T20 World Cup 2022: ಟೀಮ್ ಇಂಡಿಯಾಗೆ ಎಚ್ಚರಿಕೆ ರವಾನಿಸಿದ ರವಿ ಶಾಸ್ತ್ರಿ

Ravi Shastri: ನಾನು ಕಳೆದ ಆರು-ಏಳು ವರ್ಷಗಳಿಂದ ಟೀಮ್ ಇಂಡಿಯಾದ ಭಾಗವಾಗಿದ್ದೇನೆ. ಮೊದಲು ತರಬೇತುದಾರನಾಗಿ ಮತ್ತು ಈಗ ನಾನು ಹೊರಗಿನಿಂದ ನೋಡುತ್ತಿದ್ದೇನೆ.

T20 World Cup 2022: ಟೀಮ್ ಇಂಡಿಯಾಗೆ ಎಚ್ಚರಿಕೆ ರವಾನಿಸಿದ ರವಿ ಶಾಸ್ತ್ರಿ
Ravi Shastri
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 19, 2022 | 5:54 PM

T20 World Cup 2022: ಟಿ20 ವಿಶ್ವಕಪ್ ಆರಂಭವಾಗಿದೆ. ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯುತ್ತಿದ್ದು, ಇದರ ಬಳಿಕ ಸೂಪರ್-12 ಪಂದ್ಯಗಳು ಶುರುವಾಗಲಿದೆ. ಆದರೆ ಅದಕ್ಕೂ ಟೀಮ್ ಇಂಡಿಯಾಗೆ (Team India) ಮಾಜಿ ಕೋಚ್ ರವಿ ಶಾಸ್ತ್ರಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಭಾರತ ತಂಡವು ಪಾಕ್​ ವಿರುದ್ಧದ ಪಂದ್ಯಕ್ಕೂ ಮುನ್ನ ಫೀಲ್ಡಿಂಗ್​ ಅನ್ನು ಸುಧಾರಿಸಿಕೊಳ್ಳಬೇಕಿದೆ ಎಂದು ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷದ ರವಿ ಶಾಸ್ತ್ರಿ ಅವರ ತರಬೇತಿಯಲ್ಲಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ರಾಹುಲ್ ದ್ರಾವಿಡ್ ಸಾರಥ್ಯದಲ್ಲಿ ವಿಶ್ವಕಪ್​ನಲ್ಲಿ ಸೆಣಸುತ್ತಿದೆ. ಹೀಗಾಗಿಯೇ ನಿರೀಕ್ಷೆಗಳು ಕೂಡ ಹೆಚ್ಚಿವೆ. ಈ ಬಗ್ಗೆ ಮಾತನಾಡಿರುವ ರವಿ ಶಾಸ್ತ್ರಿ, ಈ ಬಾರಿ ಟೀಮ್ ಇಂಡಿಯಾ ಬಲಿಷ್ಠವಾಗಿದೆ. ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯ ನಡುವೆಯೂ, ಭಾರತದ ಬ್ಯಾಟರ್‌ಗಳು ಈ ಬಾರಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಏಕೆಂದರೆ ನಾನು ಕಳೆದ ಆರು-ಏಳು ವರ್ಷಗಳಿಂದ ಟೀಮ್ ಇಂಡಿಯಾದ ಭಾಗವಾಗಿದ್ದೇನೆ. ಮೊದಲು ತರಬೇತುದಾರನಾಗಿ ಮತ್ತು ಈಗ ನಾನು ಹೊರಗಿನಿಂದ ನೋಡುತ್ತಿದ್ದೇನೆ. ಈ ಬಾರಿಯ ತಂಡವು ಹಿಂದೆಂದಿಗಿಂತಲೂ ಉತ್ತಮವಾಗಿದೆ. ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ, ಹಾರ್ದಿಕ್ ಪಾಂಡ್ಯ 5ನೇ ಮತ್ತು ರಿಷಭ್ ಪಂತ್ ಅಥವಾ ದಿನೇಶ್ ಕಾರ್ತಿಕ್ 6ನೇ ಕ್ರಮಾಂಕದಲ್ಲಿ ಆಡುವುದರಿಂದ ದೊಡ್ಡ ಫಲಿತಾಂಶದಲ್ಲಿ ಭರ್ಜರಿ ಜಯವನ್ನು ನಿರೀಕ್ಷಿಸಬಹುದು. ಏಕೆಂದರೆ ಇಂತಹ ಬ್ಯಾಟಿಂಗ್ ಕ್ರಮಾಂಕವು ಅಗ್ರ ಕ್ರಮಾಂಕದವರ ಒತ್ತಡವನ್ನೂ ಕೂಡ ಕಡಿಮೆ ಮಾಡುತ್ತದೆ ಎಂದು ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಇದಾಗ್ಯೂ ರವಿ ಶಾಸ್ತ್ರಿ ಅವರ ಚಿಂತೆ ಇರುವುದು ಟೀಮ್ ಇಂಡಿಯಾದ ಫೀಲ್ಡಿಂಗ್ ಮೇಲೆ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಭಾರತ ತಂಡವು ಗಮನ ಹರಿಸಬೇಕಾದ ಕ್ಷೇತ್ರವೆಂದರೆ ಫೀಲ್ಡಿಂಗ್. ಏಕೆಂದರೆ ನೀವು ಉಳಿಸುವ ಆ 15-20 ರನ್‌ಗಳು ಫಲಿತಾಂಶಗಳಲ್ಲಿ ವ್ಯತ್ಯಾಸಗಳನ್ನು ಮಾಡಬಹುದು. ಇತ್ತೀಚೆಗೆ ಏಷ್ಯಾಕಪ್​ನಲ್ಲಿ ಪಾಕ್ ವಿರುದ್ಧ ಶ್ರೀಲಂಕಾ ಗೆಲ್ಲಲು ಅವರು ಮಾಡಿದಂತಹ ಅದ್ಭುತ ಫೀಲ್ಡಿಂಗ್ ಕೂಡ ಕಾರಣ. ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾದಂತಹ ತಂಡಗಳ ಆಟಗಾರರು ಹುಚ್ಚರಂತೆ ಫೀಲ್ಡಿಂಗ್ ಮಾಡುತ್ತಾರೆ. ಹೀಗಾಗಿ ಭಾರತ ತಂಡ ಕೂಡ ಫೀಲ್ಡಿಂಗ್​ನತ್ತ ಹೆಚ್ಚಿನ ಗಮನಹರಿಸಬೇಕೆಂದು ರವಿ ಶಾಸ್ತ್ರಿ ತಿಳಿಸಿದರು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಏಕೆಂದರೆ ಫೀಲ್ಡಿಂಗ್ ಮೂಲಕ ಕೂಡ ಒಂದು ಪಂದ್ಯದ ಚಿತ್ರಣ ಬದಲಿಸಬಹುದು ಎಂದು ಅಭಿಪ್ರಾಯಪಟ್ಟಿರುವ ರವಿ ಶಾಸ್ತ್ರಿ, ಟೀಮ್ ಇಂಡಿಯಾ ಕ್ಷೇತ್ರರಕ್ಷಣೆಯತ್ತ ಹೆಚ್ಚಿನ ಗಮನಹರಿಬೇಕೆಂದು ಸಂದೇಶ ರವಾನಿಸಿದ್ದಾರೆ.

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್