AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy Final: ಚಾಂಪಿಯನ್ ತಂಡಕ್ಕೆ 2 ಕೋಟಿ ಬಹುಮಾನ ಘೋಷಿಸಿದ ಸಿಎಂ; ಬಿಸಿಸಿಐನಿಂದ ಸಿಕ್ಕಿದೆಷ್ಟು?

Ranji Trophy 2025 -26 Prize Money: 2025-26 ರ ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕವನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿತು. ಹುಬ್ಬಳ್ಳಿಯಲ್ಲಿ ನಡೆದ ಈ ಐತಿಹಾಸಿಕ ಪಂದ್ಯದಲ್ಲಿ, ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಚಾಂಪಿಯನ್ ಆಯಿತು. ಬಿಸಿಸಿಐನಿಂದ 5 ಕೋಟಿ ರೂ. ಬಹುಮಾನ ಪಡೆದ ಜೆ & ಕೆ, ದೇಶೀಯ ಕ್ರಿಕೆಟ್‌ನಲ್ಲಿ ಹೊಸ ಅಧ್ಯಾಯ ಬರೆಯಿತು.

Ranji Trophy Final: ಚಾಂಪಿಯನ್ ತಂಡಕ್ಕೆ 2 ಕೋಟಿ ಬಹುಮಾನ ಘೋಷಿಸಿದ ಸಿಎಂ; ಬಿಸಿಸಿಐನಿಂದ ಸಿಕ್ಕಿದೆಷ್ಟು?
Jammu Kashmir
ಪೃಥ್ವಿಶಂಕರ
|

Updated on:Feb 28, 2026 | 5:41 PM

Share

2025-26 ರ ರಣಜಿ ಟ್ರೋಫಿಯ ( Ranji Trophy 2025-26) ಫೈನಲ್ ಪಂದ್ಯವು ಭಾರತೀಯ ದೇಶೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ಅಧ್ಯಾಯವಾಗಿದೆ. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ಬರೋಬ್ಬರಿ 67 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿದೆ.

ಈ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಮ್ಮು ಮತ್ತು ಕಾಶ್ಮೀರ ತಂಡವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳನ್ನು ಕಲೆಹಾಕಿತು. ಇದಕ್ಕೆ ಉತ್ತರವಾಗಿ, ಕರ್ನಾಟಕ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 293 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಇನ್ನಿಂಗ್ಸ್​ನಲ್ಲಿ 291 ರನ್‌ಗಳ ಮುನ್ನಡೆ ಸಿಕ್ಕಿತು.

ಬಹುಮಾನಗಳ ಸುರಿಮಳೆ

ಜಮ್ಮು ಮತ್ತು ಕಾಶ್ಮೀರ ತಂಡವು ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ರಾಬಲ್ಯ ಕಾಯ್ದುಕೊಂಡು ಮುನ್ನಡೆಯನ್ನು 630 ರನ್‌ಗಳಿಗೆ ಕೊಂಡೊಯ್ಯಿತು. ಅಂತಿಮವಾಗಿ ಪಂದ್ಯವನ್ನು ಡ್ರಾದಲ್ಲಿ ಅಂತ್ಯಗೊಳಿಸಲಾಯಿತು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ 291 ರನ್​ಗಳ ಮುನ್ನಡೆ ಪಡೆದುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಚಾಂಪಿಯನ್ ಪಟ್ಟ ಒಲಿಯಿತು. ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿರುವ ಜೆಕೆ ತಂಡಕ್ಕೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬರೋಬ್ಬರಿ 2 ಕೋಟ ರೂ. ಬಹುಮಾನ ಘೋಷಿಸಿದ್ದಾರೆ. ಇದರ ಜೊತೆಗೆ ಬಿಸಿಸಿಐನಿಂದಲೂ ಕೋಟಿ ಮೊತ್ತದ ಬಹುಮಾನ ಸಿಕ್ಕಿದೆ.

ರಣಜಿ ಟ್ರೋಫಿ ಚಾಂಪಿಯನ್ ಆಗಿರುವ ಜಮ್ಮುಕಾಶ್ಮಿರ ತಂಡ ಬಿಸಿಸಿಐನಿಂದ 5 ಕೋಟಿ ರೂ. ಬಹುಮಾನವನ್ನು ಪಡೆಯಲಿದೆ. ಹಾಗೆಯೇ ರನ್ನರ್ ಅಪ್ ಆಗಿರುವ ಕರ್ನಾಟಕ ತಂಡ 3 ಕೋಟಿ ರೂಗಳನ್ನು ಪಡೆಯಲಿದೆ. ಈ ಬಹುಮಾನದ ಹಣವು ತಂಡದ ಕಠಿಣ ಪರಿಶ್ರಮವನ್ನು ಗುರುತಿಸುವುದಲ್ಲದೆ, ಆಟಗಾರರಿಗೆ ಪ್ರೋತ್ಸಾಹವನ್ನೂ ನೀಡುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Sat, 28 February 26

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ