AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 4 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಉದ್ಘಾಟನಾ ಸಮಾರಂಭ: ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?

IPL 2023 Opening Ceremony: ಐಪಿಎಲ್ 2023 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಬರೋಬ್ಬರಿ 4 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದಕ್ಕೆ ಸಕಲ ಸಿದ್ಧತೆ ನಡೆಸುತ್ತಿದೆ.

IPL 2023: 4 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಉದ್ಘಾಟನಾ ಸಮಾರಂಭ: ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?
Rashmika Mandanna and IPL 2023
Vinay Bhat
|

Updated on:Mar 23, 2023 | 10:32 AM

Share

ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31 ರಂದು ಈ ಮಿಲಿಯನ್ ಡಾಲರ್ ಟೂರ್ನಿಗೆ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (GT vs CSK) ತಂಡವನ್ನು ಎದುರಿಸಲಿದೆ. ಕಳೆದ ಡಿಸೆಂಬರ್​ನಲ್ಲಿ ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಎಲ್ಲ 10 ಫ್ರಾಂಚೈಸಿಗಳು ತಮಗೆ ಅಗತ್ಯವಿರುವ ಆಟಗಾರರನ್ನು ಖರೀದಿ ಮಾಡಿದೆ. ಈ ವಾರ ಕೆಲ ವಿದೇಶಿ ಆಟಗಾರರನ್ನು ಹೊರತು ಪಡಿಸಿ ಉಳಿದ ಎಲ್ಲ ಪ್ಲೇಯರ್ಸ್ ತಮ್ಮ ತಮ್ಮ ತಂಡ ಸೇರಿಕೊಳ್ಳಲಿದ್ದಾರೆ. ಸಿಎಸ್​ಕೆ ನಾಯಕ ಎಂಎಸ್ ಧೋನಿ (MS Dhoni) ಒಂದು ತಿಂಗಳ ಮುಂಚಿತವಾಗಿಯೇ ಅಭ್ಯಾಸ ಶುರುಮಾಡಿಕೊಂಡಿದ್ದರು. ಹಾಗಾದರೆ ಈ ಬಾರಿಯ ಐಪಿಎಲ್ 2023 (IPL 2023) ಹೇಗಿರಲಿದೆ?. ಏನೆಲ್ಲ ಹೊಸತನ ಕೂಡಿದೆ ಎಂಬುದನ್ನು ನೋಡೋಣ.

ಉದ್ಘಾಟನಾ ಸಮಾರಂಭ:

ಬರೋಬ್ಬರಿ 4 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದಕ್ಕೆ ಸಕಲ ಸಿದ್ಧತೆ ನಡೆಸುತ್ತಿದೆ. ಕಳೆದ ಮೂರು ವರ್ಷಗಳಿಂದ ಕೋವಿಡ್ ನಿಯಮ ಇದ್ದ ಕಾರಣ ಓಪನಿಂಗ್ ಸೆರೆಮನಿ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಭಾರತದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್ 31 ರಂದು ಗುಜರಾತ್ ಮತ್ತು ಚೆನ್ನೈ ನಡುವಣ ಪಂದ್ಯ ಆರಂಭಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದರಲ್ಲಿ ರಶ್ಮಿಕಾ ಮಂದಣ್ಣ ನೃತ್ಯ ಮಾಡುವ ಮೂಲಕ ಅಭಿಮಾನಿಗಳನ್ನು ರಂಚಿಸಲಿದ್ದಾರೆ ಎಂದು ವರದಿ ಆಗಿದೆ. ಜೊತೆಗೆ ತಮನ್ನಾ ಭಾಟಿಯ ಕೂಡ ಇವರಿಗೆ ಸಾಥ್ ನೀಡಲಿದ್ದಾರಂತೆ. ಉಳಿದಂತೆ ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಈ ಕಾರ್ಯಕ್ರಮದಲ್ಲಿ ಹಾಡು ಹಾಡಲಿದ್ದಾರೆ ಎಂದು ಹೇಳಲಾಗಿದೆ.

India vs Australia: ಟೀಮ್ ಇಂಡಿಯಾಗೆ ಸೋಲುಣಿಸಿ ನಂಬರ್ 1 ಸ್ಥಾನಕ್ಕೇರಿದ ಆಸ್ಟ್ರೇಲಿಯಾ

ಇದನ್ನೂ ಓದಿ
Image
IND vs AUS 3rd ODI: ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ
Image
Virat Kohli: ಬೇಕೆಂದೇ ಕೊಹ್ಲಿಗೆ ಡಿಕ್ಕಿ ಹೊಡೆದ ಸ್ಟೊಯಿನಿಸ್: ಕೋಪದಲ್ಲಿ ವಿರಾಟ್ ಏನು ಮಾಡಿದ್ರು ನೋಡಿ
Image
Rohit Sharma: ಪಂದ್ಯ ಮುಗಿದ ಬಳಿಕ ತಂಡದ ಸೋಲಿಗೆ ನಾಯಕ ರೋಹಿತ್ ಶರ್ಮಾ ನೀಡಿದ ಕಾರಣವೇನು ಗೊತ್ತೇ?
Image
IPL 2023: ರಾಜಸ್ಥಾನ್ ರಾಯಲ್ಸ್​ ಕ್ಯಾಂಪ್​ನಲ್ಲಿ ಕಾಣಿಸಿಕೊಂಡ ಹೊಸ ಆಟಗಾರ

ಟಾಸ್ ನಂತರವೂ ತಂಡ ಬದಲಿಸಬಹುದು:

ಐಪಿಎಲ್ ಮಂಡಳಿ ಕೆಲವು ನೂತನ ನಿಯಮಗಳನ್ನು ಈ ಬಾರಿ ಅಳವಡಿಸಿಕೊಳ್ಳಲು ಮುಂದಾಗಿದೆ. ವರದಿ ಪ್ರಕಾರ, ಇನ್ನು ಮುಂದೆ ಟಾಸ್ ನಂತರವೂ ಕ್ಯಾಪ್ಟನ್​ಗಳು ತಮ್ಮ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡಬಹುದಂತೆ. ಈ ಹೊಸ ನಿಮಯಮನ್ನು ಜಾರಿಗೆ ತರಲು ಮಂಡಳಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಈ ಹಿಂದೆ ಉಭಯ ತಂಡಗಳ ಆಟಗಾರರು ಟಾಸ್​ಗೂ ಮುನ್ನ ತಮ್ಮ ತಮ್ಮ ತಂಡದ ಆಡುವ ಹನ್ನೊಂದರ ಬಳಗದ ಪಟ್ಟಿಯನ್ನು ವಿನಿಮಯ ಮಾಡಿಕೊಳ್ಳಬೇಕಿತ್ತು. ಆದರೆ ಇದೀಗ ಈ ನಿಯಮ ಜಾರಿಯಾದರೆ, ಟಾಸ್ ನಂತರ, ಟಾಸ್​ನ ಅನುಗುಣವಾಗಿ ತಂಡದ ನಾಯಕ ತಂಡವನ್ನು ಬದಲಿಸಬಹುದಾಗಿದೆ.

ಐಪಿಎಲ್​ಗೂ ಮುನ್ನ ಈ ನಿಯಮವನ್ನು ದಕ್ಷಿಣ ಆಫ್ರಿಕಾದಲ್ಲಿ ಈ ವರ್ಷದಿಂದ ಆರಂಭವಾದ ಎಸ್​ಎ ಟಿ20 ಲೀಗ್​ನಲ್ಲಿ ಅಳವಡಿಸಿಕೊಳ್ಳಲಾಗಿತ್ತು. ಆ ಟೂರ್ನಿಯಲ್ಲಿ ಸಿಕ್ಕ ಯಶಸ್ಸಿನ ಬಳಿಕ ಈ ನಿಯಮವನ್ನು ಐಪಿಎಲ್​ನಲ್ಲಿ ಜಾರಿಗೆ ತರಲು ಮಂಡಳಿ ಮುಂದಾಗಿದೆ.

ಹೊಸ ನಿಯಮಗಳು:

ಈ ಬಾರಿಯ ಐಪಿಎಲ್​ನಲ್ಲಿ ಬೌಲಿಂಗ್​ ಮಾಡುವ ವೇಳೆ ವಿಕೆಟ್ ಕೀಪರ್ ಅಥವಾ ಫೀಲ್ಡರ್​ ಸ್ಥಾನ ಪಲ್ಲಟ ಮಾಡಿದ್ದು ಕಂಡು ಬಂದರೆ ಅದನ್ನು ಡೆಡ್ ಬಾಲ್ ಎಂದು ಪರಿಗಣಿಸುವುದರ ಜೊತೆಗೆ ಐದು ರನ್​ಗಳ ಪೆನಾಲ್ಟಿ ಕೂಡ ಹಾಕಲಾಗುತ್ತದೆ. ಈರೀತಿಯ ಹೊಸ ನಿಯಮ ಸೇರಿಸಲಾಗಿದೆ. ಜೊತೆಗೆ ನಿಗದಿತ ಸಮಯಕ್ಕೆ ಓವರ್​ ಮುಗಿಸದೆ ಹೊದಲ್ಲಿ ಕೇವಲ 4 ಫೀಲ್ಡರ್ ಮಾತ್ರ 30 ಯಾರ್ಡ್​ ಸರ್ಕಲ್ ಹೊರಗೆ ಫೀಲ್ಡಿಂಗ್ ಮಾಡಬೇಕಾಗುತ್ತದೆ. ಇನ್ನು ನೂತನ ಡಿಆರ್​ಎಸ್​ ನಿಯಮವನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಈಗ ವೈಡ್‌ ಮತ್ತು ನೋ ಬಾಲ್‌ ನಿರ್ಧಾರದ ವಿರುದ್ಧವೂ ಡಿಆರ್​ಎಸ್ ಬಳಸಬಹುದಾಗಿದೆ. ಆದರೆ, ಲೆಗ್ ಬೈ ನಿರ್ಧಾರಕ್ಕೆ ಡಿಆರ್‌ಎಸ್ ತೆಗೆದುಕೊಳ್ಳಲು ಅವಕಾಶ ನೀಡಲಾಗಿಲ್ಲ. ಈ ಹಿಂದೆ ಅಂಪೈರ್ ನೀಡಿದ ಔಟ್ ನಿರ್ಣಯದ ವಿರುದ್ಧ ಮಾತ್ರ ಡಿಆರ್​ಎಸ್​ ತೆಗದುಕೊಳ್ಳಲಾಗುತ್ತಿತ್ತು.

4K ರೆಸಲ್ಯೂಶನ್​ನಲ್ಲಿ ಐಪಿಎಲ್ 2023:

ಐಪಿಎಲ್ 2023 ರಿಲಯನ್ಸ್ ಜಿಯೋದ ಜಿಯೋ ಸಿನಿಮಾ ಆ್ಯಪ್​ನಲ್ಲಿ ನೇರಪ್ರಸಾರ ಕಾಣಲಿದೆ. ಪ್ಯಾರಾಮೌಂಟ್ ಗ್ಲೋಬಲ್ ಮತ್ತು ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ನಡುವಿನ ಜಂಟಿ ಉದ್ಯಮವಾಗಿರುವ ವಯೋಕಾಮ್‌18 ಮೀಡಿಯಾ ಪ್ರೈ. ಕಳೆದ ವರ್ಷದ ಹರಾಜಿನಲ್ಲಿ ಭಾರತದ ಉಪಖಂಡದಲ್ಲಿನ ಡಿಜಿಟಲ್‌ ಐಪಿಎಲ್‌ ಪ್ರಸಾರದ ಹಕ್ಕುಗಳನ್ನು 20,500 ಕೋಟಿ ರೂ.ಗೆ ಪಡೆದುಕೊಂಡಿತ್ತು. ಹೀಗಾಗಿ ಜಿಯೋ ಸಿನಿಮಾದಲ್ಲಿ ಐಪಿಎಲ್ ಲೈವ್ ಕಾಣಲಿದೆ. ಜಿಯೋ ಬಳಕೆದಾರರು ಉಚಿತವಾಗಿ ವೀಕ್ಷಿಸಬಹುದು. ಇದರ ಜೊತೆಗೆ ಐಪಿಎಲ್​ನ ಎಲ್ಲ ಪಂದ್ಯಗಳು 4K ರೆಸಲ್ಯೂಶನ್ (UltraHD) ನಲ್ಲಿ ಲೈವ್ ಸ್ಟ್ರೀಮ್ ಆಗಲಿದೆಯಂತೆ. ಇದುವರೆಗೆ ಐಪಿಎಲ್ ಅನ್ನು ದೇಶದಲ್ಲಿ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಮಾತ್ರ ಸ್ಟ್ರೀಮ್ ಮಾಡಲಾಗುತ್ತಿತ್ತು. ಇದಕ್ಕಾಅಗಿ ಚಂದಾದಾರಿಕೆಯನ್ನು ಹೊಂದಿರುವುದು ಅಗತ್ಯವಿತ್ತು. ಆದರೀಗ ಜಿಯೋ ಎಲ್ಲವನ್ನು ಉಚಿತವಾಗಿ ನೀಡುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Thu, 23 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ