂಡ 453 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ ಹಿಮಾಂಶು ರಾಣಾ ಹಾಗೂ ಧೀರು ಸಿಂಗ್ ಶತಕದ ಇನ್ನಿಂಗ್ಸ್ ಆಡಿದರೆ, ನಾಯಕ ಅಂಕಿತ್ ರಾಜೇಶ್ ಕುಮಾರ್ ಹಾಗೂ ಸುಮಿತ್ ಕುಮಾರ್ ಅರ್ಧಶತಕದ ಕಾಣಿಕೆ ನೀಡಿದರು. ಇವರುಗಳ ಜೊತೆಗೆ ಸ್ಪಿನ್ನರ್ ಚಹಾಲ್​ ಕೂಡ ಸ್ಮರಣೀಯ ಇನ್ನಿಂಗ್ಸ್ ಆಡಿದರು.

2 ರನ್​ಗಳಿಂದ ಅರ್ಧಶತಕ ವಂಚಿತ

ತಂಡದ ಪರ 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಯುಜ್ವೇಂದ್ರ ಚಹಾಲ್ ಉತ್ತಮ ಪ್ರದರ್ಶನ ನೀಡಿದರು. ಉತ್ತರ ಪ್ರದೇಶ ವಿರುದ್ಧ 152 ಎಸೆತಗಳನ್ನು ಎದುರಿಸಿದ ಚಹಾಲ್ 48 ರನ್‌ಗಳ ಇನಿಂಗ್ಸ್ ಆಡಿದರು. ಯುಜುವೇಂದ್ರ ಚಹಾಲ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡಿದ ದೊಡ್ಡ ಇನ್ನಿಂಗ್ಸ್ ಇದಾಗಿದೆ. ಈ ಇನ್ನಿಂಗ್ಸ್‌ನಲ್ಲಿ ಚಹಾಲ್ 6 ಬೌಂಡರಿಗಳನ್ನು ಸಹ ಬಾರಿಸಿದರು.

ಬೌಲಿಂಗ್​ನಲ್ಲಿ ಚಹಾಲ್ ವಿಫಲ

ಆದರೆ, ಬೌಲಿಂಗ್ ವಿಷಯಕ್ಕೆ ಬಂದರೆ ಚಹಾಲ್​ಗೆ ವಿಶೇಷತೆ ತೋರಲು ಸಾಧ್ಯವಾಗಲಿಲ್ಲ. ಬೌಲಿಂಗ್‌ನಲ್ಲಿ ಇದುವರೆಗೆ ಹರಿಯಾಣ ಪರ ಒಟ್ಟು 11 ಓವರ್‌ಗಳನ್ನು ಚಹಾಲ್ ಎಸೆದಿದ್ದು, 57 ರನ್ ನೀಡಿದ್ದಾರೆ. ಆದರೆ ಅವರು ಒಂದೇ ಒಂದು ವಿಕೆಟ್ ಪಡೆದಿಲ್ಲ. ಸಹಜವಾಗಿ, ಚಹಾಲ್ ಬೌಲಿಂಗ್‌ನಲ್ಲಿ ತಮ್ಮ ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ ಆದರೆ ಅವರು ಖಂಡಿತವಾಗಿಯೂ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಚಹಾಲ್ ಅವರ 48 ರನ್‌ಗಳ ಕೊಡುಗೆಯೊಂದಿಗೆ ಹರಿಯಾಣ ತಂಡ 453 ರನ್ ಗಳಿಸಿತು. ಇದೇ ಕಾರಣಕ್ಕೆ ಹರಿಯಾಣ ತಂಡ ಯುಪಿ ವಿರುದ್ಧ ಪ್ರಬಲ ಮುನ್ನಡೆ ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್