AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

41ನೇ ಶತಕ ಸಿಡಿಸಿದ ಅಜಿಂಕ್ಯ ರಹಾನೆ

Ranji Trophy 2025: ಮುಂಬೈ ತಂಡದ ನಾಯಕ ಅಜಿಂಕ್ಯ ರಹಾನೆ ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಅದು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ರಹಾನೆ ಅವರ 41ನೇ ಸೆಂಚುರಿ ಎಂಬುದು ವಿಶೇಷ. ಈ ಶತಕದ ನೆರವಿನೊಂದಿಗೆ ಮುಂಬೈ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 339 ರನ್ ಕಲೆಹಾಕಿದೆ.

41ನೇ ಶತಕ ಸಿಡಿಸಿದ ಅಜಿಂಕ್ಯ ರಹಾನೆ
Ajinkya Rahane
ಝಾಹಿರ್ ಯೂಸುಫ್
|

Updated on: Feb 11, 2025 | 12:53 PM

Share

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಆಕರ್ಷಕ ಶತಕ ಬಾರಿಸಿದ್ದಾರೆ. ಹರ್ಯಾಣ ವಿರುದ್ಧದ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮುಂಬೈ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಹಾನೆ 180 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ 108 ರನ್ ಬಾರಿಸಿ ಮಿಂಚಿದ್ದಾರೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 315 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಹರ್ಯಾಣ ತಂಡವು ನಾಯಕ ಅಂಕಿತ್ ಕುಮಾರ್ (136) ಅವರ ಶತಕದ ನೆರವಿನಿಂದ 301 ರನ್ ಕಲೆಹಾಕಿತು.

ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಮುಂಬೈ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಆಡಿದ ಸೂರ್ಯಕುಮಾರ್ ಯಾದವ್ ಅದ್ಭುತ ಇನಿಂಗ್ಸ್ ಆಡಿದರು.

ಅದರಲ್ಲೂ ಬಿರುಸಿನ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟಿದ ಸೂರ್ಯಕುಮಾರ್ ಯಾದವ್ 86 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 70 ರನ್ ಬಾರಿಸಿದರು. ಮತ್ತೊಂದೆಡೆ ಅಜಿಂಕ್ಯ ರಹಾನೆ 180 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ 108 ರನ್ ಕಲೆಹಾಕಿದರು. ಈ ಭರ್ಜರಿ ಶತಕದ ನೆರವಿನಿಂದ ಮುಂಬೈ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 339 ರನ್ ಕಲೆಹಾಕಿ ಆಲೌಟ್ ಆಗಿದೆ.

ಅದರಂತೆ ಇದೀಗ ಹರ್ಯಾಣ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 354 ರನ್​ಗಳ ಗುರಿ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್​ಗೇರಲಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಹರ್ಯಾಣ ಪ್ಲೇಯಿಂಗ್ 11: ಲಕ್ಷ್ಯ ದಲಾಲ್ , ಯಶ್ ವರ್ಧನ್ ದಲಾಲ್ , ಅಂಕಿತ್ ಕುಮಾರ್ (ನಾಯಕ) , ಹಿಮಾಂಶು ರಾಣಾ , ನಿಶಾಂತ್ ಸಿಂಧು , ರೋಹಿತ್ ಪರ್ಮೋದ್ ಶರ್ಮಾ ( ವಿಕೆಟ್ ಕೀಪರ್ ) , ಜಯಂತ್ ಯಾದವ್ , ಸುಮಿತ್ ಕುಮಾರ್ , ಅನ್ಶುಲ್ ಕಾಂಬೋಜ್ , ಅನುಜ್ ಥಕ್ರಾಲ್ , ಅಜಿತ್ ಚಹಲ್.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಮುಂಬೈ ಪ್ಲೇಯಿಂಗ್ 11: ಆಯುಷ್ ಮ್ಹಾತ್ರೆ , ಆಕಾಶ್ ಆನಂದ್ ( ವಿಕೆಟ್ ಕೀಪರ್ ) , ಸಿದ್ಧೇಶ್ ಲಾಡ್ , ಅಜಿಂಕ್ಯ ರಹಾನೆ ( ನಾಯಕ ) , ಸೂರ್ಯಕುಮಾರ್ ಯಾದವ್ , ಶಿವಂ ದುಬೆ , ಶಮ್ಸ್ ಮುಲಾನಿ , ಶಾರ್ದೂಲ್ ಠಾಕೂರ್ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ತಿ , ರಾಯ್ಸ್​ಟನ್ ಡಯಾಸ್.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ