AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 10 ವಿಕೆಟ್ ಪಡೆದ 33 ವರ್ಷದ ಬೌಲರ್! ಗೆಲುವಿನೊಂದಿಗೆ ಶುಭಾರಂಭ ಮಾಡಿದ ಜಮ್ಮು ಮತ್ತು ಕಾಶ್ಮೀರ

Ranji Trophy: ಜಮ್ಮು ಮತ್ತು ಕಾಶ್ಮೀರದ ಗೆಲುವಿನಲ್ಲಿ 33 ವರ್ಷದ ಸ್ಪಿನ್ನರ್ ಪರ್ವೇಜ್ ರಸೂಲ್ 85 ರನ್‌ಗಳಿಗೆ 10 ಬ್ಯಾಟ್ಸ್‌ಮನ್‌ಗಳನ್ನು ಬಲಿಪಶು ಮಾಡಿದರು.

Ranji Trophy: 10 ವಿಕೆಟ್ ಪಡೆದ 33 ವರ್ಷದ ಬೌಲರ್! ಗೆಲುವಿನೊಂದಿಗೆ ಶುಭಾರಂಭ ಮಾಡಿದ ಜಮ್ಮು ಮತ್ತು ಕಾಶ್ಮೀರ
ಜಮ್ಮು ಮತ್ತು ಕಾಶ್ಮೀರ ತಂಡ
TV9 Web
| Edited By: |

Updated on: Feb 20, 2022 | 3:05 PM

Share

ರಣಜಿ ಟ್ರೋಫಿ (Ranji Trophy)ಯಲ್ಲಿ ತಂಡಗಳ ಪ್ರದರ್ಶನದ ಫಲಿತಾಂಶಗಳು ಬರಲಾರಂಭಿಸಿವೆ. ಈ ಸಂಚಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu and Kashmir)ಕೂಡ ಪ್ರಬಲ ಗೆಲುವಿನೊಂದಿಗೆ ಟೂರ್ನಿಯಲ್ಲಿ ತನ್ನ ಪಯಣ ಆರಂಭಿಸಿದೆ. ಜಮ್ಮು ಮತ್ತು ಕಾಶ್ಮೀರ ತಮ್ಮ ಮೊದಲ ಪಂದ್ಯದಲ್ಲಿ ಪುದುಚೇರಿ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಅಂದಹಾಗೆ, ಜಮ್ಮು ಮತ್ತು ಕಾಶ್ಮೀರದ ಈ ದೊಡ್ಡ ಗೆಲುವಿಗೆ ತಂಡದ 33ರ ಹರೆಯದ ಬೌಲರ್ ಪರ್ವೇಜ್ ರಸೂಲ್ ಕಾರಣ. ಈ ಪಂದ್ಯದಲ್ಲಿ ಅವರು 10 ವಿಕೆಟ್ ಕಬಳಿಸುವ ಮೂಲಕ ಪುದುಚೇರಿ ಸೋಲಿಗೆ ಪ್ರಮುಖ ಕಾರಣರಾದರು. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಎದುರು ಪುದುಚೇರಿ 42 ರನ್‌ಗಳ ಗುರಿಯನ್ನು ನೀಡಿದ್ದು, ಅದನ್ನು 2 ವಿಕೆಟ್ ಕಳೆದುಕೊಂಡು ಸಾಧಿಸಿದೆ. ಪರ್ವೇಜ್ ರಸೂಲ್ ನೇತೃತ್ವದ J&K ತಂಡದ ಬೌಲಿಂಗ್, ಎರಡನೇ ಇನ್ನಿಂಗ್ಸ್‌ನಲ್ಲಿ ಪುದುಚೇರಿ ಬ್ಯಾಟ್ಸ್‌ಮನ್‌ಗಳಿಗೆ ರನ್​ ಗಳಿಸಲು ಕಷ್ಟಪಡುವಂತೆ ಮಾಡಿತು.

ಜಮ್ಮು ಮತ್ತು ಕಾಶ್ಮೀರಕ್ಕೆ 8 ವಿಕೆಟ್‌ಗಳ ಜಯ

ಪಿಕೆ ಡೋಗ್ರಾ ಅವರ ಶತಕದ ನೆರವಿನಿಂದ ಪುದುಚೇರಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 343 ರನ್ ಗಳಿಸಿತು. ಉತ್ತರವಾಗಿ ಜಮ್ಮು ಮತ್ತು ಕಾಶ್ಮೀರ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 426 ರನ್ ಗಳಿಸಿ ಪುದುಚೇರಿ ವಿರುದ್ಧ 83 ರನ್ ಮುನ್ನಡೆ ಸಾಧಿಸಿತು. ಜಮ್ಮು ಮತ್ತು ಕಾಶ್ಮೀರದಿಂದ ಮೊದಲ ಇನ್ನಿಂಗ್ಸ್‌ನಲ್ಲಿ ಅಬ್ದುಲ್ ಸಮದ್ ತ್ವರಿತ ಶತಕ ಗಳಿಸಿದರು.

ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಆಡಿದ ಪುದುಚೇರಿ ಕೇವಲ 124 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಗೆಲ್ಲಲು 42 ರನ್‌ಗಳ ಸರಳ ಗುರಿ ಸಿಕ್ಕಿತು. ಈ ಗೆಲುವಿನ ಗುರಿಯನ್ನು ಜಮ್ಮು ತಂಡ 2 ವಿಕೆಟ್ ಕಳೆದುಕೊಂಡು 8 ವಿಕೆಟ್ ಗಳಿಂದ ಗೆದ್ದುಕೊಂಡಿತು.

ರಸೂಲ್​ಗೆ 10 ವಿಕೆಟ್

ಜಮ್ಮು ಮತ್ತು ಕಾಶ್ಮೀರದ ಗೆಲುವಿನಲ್ಲಿ 33 ವರ್ಷದ ಸ್ಪಿನ್ನರ್ ಪರ್ವೇಜ್ ರಸೂಲ್ 85 ರನ್‌ಗಳಿಗೆ 10 ಬ್ಯಾಟ್ಸ್‌ಮನ್‌ಗಳನ್ನು ಬಲಿಪಶು ಮಾಡಿದರು. ಇದರಲ್ಲಿ ಅವರು ಮೊದಲ ಇನ್ನಿಂಗ್ಸ್‌ನಲ್ಲಿ 56 ರನ್‌ಗಳಿಗೆ 4 ವಿಕೆಟ್ ಪಡೆದರು. ನಂತರ 2ನೇ ಇನ್ನಿಂಗ್ಸ್​ನಲ್ಲಿ 29 ರನ್ ನೀಡಿ 6 ಬ್ಯಾಟ್ಸ್‌ಮನ್‌ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು.

ಪರ್ವೇಜ್ ರಸೂಲ್ ಹೊರತುಪಡಿಸಿ, ಭಾರತದ ವೇಗದ ಬೌಲರ್ ಉಮ್ರಾನ್ ಮಲಿಕ್ ತಂಡದ ಎರಡನೇ ಯಶಸ್ವಿ ಬೌಲರ್ ಆದರು. ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಸೇರಿದಂತೆ ಪಂದ್ಯದಲ್ಲಿ 4 ವಿಕೆಟ್ ಪಡೆದರು. ಅಬ್ದುಲ್ ಸಮದ್ ಅವರಂತೆ, ಉಮ್ರಾನ್ ಮಲಿಕ್ ಕೂಡ ಐಪಿಎಲ್ 2022 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಫ್ರಾಂಚೈಸಿ ಅವರನ್ನು 4 ಕೋಟಿ ರೂ.ಗೆ ಉಳಿಸಿಕೊಂಡಿದೆ. ಪರ್ವೇಜ್ ರಸೂಲ್ ಕೂಡ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಪರ ಆಡಿದ್ದಾರೆ. ಆದರೆ, ಅವರು ಈ ಬಾರಿಯ ಐಪಿಎಲ್‌ನಲ್ಲಿ ಆಡುವುದಿಲ್ಲ.

ಇದನ್ನೂ ಓದಿ:Ranji Trophy: ರಣಜಿ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್​ಗಳು ಯಾರು ಗೊತ್ತಾ?

Follow Us
TV9 Web
TV9 Web

TV9 Kannada

Read More
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪ್ರಸಂಗ ಬಿಚ್ಚಿಟ್ಟ ಸಿದ್ದರಾಮಯ್ಯ
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪ್ರಸಂಗ ಬಿಚ್ಚಿಟ್ಟ ಸಿದ್ದರಾಮಯ್ಯ
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ತುರ್ತು ಸುದ್ದಿಗೋಷ್ಠಿ ಲೈವ್