AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದ ರವಿ ಶಾಸ್ತ್ರಿ

Asia Cup 2023: ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕ್ ತಂಡ ನೇಪಾಳವನ್ನು ಎದುರಿಸಲಿದೆ. ಇನ್ನು ಟೀಮ್ ಇಂಡಿಯಾ ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

Asia Cup 2023: ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದ ರವಿ ಶಾಸ್ತ್ರಿ
Ravi Shastri
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 16, 2023 | 3:21 PM

Asia Cup 2023: ಏಷ್ಯಾಕಪ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆಗಸ್ಟ್ 30 ರಿಂದ ಪ್ರಾರಂಭವಾಗಲಿರುವ ಈ ಟೂರ್ನಿಗಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ. ಆದರೆ ಈ ಬಾರಿ ತಂಡದಲ್ಲಿ ಯಾರಿಗೆಲ್ಲಾ ಚಾನ್ಸ್ ಸಿಗಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಏಷ್ಯಾಕಪ್​ ಮೂಲಕ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಹಿಂತಿರುಗಲಿದ್ದಾರೆ. ಈ ಮೂವರ ಆಗಮನದೊಂದಿಗೆ ಕೆಲ ಆಟಗಾರರು ಹೊರಬೀಳುವುದು ಖಚಿತ.

ಆದರೆ ಈ ಮೂವರಲ್ಲಿ ಇಬ್ಬರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡಬಾರದೆಂದು ಅಭಿಪ್ರಾಯಪಟ್ಟಿದ್ದಾರೆ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ. ಚಾನೆಲ್​ ಚರ್ಚೆಯೊಂದರಲ್ಲಿ ಮಾಜಿ ಆಟಗಾರರಾದ ಸಂದೀಪ್ ಪಾಟೀಲ್ ಮತ್ತು ಎಂಎಸ್‌ಕೆ ಪ್ರಸಾದ್ ಜೊತೆ ಮಾತನಾಡಿದ ರವಿ ಶಾಸ್ತ್ರಿ ಕೆಎಲ್ ರಾಹುಲ್ ಹಾಗೂ ಅಯ್ಯರ್ ಅವರನ್ನು ಈಗ ಆಯ್ಕೆ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ಯಾಕಾಗಿ ಚಾನ್ಸ್​ ನೀಡಬಾರದು?

ಈ ಬಗ್ಗೆ ಮಾತನಾಡಿದ ರವಿ ಶಾಸ್ತ್ರಿ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಸುದೀರ್ಘ ಸಮಯದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಇದೀಗ ಗಾಯದಿಂದ ಚೇತರಿಸಿಕೊಂಡು ಹಿಂತಿರುಗುತ್ತಿದ್ದಾರೆ. ಇಬ್ಬರು ಆಟಗಾರರು ಕಂಬ್ಯಾಕ್ ಮಾಡಲು ಉತ್ಸುಕರಾಗಿದ್ದಾರೆ.

ಆದರೆ ದೀರ್ಘಾವಧಿಯಿಂದ ತಂಡದಿಂದ ಹೊರಗುಳಿದಿರುವ ಇವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಆಡಿಸುವುದು ಸೂಕ್ತವಲ್ಲ. ಏಕೆಂದರೆ ಗಾಯದ ಬಳಿಕ ಮರಳಿದಾಗ ಅವರ ಚಲನೆಯು ಈ ಹಿಂದಿನಂತೆ ಇರುವುದಿಲ್ಲ. ಇದರಿಂದ ವಿಕೆಟ್ ಕೀಪರ್ ಬ್ಯಾಟರ್ ಆಗಿ ಬಳಸಿಕೊಳ್ಳಲಾಗುವುದಿಲ್ಲ ಎಂದು ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ತಿಲಕ್​ಗೆ ಚಾನ್ಸ್​ ನೀಡಿ:

ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ್ದ ತಿಲಕ್ ವರ್ಮಾ ಅವರ ಬ್ಯಾಟಿಂಗ್ ಅನ್ನು ಹಾಡಿ ಹೊಗಳಿರುವ ರವಿ ಶಾಸ್ತ್ರಿ ಯುವ ದಾಂಡಿಗನಿಗೆ ಅವಕಾಶ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕದಲ್ಲಿ ಎಡಗೈ ಬ್ಯಾಟರ್​ನನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ ವಿಶ್ವಕಪ್ ತಂಡದಿಂದ 7 ಆಟಗಾರರು ಔಟ್..!

ಏಷ್ಯಾಕಪ್​ಗೆ 15 ಸದಸ್ಯರ ತಂಡ:

ಇದೇ ವೇಳೆ ರವಿ ಶಾಸ್ತ್ರಿ, ಸಂದೀಪ್ ಪಾಟೀಲ್ ಮತ್ತು ಎಂಎಸ್‌ಕೆ ಪ್ರಸಾದ್ ಜಂಟಿಯಾಗಿ ಏಷ್ಯಾಕಪ್​ಗಾಗಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದಾರೆ. ಈ ತಂಡದಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್​ಗೆ ಸ್ಥಾನ ನೀಡಿಲ್ಲ ಎಂಬುದು ವಿಶೇಷ. ಸಂದೀಪ್ ಪಾಟೀಲ್, ಎಂಎಸ್​ಕೆ ಪ್ರಸಾದ್ ಹಾಗೂ ರವಿ ಶಾಸ್ತ್ರಿ ಏಷ್ಯಾಕಪ್​ಗೆ ಆಯ್ಕೆ ಮಾಡಿದ ಟೀಮ್ ಇಂಡಿಯಾ ಈ ಕೆಳಗಿನಂತಿದೆ.

ಶುಭ್​ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ತಿಲಕ್​ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಏಷ್ಯಾಕಪ್ ವೇಳಾಪಟ್ಟಿ:

ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕ್ ತಂಡ ನೇಪಾಳವನ್ನು ಎದುರಿಸಲಿದೆ. ಇನ್ನು ಟೀಮ್ ಇಂಡಿಯಾ ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ