MS Dhoni ಧೋನಿಯಂತಹ ವ್ಯಕ್ತಿಯನ್ನು ನಾನು ನೋಡಿಲ್ಲ ಎಂದ ಟೀಮ್ ಇಂಡಿಯಾ ಮಾಜಿ ಆಟಗಾರ

MS Dhoni: ಮಹೇಂದ್ರ ಸಿಂಗ್ ಧೋನಿ ಇದ್ದಕ್ಕಿದ್ದಂತೆ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದರು.

MS Dhoni ಧೋನಿಯಂತಹ ವ್ಯಕ್ತಿಯನ್ನು ನಾನು ನೋಡಿಲ್ಲ ಎಂದ ಟೀಮ್ ಇಂಡಿಯಾ ಮಾಜಿ ಆಟಗಾರ
ms dhoni
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 26, 2022 | 10:26 PM

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಲ್ ಕ್ಯಾಪ್ಟನ್ ಎಂದೇ ಫೇಮಸ್. ಇದೀಗ ಧೋನಿಯನ್ನು ತುಂಬಾ ಹತ್ತಿರದಿಂದ ಬಲ್ಲವರಾಗಿರುವ ಭಾರತ ತಂಡದ ಮಾಜಿ ಕೋಚ್ ರವಿ ಶಾಸ್ತ್ರಿಯವರು ಟೀಮ್ ಇಂಡಿಯಾ ಮಾಜಿ ನಾಯಕನನ್ನು ಹೊಗಳಿದ್ದಾರೆ. ಎಂಎಸ್​ಡಿ ಅವರ ಶಾಂತ ಸ್ವಭಾವವನ್ನು ಉಲ್ಲೇಖಿಸಿ ಮಾತನಾಡಿರುವ ರವಿ ಶಾಸ್ತ್ರಿ ಧೋನಿಯಂತಹ ವ್ಯಕ್ತಿಯನ್ನು ನಾನು ನೋಡಿಲ್ಲ. ನಾನು ಕೂಡ ಕೆಲ ಆಟಗಾರರೊಂದಿಗೆ ಕೋಪಗೊಂಡಿದ್ದೆ. ಆದರೆ ಎಂದಿಗೂ ಧೋನಿ ಅವರೊಂದಿಗೆ ಸಿಟ್ಟು ಮಾಡಿಕೊಳ್ಳುವಂತಹ ಸನ್ನಿವೇಶವೇ ಬಂದಿರಲಿಲ್ಲ ಎಂದು ಹೇಳಿದರು.

ಲೆಜೆಂಡ್ಸ್ ಕ್ರಿಕೆಟ್ ಲೀಗ್ ಕಮಿಷನರ್ ಆಗಿರುವ ರವಿಶಾಸ್ತ್ರಿ ಶೋಯೆಬ್ ಅಖ್ತರ್ ಅವರೊಂದಿಗೆ ಮಾತುಕತೆ ವೇಳೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅಸಾಧಾರಣ ವ್ಯಕ್ತಿ. ಅಂತಹ ವ್ಯಕ್ತಿಯನ್ನು ನಾನು ಎಲ್ಲೂ ನೋಡಿಲ್ಲ. ನಾನು ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಆಟಗಾರರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಆದರೆ ಮಹೇಂದ್ರ ಸಿಂಗ್ ಧೋನಿಯಂತಹ ವ್ಯಕ್ತಿತ್ವ ಯಾರಲ್ಲೂ ನೋಡಿಲ್ಲ. ಸಚಿನ್ ಅದ್ಬುತ ಸ್ವಭಾವ ಹೊಂದಿದ್ದರೂ ಸಿಟ್ಟು ಮಾಡಿಕೊಳ್ಳುತ್ತಿದ್ದರು. ಆದರೆ ಮಹೇಂದ್ರ ಸಿಂಗ್ ಧೋನಿಗೆ ಹೇಗೆ ಕೋಪ ಮಾಡಿಕೊಳ್ಳಬೇಕೆಂದೇ ಗೊತ್ತಿರಲಿಲ್ಲ ಎಂದು ಟೀಮ್ ಇಂಡಿಯಾ ಮಾಜಿ ನಾಯಕನ ಗುಣದ ಬಗ್ಗೆ ರವಿ ಶಾಸ್ತ್ರಿ ಹೊಗಳಿದ್ದಾರೆ.

ಸದ್ಯ ರವಿ ಶಾಸ್ತ್ರಿ ಲೆಜೆಂಡ್ಸ್​ ಲೀಗ್​ನ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಶೋಯೆಬ್ ಅಖ್ತರ್ ಏಷ್ಯಾ ಲಯನ್ಸ್ ಪರ ಆಡುತ್ತಿದ್ದಾರೆ. ಈ ವೇಳೆ ರವಿ ಶಾಸ್ತ್ರಿಯನ್ನು ಸಂದರ್ಶನ ನಡೆಸಿದ ಅಖ್ತರ್, ಧೋನಿಯ ಕುರಿತಾದ ಕೆಲ ವಿಷಯಗಳನ್ನು ಪ್ರಸ್ತಾಪಿಸಿದ್ದರು. ಇದೇ ವೇಳೆ ರವಿ ಶಾಸ್ತ್ರಿ ಕೂಡ ಧೋನಿ ಜೊತೆಗಿನ ಒಡನಾಟದ ಬಗ್ಗೆ ಮತ್ತು ಅವರ ನಡವಳಿಕೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು.

ಮಹೇಂದ್ರ ಸಿಂಗ್ ಧೋನಿ ಇದ್ದಕ್ಕಿದ್ದಂತೆ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದರು. ಇದಾಗ್ಯೂ ಧೋನಿ ಹಾಗೂ ಸುರೇಶ್ ರೈನಾ ಐಪಿಎಲ್​ನಲ್ಲಿ ಕ್ರಿಕೆಟ್ ಮುಂದುವರೆಸಿದ್ದಾರೆ. ಈ ಬಾರಿ ಕೂಡ ಧೋನಿ ಸಿಎಸ್​ಕೆ ತಂಡದಲ್ಲಿ ರಿಟೈನ್ ಆಗಿದ್ದು, ಸುರೇಶ್ ರೈನಾ ತಂಡದಿಂದ ಹೊರಬಿದ್ದಿದ್ದಾರೆ. ಅಲ್ಲದೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವ ರೈನಾ ಅವರನ್ನು ಯಾವ ತಂಡ ಖರೀದಿಸಲಿದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(ravi shastri reaction about ms dhoni calmness)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ