Rashid Khan: ಸೋತರೂ ವಿಶ್ವ ದಾಖಲೆ ನಿರ್ಮಿಸಿದ ಸ್ಪಿನ್ ಮಾಂತ್ರಿಕ ರಶೀದ್ ಖಾನ್

T20 Cricket Record: ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ಹೆಸರಿನಲ್ಲಿತ್ತು. ಬ್ರಾವೋ 364 ಪಂದ್ಯಗಳಲ್ಲಿ 400 ವಿಕೆಟ್ ಪಡೆದಿದ್ದರು.

Rashid Khan: ಸೋತರೂ ವಿಶ್ವ ದಾಖಲೆ ನಿರ್ಮಿಸಿದ ಸ್ಪಿನ್ ಮಾಂತ್ರಿಕ ರಶೀದ್ ಖಾನ್
Rashid Khan
Updated By: ಝಾಹಿರ್ ಯೂಸುಫ್

Updated on: Nov 07, 2021 | 8:29 PM

ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ವಿರುದ್ದ ಸೋಲುವ ಮೂಲಕ ಅಫ್ಘಾನಿಸ್ತಾನ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ರಶೀದ್ ಖಾನ್ ಕೇವಲ 27 ರನ್​ ನೀಡಿ 1 ವಿಕೆಟ್ ಪಡೆದಿದ್ದರು. ಈ ವಿಕೆಟ್​ನೊಂದಿಗೆ ಇದೀಗ ಟಿ20 ಕ್ರಿಕೆಟ್​ನಲ್ಲಿ 400 ವಿಕೆಟ್​ ಪಡೆದ ವಿಶ್ವದ ನಾಲ್ಕನೇ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅತೀ ವೇಗವಾಗಿ ಟಿ20ಯಲ್ಲಿ 400 ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ಹೆಸರಿನಲ್ಲಿತ್ತು. ಬ್ರಾವೋ 364 ಪಂದ್ಯಗಳಲ್ಲಿ 400 ವಿಕೆಟ್ ಪಡೆದಿದ್ದರು. ಇದೀಗ ಕೇವಲ 289 ಪಂದ್ಯಗಳಲ್ಲಿ 400 ವಿಕೆಟ್ ಉರುಳಿಸುವ ಮೂಲಕ ರಶೀದ್ ಖಾನ್ ಬ್ರಾವೋ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇನ್ನು ಈ ದಾಖಲೆಯೊಂದಿಗೆ ರಶೀದ್ ಖಾನ್ ಈ ಸಾಧನೆ ಮಾಡಿದ ನಾಲ್ಕನೇ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಡ್ವೇನ್ ಬ್ರಾವೋ (553), ಸುನಿಲ್ ನರೈನ್ (425) ಮತ್ತು ಇಮ್ರಾನ್ ತಾಹಿರ್ (420) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಎಲೈಟ್ ಪಟ್ಟಿಗೆ ರಶೀದ್ ಖಾನ್ ಎಂಟ್ರಿ ಕೊಟ್ಟಿದ್ದಾರೆ.

23 ವರ್ಷದ ರಶೀದ್ ಖಾನ್ ಒಂದಷ್ಟು ಅಫ್ಘಾನಿಸ್ತಾನ್ ಪರ ಟಿ20 ಕ್ರಿಕೆಟ್ ಹಾಗೂ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದು, ಹೀಗಾಗಿ ಬ್ರಾವೋ ಅವರ ವಿಶ್ವ ದಾಖಲೆ ಮುರಿಯುವ ಸಾಧ್ಯತೆಯಿದೆ. ಸದ್ಯ ಒಟ್ಟಾರೆ ಟಿ20 ಕ್ರಿಕೆಟ್​ನಲ್ಲಿ 553 ವಿಕೆಟ್ ಉರುಳಿಸುವ ಮೂಲಕ ಬ್ರಾವೋ ಅಗ್ರಸ್ಥಾನದಲ್ಲಿದ್ದಾರೆ. ಅಷ್ಟೇ ಅಲ್ಲದೆ ಕೇವಲ 20 ಹಾಗೂ 25 ವಿಕೆಟ್​ಗಳ ಮೂಲಕ ನರೈನ್ ಹಾಗೂ ತಾಹಿರ್ ರಶೀದ್ ಖಾನ್ ಮುಂದಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಎಲ್ಲರ ದಾಖಲೆಯನ್ನು ಮುರಿದು ಮಾಂತ್ರಿಕ ಸ್ಪಿನ್ನರ್ ರಶೀದ್ ಖಾನ್ ಹೊಸ ಇತಿಹಾಸ ನಿರ್ಮಿಸಿದರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(Rashid Khan becomes fastest bowler to pick 400 T20 wickets)