Ranji Trophy: ಚೊಚ್ಚಲ ಪಂದ್ಯದಲ್ಲೇ ಬ್ಯಾಕ್ ಟು ಬ್ಯಾಕ್ ಸೆಂಚುರಿ! ರಣಜಿಯಲ್ಲಿ ದಾಖಲೆ ಬರೆದ ಯಶ್ ಧುಲ್

Yash Dhull: ದೆಹಲಿ ಪರ ಆಡುತ್ತಿರುವ ಯಶ್ ತಮ್ಮ ರಣಜಿ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದಾರೆ. ತಮಿಳುನಾಡು ವಿರುದ್ಧದ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 113 ರನ್ ಗಳಿಸಿದ್ದ ಯಶ್, ನಂತರ ಎರಡನೇ ಇನ್ನಿಂಗ್ಸ್‌ನಲ್ಲೂ ಶತಕ ಸಿಡಿಸಿದರು.

Ranji Trophy: ಚೊಚ್ಚಲ ಪಂದ್ಯದಲ್ಲೇ ಬ್ಯಾಕ್ ಟು ಬ್ಯಾಕ್ ಸೆಂಚುರಿ! ರಣಜಿಯಲ್ಲಿ ದಾಖಲೆ ಬರೆದ ಯಶ್ ಧುಲ್
ಯಶ್ ಧುಲ್
Follow us
TV9 Web
| Updated By: ಪೃಥ್ವಿಶಂಕರ

Updated on:Feb 20, 2022 | 2:33 PM

19 ವರ್ಷದೊಳಗಿನವರ ಟಿ20 ವಿಶ್ವಕಪ್ ಗೆದ್ದ ನಾಯಕ (Under 19 World Champion captain) ಯಶ್ ಧುಲ್ (Yash Dhull) ರಣಜಿ ಟ್ರೋಫಿ (Ranji Trophy 2022)ಯಲ್ಲಿ ಮಿಂಚು ಹರಿಸುತ್ತಿದ್ದಾರೆ. ದೆಹಲಿ ಪರ ಆಡುತ್ತಿರುವ ಯಶ್ ತಮ್ಮ ರಣಜಿ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದಾರೆ. ತಮಿಳುನಾಡು ವಿರುದ್ಧದ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 113 ರನ್ ಗಳಿಸಿದ್ದ ಯಶ್, ನಂತರ ಎರಡನೇ ಇನ್ನಿಂಗ್ಸ್‌ನಲ್ಲೂ ಶತಕ ಸಿಡಿಸಿದರು. ಈ ಮೂಲಕ ರಣಜಿ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಯಶ್ ಧುಲ್ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 113 ರನ್ ಗಳಿಸಿದ್ದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ ಅವರು 16 ಬೌಂಡರಿಗಳನ್ನು ಬಾರಿಸಿದರು. ಜೊತೆಗೆ ಯಶ್ ಧುಲ್ ಅರ್ಧಶತಕ ಪೂರೈಸಲು 57 ಎಸೆತಗಳನ್ನು ತೆಗೆದುಕೊಂಡರು. ಬಲಗೈ ಬ್ಯಾಟ್ಸ್‌ಮನ್ ಯಶ್ ಧುಲ್ 133 ಎಸೆತಗಳಲ್ಲಿ ಚೊಚ್ಚಲ ರಣಜಿ ಶತಕ ಪೂರೈಸಿದರು. ಸಾಮಾನ್ಯವಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುವ ಯಶ್ ಧುಲ್ ಅವರನ್ನು ಡೆಲ್ಲಿ ನಾಯಕ ಪ್ರದೀಪ್ ಸಾಂಗ್ವಾನ್ ವಿಶ್ವಾಸ ವ್ಯಕ್ತಪಡಿಸಿ ಯಶ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಿದ್ದರು. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಧುಲ್ ಯಶಸ್ವಿಯಾಗಿದ್ದಾರೆ.

ಯಶ್ ಧುಲ್ ದಾಖಲೆ

ಯಶ್ ಧುಲ್‌ಗಿಂತ ಮೊದಲು, ತಮ್ಮ ಚೊಚ್ಚಲ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ಇಬ್ಬರು ಬ್ಯಾಟ್ಸ್‌ಮನ್‌ಗಳು ಮಾತ್ರ ಇದ್ದಾರೆ. 1952-53ರ ಋತುವಿನಲ್ಲಿ ಗುಜರಾತ್‌ ಪರ ಪಾದಾರ್ಪಣೆ ಮಾಡಿದ ಅನುಭವಿ ಆಟಗಾರ ನಾರಿ ಕಂಟ್ರಾಕ್ಟರ್ ಈ ಸಾಧನೆ ಮಾಡಿದ ಮೊದಲ ಆಟಗಾರರಾಗಿದ್ದರು. ಮೊದಲ ಇನಿಂಗ್ಸ್‌ನಲ್ಲಿ 152 ರನ್ ಗಳಿಸಿದ್ದರು. ನಂತರ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರ ಬ್ಯಾಟ್‌ನಿಂದ 102 ರನ್ ಹರಿದುಬಂದವು. ಅದೇ ಸಮಯದಲ್ಲಿ, ವಿರಾಗ್ ಆವ್ಟೆ ಅವರು 2012-13 ರಲ್ಲಿ ಮಹಾರಾಷ್ಟ್ರ ಪರ ತಮ್ಮ ಚೊಚ್ಚಲ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕಗಳನ್ನು ಗಳಿಸಿದರು. ಮೊದಲ ಇನಿಂಗ್ಸ್‌ನಲ್ಲಿ 126 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 112 ರನ್ ಗಳಿಸಿದ್ದಾರೆ.

ಇದನ್ನೂ ಓದಿ:Yash Dhull: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

Published On - 2:14 pm, Sun, 20 February 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ