R Ashwin Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ

R Ashwin Retirement: 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

R Ashwin Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ
Ashwin
Follow us
ಝಾಹಿರ್ ಯೂಸುಫ್
|

Updated on:Dec 18, 2024 | 11:39 AM

ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. ಇನ್ನು 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.

38 ವರ್ಷದ ಅಶ್ವಿನ್ ಕೊನೆಯ ಬಾರಿ ಏಕದಿನ ಪಂದ್ಯವಾಡಿದ್ದು 2023 ರಲ್ಲಿ. ಇದಾದ ಬಳಿಕ ಅವರು ಭಾರತ ಏಕದಿನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಹಾಗೆಯೇ 2022 ರಲ್ಲಿ ಕೊನೆಯ ಟಿ20 ಪಂದ್ಯವಾಡಿದ್ದ ಅಶ್ವಿನ್ ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದರು.

ಇದನ್ನೂ ಓದಿ: WTC final: ಭಾರತ vs ಆಸ್ಟ್ರೇಲಿಯಾ ಗಾಬಾ ಟೆಸ್ಟ್ ಡ್ರಾ ಆದರೆ ಯಾರಿಗೆ ಲಾಭ?

ಅದರಲ್ಲೂ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ  ಪಂದ್ಯದಲ್ಲಿ ರವಿಂದ್ರನ್ ಅಶ್ವಿನ್ ಕಣಕ್ಕಿಳಿದಿದ್ದರು. ಆದರೆ ಮೂರನೇ ಪಂದ್ಯದಿಂದ ಅವರನ್ನು ಕೈ ಬಿಡಲಾಗಿದೆ. ಇನ್ನೂ ಎರಡು ಟೆಸ್ಟ್ ಪಂದ್ಯಗಳು ಬಾಕಿಯಿದ್ದು, ಅದಕ್ಕೂ ಮುನ್ನವೇ ದಿಢೀರ್ ನಿವೃತ್ತಿ ಘೋಷಿಸಿ ರವಿಚಂದ್ರನ್ ಅಶ್ವಿನ್ ಅಚ್ಚರಿ ಮೂಡಿಸಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಯಶಸ್ವಿ ಸ್ಪಿನ್ನರ್​ ಒಬ್ಬರ ಯುಗಾಂತ್ಯವಾದಂತಾಗಿದೆ.

Published On - 11:22 am, Wed, 18 December 24

ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್​; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ಬಂದ ನಟ
ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್​; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ಬಂದ ನಟ
ಮಾಧ್ಯಮ ವರದಿಗಳ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ?
ಮಾಧ್ಯಮ ವರದಿಗಳ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ?
ಉತ್ತರ ಪ್ರದೇಶ: ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ
ಉತ್ತರ ಪ್ರದೇಶ: ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ
Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ