AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬೈ ಸೆ ಆಯಾ ಮೇರಾ ದೋಸ್ತ್: ರೋಹಿತ್ ಶರ್ಮಾ ಕೊಡುಗೆ ನೆನೆದ ರಶೀದ್ ಖಾನ್

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ರೋಚಕ ಜಯ ಸಾಧಿಸಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 20 ಓವರ್​ಗಳಲ್ಲಿ 115 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 105 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನ್ ಪಡೆ ಚೊಚ್ಚಲ ಬಾರಿಗೆ ವಿಶ್ವಕಪ್​ನ ಸೆಮಿಫೈನಲ್ ಹಂತಕ್ಕೇರಿದೆ.

ಬಾಂಬೈ ಸೆ ಆಯಾ ಮೇರಾ ದೋಸ್ತ್: ರೋಹಿತ್ ಶರ್ಮಾ ಕೊಡುಗೆ ನೆನೆದ ರಶೀದ್ ಖಾನ್
Rashid Khan - Rohit Sharma
ಝಾಹಿರ್ ಯೂಸುಫ್
|

Updated on: Jun 25, 2024 | 5:53 PM

Share

T20 World Cup 2024: ಟಿ20 ವಿಶ್ವಕಪ್​ ಟೂರ್ನಿಯ ಸೆಮಿಫೈನಲ್​ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ನಾಕೌಟ್ ಹಂತದಲ್ಲಿ ಇಂಗ್ಲೆಂಡ್, ಭಾರತ, ಸೌತ್ ಆಫ್ರಿಕಾ ತಂಡಗಳೊಡನೆ ಅಫ್ಘಾನಿಸ್ತಾನ್ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಅಫ್ಘಾನ್ ಪಡೆ ಸೆಮಿಫೈನಲ್​ಗೆ ಪ್ರವೇಶಿಸಿದೆ. ಹೀಗೆ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಪ್ರವೇಶಿಸಿದ್ದು ಭಾರತ ತಂಡದ ನೆರವಿನಿಂದ ಎಂಬುದು ವಿಶೇಷ. ಅಂದರೆ ಆಸ್ಟ್ರೇಲಿಯಾ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು.

ಒಂದು ವೇಳೆ ಈ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಗೆದ್ದಿದ್ದರೆ ಅಫ್ಘಾನಿಸ್ತಾನ್ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಅಫ್ಘಾನ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ತಂಡವನ್ನು ವಿಶ್ವಕಪ್​ನಿಂದ ಹೊರಬೀಳುವಂತೆ ಮಾಡಿದ್ದರು.

ಇತ್ತ ಅಫ್ಘಾನಿಸ್ತಾನ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ 8 ರನ್​ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನ ಸಂಭ್ರಮದ ನಡುವೆ ರಶೀದ್ ಖಾನ್ ರೋಹಿತ್ ಶರ್ಮಾ ಅವರ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಈ ಫೋಟೋಗೆ ಬಾಂಬೈ ಸೆ ಆಯಾ ಮೇರಾ ದೋಸ್ತ್ (ಮುಂಬೈನಿಂದ ಬಂದ ನನ್ನ ಗೆಳೆಯ) ಎಂದು ಕ್ಯಾಪ್ಷನ್ ನೀಡಿದ್ದಾರೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಲು ರೋಹಿತ್ ಶರ್ಮಾ ಪರೋಕ್ಷವಾಗಿ ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ.

ಇದೀಗ ರಶೀದ್ ಖಾನ್ ಹಾಗೂ ರೋಹಿತ್ ಶರ್ಮಾ ನಡುವಣ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಉಭಯ ಆಟಗಾರರ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.

ರಶೀದ್ ಖಾನ್ ಇನ್​ಸ್ಟಾಗ್ರಾಮ್ ಪೋಸ್ಟ್​:

View this post on Instagram

A post shared by Rashid Khan (@rashid.khan19)

ಇದನ್ನೂ ಓದಿ: Australia: ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಕನಸು ಚೂರು ಚೂರು..!

ಸೆಮಿಫೈನಲ್ ಪಂದ್ಯ ಯಾವಾಗ?

ಟಿ20 ವಿಶ್ವಕಪ್ 2024ರ ಮೊದಲ ಸೆಮಿಫೈನಲ್ ಪಂದ್ಯ ಜೂನ್ 26 ರಂದು (ಭಾರತದಲ್ಲಿ ಜೂನ್ 27) ಬಾರ್ಬಡೋಸ್​ನಲ್ಲಿ ನಡೆಯಲಿದೆ. ಇನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಜೂನ್ 27 ರಂದು ಜರುಗಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

  • ಗುರುವಾರ, 27 ಜೂನ್ (6:00 IST): ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್ (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್- ಟೊಬಾಗೊ)
  • ಗುರುವಾರ, 27 ಜೂನ್: (8:00 IST): ಭಾರತ vs ಇಂಗ್ಲೆಂಡ್ (ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನಾ)
  • ಶನಿವಾರ, 29 ಜೂನ್: (8:00 IST): ಫೈನಲ್ ಪಂದ್ಯ (ಕೆನ್ಸಿಂಗ್ಟನ್ ಓವಲ್. ಬಾರ್ಬಡೋಸ್)
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​