AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ ಸಿಡಿಸಿದ ಮಯಾಂಕ್ ಅಗರ್ವಾಲ್

Ranji Trophy 2025: ಕರ್ನಾಟಕ ತಂಡವು ಈ ಬಾರಿಯ ರಣಜಿ ಟೂರ್ನಿಯಲ್ಲಿ ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಕೇರಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದರೆ, ಗೋವಾ, ಸೌರಾಷ್ಟ್ರ ಹಾಗೂ ಮಹಾರಾಷ್ಟ್ರ ವಿರುದ್ಧದ ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಇನ್ನು ತನ್ನ ಮುಂದಿನ ಪಂದ್ಯದಲ್ಲಿ ಚಂಡೀಗಢ್ ತಂಡವನ್ನು ಎದುರಿಸಲಿದೆ.

ಭರ್ಜರಿ ಸೆಂಚುರಿ ಸಿಡಿಸಿದ ಮಯಾಂಕ್ ಅಗರ್ವಾಲ್
Mayank Agarwal
ಝಾಹಿರ್ ಯೂಸುಫ್
|

Updated on: Nov 12, 2025 | 10:53 AM

Share

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಎಲೈಟ್ ಗ್ರೂಪ್-ಬಿ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಈ ಪಂದ್ಯವನ್ನು ಡ್ರಾನಲ್ಲಿ ಅಂತ್ಯಗೊಳಿಸುವಲ್ಲಿ ಕರ್ನಾಟಕ ತಂಡ ಯಶಸ್ವಿಯಾಗಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 311 ರನ್ ಕಲೆಹಾಕಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಮಹಾರಾಷ್ಟ್ರ ತಂಡವನ್ನು 300 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾದರು. ಕರ್ನಾಟಕ ಪರ ಉತ್ತಮ ಸ್ಪಿನ್ ದಾಳಿ ಸಂಘಟಿಸಿದ ಶ್ರೇಯಸ್ ಗೋಪಾಲ್ 35 ಓವರ್​ಗಳಲ್ಲಿ 70 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದಾದ ಬಳಿಕ 11 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ ಮಯಾಂಕ್ 249 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 103 ರನ್ ಬಾರಿಸಿದರು.

ಇನ್ನು ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಭಿನವ್ ಮನೋಹರ್ 161 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 96 ರನ್ ಬಾರಿಸಿ ಔಟಾದರು. ಅಲ್ಲದೆ ನಾಲ್ಕನೇ ದಿನದಾಟದ ಅಂತ್ಯದವರೆಗೆ ಬ್ಯಾಟಿಂಗ್ ಮುಂದುವರೆಸಿದ ಕರ್ನಾಟಕ ತಂಡವು 8 ವಿಕೆಟ್ ಕಳೆದುಕೊಂಡು 309 ರನ್ ಕಲೆಹಾಕಿತು. ಈ ಮೂಲಕ ಕರ್ನಾಟಕ ತಂಡವು ಈ ಪಂದ್ಯವನ್ನು ಡ್ರಾನಲ್ಲಿ ಅಂತ್ಯಗೊಳಿಸಿದರು.

  • ಮಹಾರಾಷ್ಟ್ರ ಪ್ಲೇಯಿಂಗ್ 11:
  • ಪೃಥ್ವಿ ಶಾ
  • ಅರ್ಶಿನ್ ಕುಲಕರ್ಣಿ
  • ಸಿದ್ಧೇಶ್ ವೀರ್
  • ಅಂಕಿತ್ ಬಾವ್ನೆ (ನಾಯಕ) ,
  • ಸೌರಭ್ ನವಲೆ (ವಿಕೆಟ್ ಕೀಪರ್) ,
  • ಸಚಿನ್ ದಾಸ್
  • ಜಲಜ್ ಸಕ್ಸೇನಾ
  • ವಿಕಿ ಓಸ್ಟ್ವಾಲ್
  • ಮುಖೇಶ್ ಚೌಧರಿ
  • ರಾಮಕೃಷ್ಣ ಘೋಷ್
  • ರಜನೀಶ್ ಗುರ್ಬಾನಿ.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ಅನಗತ್ಯ ದಾಖಲೆ ಸರಿಗಟ್ಟಿದ ಬಾಬರ್ ಆಝಂ

  • ಕರ್ನಾಟಕ ಪ್ಲೇಯಿಂಗ್ 11:
  • ಮಾಯಾಂಕ್ ಅಗರ್ವಾಲ್ (ನಾಯಕ )
  • ಅನೀಶ್ ಕೆ.ವಿ.
  • ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) ,
  • ಕರುಣ್ ನಾಯರ್
  • ಸ್ಮರಣ್ ರವಿಚಂದ್ರನ್
  • ಅಭಿನವ್ ಮನೋಹರ್
  • ಶ್ರೇಯಸ್ ಗೋಪಾಲ್
  • ಮೊಹ್ಸಿನ್ ಖಾನ್
  • ವಿದ್ವತ್ ಕಾವೇರಪ್ಪ
  • ಅಭಿಲಾಷ್ ಶೆಟ್ಟಿ
  • ಮುರಳೀಧರ ವೆಂಕಟೇಶ್

ದ್ವಿತೀಯ ಸ್ಥಾನದಲ್ಲಿ ಕರ್ನಾಟಕ:

ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಎಲೈಟ್ ಗ್ರೂಪ್-ಬಿನಲ್ಲಿ ಕಣಕ್ಕಿಳಿಯುತ್ತಿರುವ ಕರ್ನಾಟಕ ತಂಡವು ಆಡಿರುವ 4 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಮೂರು ಡ್ರಾಗಳೊಂದಿಗೆ ಒಟ್ಟು 14 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ. ಹಾಗೆಯೇ ಮೊದಲ ಸ್ಥಾನದಲ್ಲಿ ಮಧ್ಯಪ್ರದೇಶ್ ತಂಡ ಕಾಣಿಸಿಕೊಂಡಿದೆ.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು