‘ಅಶ್ವಿನ್​ಗೆ ಖೇಲ್ ರತ್ನ ಪ್ರಶಸ್ತಿ ನೀಡಿ’; ಕ್ರೀಡಾ ಸಚಿವರಿಗೆ ಪತ್ರ ಬರೆದ ಕಾಂಗ್ರೆಸ್ ಸಂಸದ

Ashwin Retirement: ರವಿಚಂದ್ರನ್ ಅಶ್ವಿನ್ ಅವರ ಅಂತರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಯ ನಂತರ, ಅವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಸಂಸದ ವಿಜಯ್ ವಸಂತ್ ಒತ್ತಾಯಿಸಿದ್ದಾರೆ. ಅವರ ಅದ್ಭುತ ಕ್ರಿಕೆಟ್ ವೃತ್ತಿಜೀವನ ಮತ್ತು ಅಪಾರ ಕೊಡುಗೆಯನ್ನು ಗಮನಿಸಿ ಈ ಮನವಿಯನ್ನು ಸಲ್ಲಿಸಲಾಗಿದೆ.

‘ಅಶ್ವಿನ್​ಗೆ ಖೇಲ್ ರತ್ನ ಪ್ರಶಸ್ತಿ ನೀಡಿ’; ಕ್ರೀಡಾ ಸಚಿವರಿಗೆ ಪತ್ರ ಬರೆದ ಕಾಂಗ್ರೆಸ್ ಸಂಸದ
ಆರ್​ ಅಶ್ವಿನ್
Follow us
ಪೃಥ್ವಿಶಂಕರ
|

Updated on: Dec 21, 2024 | 4:00 PM

ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯದ ನಂತರ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಬ್ರಿಸ್ಬೇನ್‌ನ ಗಾಬಾದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗಿತ್ತು. ಇದಾದ ಬೆನ್ನಲ್ಲೇ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಂತ್ಯ ಹಾಡಿದ್ದರು. ಇದೀಗ ಅಶ್ವಿನ್ ನಿವೃತ್ತಿಯ ನಂತರ ಅವರಿಗೆ ಅತಿ ದೊಡ್ಡ ಕ್ರೀಡಾ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ತಮಿಳುನಾಡಿನ ಕನ್ಯಾಕುಮಾರಿಯ ಕಾಂಗ್ರೆಸ್ ಸಂಸದ ವಿಜಯ್ ವಸಂತ್ ಅವರು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದು ಅಶ್ವಿನ್ ಅವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಖೇಲ್ ರತ್ನ ಪ್ರಶಸ್ತಿಗೆ ಮನವಿ

ಕಾಂಗ್ರೆಸ್ ಸಂಸದ ವಿಜಯ್ ವಸಂತ್ ಅವರು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದು ಅಶ್ವಿನ್ ಅವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅವರು ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಪತ್ರದ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ‘ಆರ್ ಅಶ್ವಿನ್ ಅವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕೆಂದು ನಾನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದೇನೆ. ಭಾರತೀಯ ಕ್ರಿಕೆಟ್‌ಗೆ ಅವರ ಅಸಾಧಾರಣ ಕೊಡುಗೆ ಮತ್ತು ಮೈದಾನದಲ್ಲಿನ ಗಮನಾರ್ಹ ಸಾಧನೆಗಳು ಅವರನ್ನು ನಿಜವಾಗಿಯೂ ಈ ಗೌರವಕ್ಕೆ ಅರ್ಹರನ್ನಾಗಿಸಿದೆ ಎಂದು ಬರೆದುಕೊಂಡಿದ್ದಾರೆ.

106 ಟೆಸ್ಟ್‌ಗಳಲ್ಲಿ 537 ವಿಕೆಟ್‌

ಅಶ್ವಿನ್ ಎಲ್ಲಾ ಮೂರು ಮಾದರಿಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಆದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅವರ ಸಾಧನೆ ಅಮೋಘವಾಗಿದೆ. ತಮ್ಮ ವೃತ್ತಿಜೀವನದಲ್ಲಿ 106 ಟೆಸ್ಟ್ ಪಂದ್ಯಗಳನ್ನಾಡಿದ್ದ ಅಶ್ವಿನ್ 537 ವಿಕೆಟ್ಗಳನ್ನು ಪಡೆದಿದ್ದರು. ಇದರೊಂದಿಗೆ ಅನಿಲ್ ಕುಂಬ್ಳೆ ನಂತರ ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದಲ್ಲದೆ ಅಶ್ವಿನ್, 8 ಬಾರಿ 10 ವಿಕೆಟ್ ಮತ್ತು 37 ಬಾರಿ 5 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. ಬೌಲಿಂಗ್​ ಜೊತೆಗೆ ಬ್ಯಾಟಿಂಗ್​ನಲ್ಲೂ ಕಮಾಲ್ ಮಾಡಿರುವ ಅಶ್ವಿನ್ ಟೆಸ್ಟ್‌ನಲ್ಲಿ 3503 ರನ್ ಕಲೆಹಾಕಿದ್ದಾರೆ. ಈ ಅವಧಿಯಲ್ಲಿ ಅವರ ಬ್ಯಾಟ್‌ನಿಂದ 6 ಶತಕ ಮತ್ತು 14 ಅರ್ಧ ಶತಕಗಳು ಸಿಡಿದಿವೆ.

65 ಅಂತಾರಾಷ್ಟ್ರೀಯ ವಿಕೆಟ್‌

ಅಶ್ವಿನ್ ಭಾರತ ಪರ 65 ಟಿ20 ಹಾಗೂ 116 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟಿ20ಯಲ್ಲಿ 184 ರನ್ ಜೊತೆಗೆ 72 ವಿಕೆಟ್ಗಳನ್ನು ಪಡೆದಿರುವ ಅಶ್ವಿನ್ ಏಕದಿನದಲ್ಲಿ ಆಡಿರುವ 114 ಇನ್ನಿಂಗ್ಸ್‌ಗಳಲ್ಲಿ 156 ವಿಕೆಟ್‌ಗಳನ್ನು ಪಡೆದಿದ್ದಾರೆ. 25 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಬಳಿಸಿರುವುದು ಅವರ ಏಕದಿನದಲ್ಲಿ ಅತ್ಯುತ್ತಮ ಪ್ರದರ್ಶನವಾಗಿದೆ. ಅಚ್ಚರಿ ಎಂದರೆ ಟೆಸ್ಟ್​ನಲ್ಲಿ 37 ಬಾರಿ ಐದು ವಿಕೆಟ್ ಕಬಳಿಸಿರುವ ಅಶ್ವಿನ್​ಗೆ ಏಕದಿನದಲ್ಲಿ ಒಮ್ಮೆಯೂ ಐದು ವಿಕೆಟ್ ಕಬಳಿಸಲು ಸಾಧ್ಯವಾಗಲಿಲ್ಲ. ಒಟ್ಟಾರೆಯಾಗಿ ಭಾರತದ ಪರ ಎಲ್ಲಾ ಸ್ವರೂಪಗಳಲ್ಲಿ 287 ಪಂದ್ಯಗಳನ್ನಾಡಿರುವ ಅಶ್ವಿನ್ 765 ವಿಕೆಟ್‌ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್