AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran Ashwin: ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ದಾಖಲೆಯ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್

IND vs NZ Test: ಕಾನ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 4 ವಿಕೆಟ್ ಪಡೆದರೆ 417 ವಿಕೆಟ್ ಪಡೆದು ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಮೂರನೇ ಸ್ಪಿನ್ನರ್ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ. ಇದರ ಜೊತೆಗೆ ಮತ್ತೆರಡು ದಾಖಲೆಯ ಸನಿಹದಲ್ಲಿದ್ದಾರೆ.

Ravichandran Ashwin: ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ದಾಖಲೆಯ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್
R Ashwin India vs New Zealand
TV9 Web
| Updated By: Digi Tech Desk|

Updated on:Nov 25, 2021 | 11:32 AM

Share

ಟಿ20 ಸರಣಿಯಲ್ಲಿ (T20 Series) ಕ್ಲೀನ್ ಸ್ವಿಪ್ ಮಾಡಿ ಭಾರತ ತಂಡ ಇದೀಗ ಟೆಸ್ಟ್ ಸರಣಿ ಮೇಲೆ ಕಣ್ಣಿಟ್ಟಿದೆ. ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ (India vs New Zealand Test) ವಿರುದ್ಧ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದ ನಾಯಕ ಅಜಿಂಕ್ಯಾ ರಹಾನೆ (Ajinkya Rahane) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಸಾಕಷ್ಟು ಕುತೂಹಲ ಕೆರಳಿಸಿರುವ ಈ ಕಾನ್ಪುರ ಟೆಸ್ಟ್​ನಲ್ಲಿ ಭಾರತ ಪರ ಮೂವರು ಸ್ಪಿನ್ನರ್​ಗಳು ಕಣಕ್ಕಿಳಿದಿದ್ದಾರೆ. ಇವರಲ್ಲಿ ರವಿಚಂದ್ರನ್ ಅಶ್ವಿನ್ (Ravichandran Ashwin) ಸೇರಿ ಜಡೇಜಾ ಮತ್ತು ಅಕ್ಷರ್ ಪಟೇಲ್ ಸ್ಥಾನ ಪಡೆದುಕೊಂಡಿದ್ದಾರೆ. ಅಶ್ವಿನ್ ಅವರು ಈ ಸರಣಿಯಲ್ಲಿ ಹೊಸ ದಾಖಲೆಯ ಬರೆಯುವ ಹೊಸ್ತಿಲಲ್ಲಿದ್ದಾರೆ. ಅದು ಒಂದಲ್ಲ ಎರಡಲ್ಲಿ, ಬರೋಬ್ಬರಿ ಮೂರು ಹೊಸ ದಾಖಲೆ (R Ashwin Record) ಬರೆಯಲು ಸಜ್ಜಾಗಿದ್ದಾರೆ.

ಕಾನ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 4 ವಿಕೆಟ್ ಪಡೆದರೆ 417 ವಿಕೆಟ್ ಪಡೆದು ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಮೂರನೇ ಸ್ಪಿನ್ನರ್ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ. ಸದ್ಯ ಅಶ್ವಿನ್ ಅವರು ಆಡಿರುವ 79 ಟೆಸ್ಟ್‌ ಪಂದ್ಯಗಳಲ್ಲಿ 24.56ರ ಸರಾಸರಿಯಲ್ಲಿ 413 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಮತ್ತೊರ್ವ ಹಿರಿಯ ಆಫ್‌ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ 417 ಟೆಸ್ಟ್‌ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಭಜ್ಜಿ ಖ್ಯಾತಿಯ ಆಫ್‌ ಸ್ಪಿನ್ನರ್‌ ಅವರ ದಾಖಲೆಯನ್ನು ಮುರಿಯಲು ಅಶ್ವಿನ್‌ಗೆ ಕೇವಲ 4 ವಿಕೆಟ್‌ ಅಗತ್ಯವಿದೆ.

ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದವರ ಸಾಲಿನಲ್ಲಿ ಅನಿಲ್ ಕುಂಬ್ಳೆ (614) ಮತ್ತು ಕಪಿಲ್ ದೇವ್ (434) ಮೊದಲೆರಡು ಸ್ಥಾನಗಳಲ್ಲಿದ್ದಾರೆ. ಪ್ರಸ್ತುತ 413 ವಿಕೆಟ್ ಪಡೆದಿರುವ ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ. ಸರಣಿಯಲ್ಲಿ 22 ವಿಕೆಟ್ ಕಬಳಿಸಿದರೆ ಕಪಿಲ್ ದೇವ್ (434) ಅವರನ್ನೂ ಹಿಂದಿಕ್ಕಲಿದ್ದಾರೆ.

ಇದೇ ವೇಳೆ ಅಶ್ವಿನ್ 10 ವಿಕೆಟ್ ಪಡೆದರೆ ಒಂದು ಟೆಸ್ಟ್ ನಲ್ಲಿ ಅತೀ ಹೆಚ್ಚು ಬಾರಿ 10 ವಿಕೆಟ್ ಪಡೆದ ಅನಿಲ್ ಕುಂಬ್ಳೆ ದಾಖಲೆ ಸರಿಗಟ್ಟಲಿದ್ದಾರೆ. ಕುಂಬ್ಳೆ ಟೆಸ್ಟ್ ನಲ್ಲಿ 8 ಬಾರಿ ಈ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 22 ಬಾರಿ ಈ ಸಾಧನೆ ಮಾಡಿ ವಿಶ್ವದಲ್ಲೇ ನಂ.1 ಸ್ಥಾನದಲ್ಲಿದ್ದಾರೆ. ಹಿರಿಯ ಆಫ್‌ ಸ್ಪಿನ್ನರ್‌ ಆರ್‌ ಅಶ್ವಿನ್‌ ಇಲ್ಲಿಯವರೆಗೂ 7 ಬಾರಿ 10 ವಿಕೆಟ್‌ ಸಾಧನೆ ಮಾಡಿದ್ದಾರೆ. ಅತಿ ಹೆಚ್ಚು ಬಾರಿ ಈ ದಾಖಲೆ ಮಾಡಿದ ಎರಡನೇ ಬೌಲರ್‌ ಎಂಬ ಸಾಧನೆಯನ್ನು ಅಶ್ವಿನ್‌ ಮಾಡಿದ್ದಾರೆ.

ಇನ್ನು ನ್ಯೂಜಿಲೆಂಡ್‌ ನಾಯಕ ಕೇನ್‌ ವಿಲಿಯಮ್ಸನ್‌ ಅವರನ್ನು ಆರ್‌ ಅಶ್ವಿನ್‌ ಐದು ಬಾರಿ ಔಟ್‌ ಮಾಡಿದ್ದಾರೆ. ಇದಕ್ಕೂ ಮುನ್ನ ಪ್ರಗ್ಯಾನ್ ಓಜಾ ಕೂಡ 5 ಬಾರಿ ಬ್ಕ್ಯಾಕ್‌ಕ್ಯಾಪ್ಸ್‌ ನಾಯಕನನ್ನು ಔಟ್‌ ಮಾಡಿದ್ದರು. ಇದೀಗ ಈ ಇಬ್ಬರೂ ಜಂಟಿ ದಾಖಲೆಯನ್ನು ಹೊಂದಿದ್ದಾರೆ. ಹಾಗಾಗಿ, ಟೆಸ್ಟ್ ಸರಣಿಯಲ್ಲಿ ಕೇನ್‌ ವಿಲಿಯಮ್ಸನ್‌ ಅವರನ್ನು ಆರ್‌ ಅಶ್ವಿನ್‌ ಒಮ್ಮೆ ಔಟ್‌ ಮಾಡಿದರೆ, ನ್ಯೂಜಿಲೆಂಡ್‌ ನಾಯಕನನ್ನು ಅತಿ ಹೆಚ್ಚು ಬಾರಿ ಔಟ್‌ ಮಾಡಿದ ಭಾರತದ ಮೊದಲ ಬೌಲರ್‌ ಎಂಬ ದಾಖಲೆಗೆ ಅಶ್ವಿನ್ ಭಾಜನರಾಗಲಿದ್ದಾರೆ.

Ajinkya Rahane: ಟಾಸ್ ವೇಳೆ ಮಹತ್ವದ ಮಾಹಿತಿ ಹಂಚಿಕೊಂಡ ಅಜಿಂಕ್ಯಾ ರಹಾನೆ: ಏನದು ಗೊತ್ತೇ?

Ind vs NZ, Live 1st Test, Day 1

(Ravichandran Ashwin is on the cusp of achieving yet another 3 new record during India vs New Zealand Test)

Published On - 11:28 am, Thu, 25 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ