Ranji Trophy: ರವೀಂದ್ರ ಜಡೇಜಾಗೆ ತಂಡದ ನಾಯಕತ್ವ; ಖಾಯಂ ನಾಯಕನಿಗೆ ವಿಶ್ರಾಂತಿ

Ravindra Jadeja: ವಾಸ್ತವವಾಗಿ ಸೌರಾಷ್ಟ್ರ ತಂಡದ ಪೂರ್ಣಾವಧಿ ನಾಯಕತ್ವವನ್ನು ಜಯದೇವ್ ಉನಾದ್ಕಟ್ ನಿರ್ವಹಿಸುತ್ತಿದ್ದಾರೆ. ಆದರೆ ಚೆನ್ನೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಜಡೇಜಾ ತಂಡದ ನಾಯಕತ್ವ ವಹಿಸಲಿದ್ದಾರೆ.

Ranji Trophy: ರವೀಂದ್ರ ಜಡೇಜಾಗೆ ತಂಡದ ನಾಯಕತ್ವ; ಖಾಯಂ ನಾಯಕನಿಗೆ ವಿಶ್ರಾಂತಿ
ರವೀಂದ್ರ ಜಡೇಜಾ
Follow us
| Updated By: ಪೃಥ್ವಿಶಂಕರ

Updated on:Jan 23, 2023 | 3:06 PM

ಇಂಜುರಿಯಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದ (Team India) ಹೊರಗಿದ್ದ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja) ಈಗ ಸಂಪೂರ್ಣ ಫಿಟ್ ಆಗಿದ್ದು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುತ್ತಿದ್ದಾರೆ. ಏಷ್ಯಾಕಪ್ ವೇಳೆ ಮೊಣಕಾಲು ನೋವಿಗೆ ಒಳಗಾಗಿದ್ದ ಜಡೇಜಾ ಈ ಇಂಜುರಿಯಿಂದಾಗಿ ಟಿ20 ವಿಶ್ವಕಪ್ (T20 World Cup) ಕೂಡ ಆಡಿರಲಿಲ್ಲ. ಆದರೆ ಈಗ ಸಂಪೂರ್ಣ ಫಿಟ್ ಆಗಿರುವ ಜಡೇಜಾ, ಆಸೀಸ್ ವಿರುದ್ಧದ 4 ಟೆಸ್ಟ್ ಪಂದ್ಯಗಳ ಸರಣಿಗೆ ಪೂರ್ವ ತಯಾರಿ ಆರಂಭಿಸಿದ್ದಾರೆ. ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ರಣಜಿ ಆಡಲು ಚಿಂತಿಸಿರುವ ಜಡೇಜಾ, ಮಂಗಳವಾರದಿಂದ ತಮಿಳುನಾಡು ವಿರುದ್ಧ ಆರಂಭವಾಗಲಿರುವ ರಣಜಿ ಟ್ರೋಫಿ (Ranji Trophy) ಪಂದ್ಯದಲ್ಲಿ ಸೌರಾಷ್ಟ್ರ ಪರ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯಕ್ಕೆ ಜಡೇಜಾ ಅವರನ್ನು ಸೌರಾಷ್ಟ್ರ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಖಾಯಂ ನಾಯಕ ಜಯದೇವ್ ಉನಾದ್ಕಟ್​ಗೆ (Jaydev Unadkat) ಈ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.

ಆಸೀಸ್ ವಿರುದ್ಧದ ಟೆಸ್ಟ್ ಸರಣಿಗಾಗಿ ವಿಶ್ರಾಂತಿ

ವಾಸ್ತವವಾಗಿ ಸೌರಾಷ್ಟ್ರ ತಂಡದ ಪೂರ್ಣಾವಧಿ ನಾಯಕತ್ವವನ್ನು ಜಯದೇವ್ ಉನಾದ್ಕಟ್ ನಿರ್ವಹಿಸುತ್ತಿದ್ದಾರೆ. ಆದರೆ ಚೆನ್ನೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಜಡೇಜಾ ತಂಡದ ನಾಯಕತ್ವ ವಹಿಸಲಿದ್ದಾರೆ. ಮುಂಬರುವ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಜಯದೇವ್​ಗೆ ವಿಶ್ರಾಂತಿ ನೀಡಲು ಚಿಂತಿಸಲಾಗಿದೆ. ಅಲ್ಲದೆ ಬಾಂಗ್ಲಾದೇಶ ಪ್ರವಾಸದ ನಂತರ ಸತತ ಮೂರು ರಣಜಿ ಟ್ರೋಫಿ ಪಂದ್ಯಗಳನ್ನು ಆಡಿರುವ ಜಯದೇವ್​ಗೆ ವಿಶ್ರಾಂತಿ ಅಗತ್ಯವಿರುವುದರಿಂದ ಈ ಕ್ರಮಕೈಗೊಳ್ಳಲಾಗಿದೆ. ಮತ್ತೊಂದೆಡೆ, ಜಡೇಜಾ ಗಾಯದ ಕಾರಣ ಇಷ್ಟು ದಿನ ಕ್ರಿಕೆಟ್ ಆಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ತಮಿಳುನಾಡು ವಿರುದ್ಧದ ರಣಜಿ ಪಂದ್ಯದಿಂದ ಕ್ರಿಕೆಟ್​ಗೆ ಮತ್ತೆ ಎಂಟ್ರಿಕೊಡುತ್ತಿರುವ ಜಡೇಜಾ ತಮ್ಮ ಹಳೆಯ ಫಾರ್ಮ್​ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ.

Ravindra Jadeja: ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಚೆನ್ನೈನಲ್ಲಿ ಅಖಾಡಕ್ಕಿಳಿಯಲಿದ್ದಾರೆ ರವೀಂದ್ರ ಜಡೇಜಾ

ಜಡೇಜಾ ಮುಂದೆ ದೊಡ್ಡ ಸವಾಲು

ಜಯದೇವ್ ಉನಾದ್ಕಟ್ ಅನುಪಸ್ಥಿತಿಯನ್ನು ನಿಭಾಯಿಸುವುದು ರವೀಂದ್ರ ಜಡೇಜಾ ಅಷ್ಟು ಸುಲಭ ಕೆಲಸವಾಗಿಲ್ಲ. ವಾಸ್ತವವಾಗಿ ಜಯದೇವ್ ಸೌರಾಷ್ಟ್ರ ತಂಡದ ಬೆನ್ನೇಲುಬಾಗಿದ್ದು, ಈ ಆಟಗಾರ ಈಗ ಆಡಿರುವ 3 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿದ್ದಾರೆ. ಈ ಕಾರಣದಿಂದಾಗಿ ಸೌರಾಷ್ಟ್ರ ಬಿ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಈಗ ಜಯದೇವ್ ವಿಶ್ರಾಂತಿ ಪಡೆಯುತ್ತಿರುವುದರಿಂದ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೂ ಮೊದಲು ಲಯವನ್ನು ಕಂಡುಕೊಳ್ಳಲು ಜಡೇಜಾ ತನ್ನನ್ನು ತಾನು ಸಾಬೀತುಪಡಿಸಬೇಕಾಗಿದೆ. ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Mon, 23 January 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ