ತಾಲಿಬಾನ್ ವಿರುದ್ಧ ತಿರುಗಿ ನಿಂತ ರಶೀದ್ ಖಾನ್

Rashid Khan: ಅಫ್ಘಾನಿಸ್ತಾನ್ ಟಿ20 ತಂಡದ ನಾಯಕ ರಶೀದ್ ಖಾನ್ ತಾಲಿಬಾನ್ ಸರ್ಕಾರ ನಿರ್ಧಾರಗಳ ಬಗ್ಗೆ ಅಸಮಾಧಾನ ಹೊರಹಾಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಫ್ಘಾನ್ ಧ್ವಜವನ್ನು ಬದಲಿಸಲು ಮುಂದಾಗಿದ್ದ ತಾಲಿಬಾನ್​ ವಿರುದ್ಧ ರಶೀದ್ ಖಾನ್ ಆಕ್ರೋಶ ಹೊರಹಾಕಿದ್ದರು.

ತಾಲಿಬಾನ್ ವಿರುದ್ಧ ತಿರುಗಿ ನಿಂತ ರಶೀದ್ ಖಾನ್
Rashid Khan
Follow us
ಝಾಹಿರ್ ಯೂಸುಫ್
|

Updated on: Dec 05, 2024 | 8:49 AM

ಅಫ್ಘಾನಿಸ್ತಾನ್ ಮಹಿಳೆಯರಿಗೆ ನರ್ಸಿಂಗ್ ಶಿಕ್ಷಣವನ್ನು ನಿಷೇಧಿಸಿರುವ ತಾಲಿಬಾನ್ ಕ್ರಮವನ್ನು ಅಫ್ಘಾನ್ ಕ್ರಿಕೆಟಿಗ ರಶೀದ್ ಖಾನ್ ಖಂಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆಕ್ರೋಶ ಹೊರಹಾಕಿರುವ ರಶೀದ್ ಖಾನ್, ತಾಯ್ನಾಡಿನಲ್ಲಿ ಮಹಿಳೆಯರಿಗೆ ವಿಧಿಸಿರುವ ನಿರ್ಬಂಧಗಳ ಬಗ್ಗೆ ತಮ್ಮ ಕಳವಳ ಮತ್ತು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ತಾಲಿಬಾನ್ ಸರ್ಕಾರ ಸಚಿವ ಹಿಬತುಲ್ಲಾ ಅಖುಂದ್ಜಾದಾ ಅವರು ಡಿಸೆಂಬರ್ 2 ರಂದು ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವೈದ್ಯಕೀಯ ತರಬೇತಿಯನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿದ್ದರು.

ಈ ಆದೇಶದದಲ್ಲಿ ಇನ್ಮುಂದೆ ಮಹಿಳೆಯರು ಶುಶ್ರೂಷಕಿ ಹಾಗೂ ನರ್ಸಿಂಗ್ ಶಿಕ್ಷಣವನ್ನು ಪಡೆಯುವಂತಿಲ್ಲ ಎಂದು ತಿಳಿಸಲಾಗಿತ್ತು.  ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಶೀದ್ ಖಾನ್, ಎಲ್ಲಾ ಕ್ಷೇತ್ರಗಳಲ್ಲಿ, ವಿಶೇಷವಾಗಿ ಆರೋಗ್ಯ ರಕ್ಷಣೆಯಲ್ಲಿ ಮಹಿಳಾ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಶಿಕ್ಷಣ ಎಂಬುದು ಪ್ರತಿಯೊಬ್ಬ ಮುಸ್ಲಿಂ ಪುರುಷ ಮತ್ತು ಮಹಿಳೆಗೆ ಕಡ್ಡಾಯವಾಗಿದೆ. ಆದರೆ ನಮ್ಮ ಸಹೋದರಿಯರಿಗೆ ವೈದ್ಯಕೀಯ ಶಿಕ್ಷಣದ ಬಾಗಿಲು ಮುಚ್ಚಿರುವ ಸುದ್ದಿಯಿಂದ ನಾನು ದುಃಖಿತನಾಗಿದ್ದೇನೆ. ಅಲ್ಲದೆ ಸರ್ಕಾರ ನಡೆಯಿಂದ ನಿರಾಶೆಗೊಂಡಿದ್ದೇನೆ ಎಂದು ರಶೀದ್ ಖಾನ್ ಹೇಳಿದ್ದಾರೆ.

ಅಫ್ಘಾನ್ ಮಹಿಳೆಯರನ್ನು ಶುಶ್ರೂಷಕಿ ಮತ್ತು ನರ್ಸಿಂಗ್ ಕೋರ್ಸ್‌ಗಳಿಂದ ನಿಷೇಧಿಸಿರುವ ನಿಮ್ಮ ನಿಲುವನ್ನು ಮರುಪರಿಶೀಲಿಸುವಂತೆ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಈ ಮೂಲಕ ಯಾರಿಗೂ ಶಿಕ್ಷಣವನ್ನು ನಿರಾಕರಿಸಬಾರದು ಎಂದು ರಶೀದ್ ಖಾನ್ ಆಗ್ರಹಿಸಿದ್ದಾರೆ.

ತಾಲಿಬಾನ್ ಸರ್ಕಾರಕ್ಕೆ ರಶೀದ್ ಖಾನ್ ಬರೆದ ಬಹಿರಂಗ ಪತ್ರದ ಸಾರಾಂಶ ಹೀಗಿದೆ:

ದೇಶದ ಅಭಿವೃದ್ಧಿಯ ಅಡಿಪಾಯವು ಶಿಕ್ಷಣದಿಂದ ಪ್ರಾರಂಭವಾಗುತ್ತದೆ. ನಮ್ಮ ಸಹೋದರಿಯರಿಗೂ ಶಿಕ್ಷಣ ನೀಡುವ ಹಕ್ಕಿದೆ. ವೈದ್ಯಕೀಯ ಕ್ಷೇತ್ರವನ್ನು ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ನಿಮ್ಮ ಈ ನಿರ್ಧಾರವನ್ನು ಪರಿಶೀಲಿಸಿ, ನಮ್ಮ ಸಹೋದರಿಯರಿಗೆ ಪವಿತ್ರ ಧರ್ಮದ ತತ್ವಗಳ ಪ್ರಕಾರ ಶಿಕ್ಷಣವನ್ನು ಒದಗಿಸುತ್ತೀರಿ ಎಂದು ನಾನು ಭಾವಿಸುತ್ತೇನೆ.

ಅಫ್ಘಾನಿಸ್ತಾನದ ಸಹೋದರಿಯರು ಮತ್ತು ತಾಯಂದಿರಿಗಾಗಿ ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಗಳನ್ನು ಇತ್ತೀಚೆಗೆ ಮುಚ್ಚಿರುವ ಬಗ್ಗೆ ನಾನು ನಿರಾಶೆಗೊಂಡಿದ್ದೇನೆ. ಈ ನಿರ್ಧಾರವು ಅವರ ಭವಿಷ್ಯದ ಮೇಲೆ ಮಾತ್ರವಲ್ಲದೆ, ನಮ್ಮ ಸಮಾಜದ ಮೇಲೂ ಗಾಢವಾಗಿ ಪರಿಣಾಮ ಬೀರಿದೆ ಎಂದು ರಶೀದ್ ಖಾನ್ ತಿಳಿಸಿದ್ದಾರೆ.

ಇದೀಗ ನನ್ನ  ತಾಯ್ನಾಡು ನಿರ್ಣಾಯಕ ಹಂತದಲ್ಲಿ ನಿಂತಿದೆ. ದೇಶಕ್ಕೆ ಪ್ರತಿಯೊಂದು ಕ್ಷೇತ್ರದಲ್ಲೂ ವಿಶೇಷವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಪರರ ಅಗತ್ಯವಿದೆ. ಮಹಿಳಾ ವೈದ್ಯರು ಮತ್ತು ದಾದಿಯರ ತೀವ್ರ ಕೊರತೆಯು ವಿಶೇಷವಾಗಿ ಸಂಬಂಧಿಸಿದೆ. ಏಕೆಂದರೆ ಇದು ಮಹಿಳೆಯರ ಆರೋಗ್ಯ ಮತ್ತು ಘನತೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ನಮ್ಮ ಸಹೋದರಿಯರು ಮತ್ತು ತಾಯಂದಿರಿಗೆ ತಮ್ಮ ಅಗತ್ಯಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳುವ ವೈದ್ಯಕೀಯ ವೃತ್ತಿಪರರು ಒದಗಿಸುವ ಆರೈಕೆಗೆ ಅತ್ಯಗತ್ಯ. ಹೀಗಾಗಿ ನಿಮ್ಮ ಈ ನಿರ್ಧಾರದ ಮರುಪರಿಶೀಲನೆಗಾಗಿ ನಾನು ಪ್ರಾಮಾಣಿಕವಾಗಿ ಮನವಿ ಮಾಡುತ್ತೇನೆ.

ಇದರಿಂದ ಆಫ್ಘನ್ ಹುಡುಗಿಯರು ತಮ್ಮ ಶಿಕ್ಷಣದ ಹಕ್ಕನ್ನು ಮರುಪಡೆಯಬಹುದು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬಹುದು. ಎಲ್ಲರಿಗೂ ಶಿಕ್ಷಣವನ್ನು ಒದಗಿಸುವುದು ಕೇವಲ ಸಾಮಾಜಿಕ ಜವಾಬ್ದಾರಿಯಲ್ಲ. ಅದು ನಮ್ಮ ನಂಬಿಕೆ ಮತ್ತು ಮೌಲ್ಯಗಳಲ್ಲಿ ಆಳವಾಗಿ ಬೇರೂರಿರುವ ನೈತಿಕ ಹೊಣೆಗಾರಿಕೆಯಾಗಿದೆ ಎಂದು ರಶೀದ್ ಖಾನ್ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!

ಈ ಮೂಲಕ ತಾಲಿಬಾನ್ ಸರ್ಕಾರದ ನಡೆಯನ್ನು ಖಂಡಿಸಿರುವ ರಶೀದ್ ಖಾನ್, ಮಹಿಳಾ ನರ್ಸಿಂಗ್ ಶಿಕ್ಷಣದ ಮೇಲೆ ಹೇರಿರುವ ನಿಷೇಧವನ್ನು ಮರುಪರಿಶೀಲಿಸಿ ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಅಫ್ಘಾನಿಸ್ತಾನ್ ಟಿ20 ತಂಡದ ನಾಯಕ ರಶೀದ್ ಖಾನ್ ತಾಲಿಬಾನ್ ಸರ್ಕಾರ ನಿರ್ಧಾರಗಳ ಬಗ್ಗೆ ಅಸಮಾಧಾನ ಹೊರಹಾಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಫ್ಘಾನ್ ಧ್ವಜವನ್ನು ಬದಲಿಸಲು ಮುಂದಾಗಿದ್ದ ತಾಲಿಬಾನ್​ ವಿರುದ್ಧ ರಶೀದ್ ಖಾನ್ ಆಕ್ರೋಶ ಹೊರಹಾಕಿದ್ದರು.

ಅಲ್ಲದೆ ಟಿ20 ಟೂರ್ನಿಗಳಲ್ಲಿ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ಅಫ್ಘಾನಿಸ್ತಾನ್ ಧ್ವಜವನ್ನು ಬದಲಿಸಬಾರದೆಂದು ಆಗ್ರಹಿಸಿದ್ದಾರೆ. ಇದೀಗ ಮಹಿಳಾ ಶಿಕ್ಷಣಕ್ಕಾಗಿ ರಶೀದ್ ಖಾನ್ ಮತ್ತೊಮ್ಮೆ ಧ್ವನಿಯೆತ್ತಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ