R Ashwin: ಮಂಕಡಿಂಗ್ ಮಾಡುವ ಸುಲಭ ಅವಕಾಶವಿದ್ದರೂ ಕೈಚೆಲ್ಲಿದ ಆರ್. ಅಶ್ವಿನ್: ವೈರಲ್ ವಿಡಿಯೋ ನೋಡಿ

India vs South Africa, T20 World Cup: ಟಿ20 ವಿಶ್ವಕಪ್​ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಅವರು ಡೇವಿಡ್​ ಮಿಲ್ಲರ್​ ಅವರನ್ನು ಮಂಕಡಿಂಗ್ ಮಾಡುವ ಅವಕಾಶವಿದ್ದರೂ ಅದಕ್ಕೆ ಮನಸ್ಸು ಮಾಡಲಿಲ್ಲ.

R Ashwin: ಮಂಕಡಿಂಗ್ ಮಾಡುವ ಸುಲಭ ಅವಕಾಶವಿದ್ದರೂ ಕೈಚೆಲ್ಲಿದ ಆರ್. ಅಶ್ವಿನ್: ವೈರಲ್ ವಿಡಿಯೋ ನೋಡಿ
R Ashwin and David Miller
Follow us
TV9 Web
| Updated By: Vinay Bhat

Updated on:Oct 31, 2022 | 10:32 AM

ಪರ್ತ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್​ನ (T20 World Cup) ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಅನುಭವಿಸಿದ ಸೋಲು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ಮಾಡಿದ ಕೆಲ ತಪ್ಪುಗಳು ಸೋಲಿಗೆ ಮುಖ್ಯ ಕಾರಣವಾಯಿತು. ಭಾರತದ ಸ್ಟಾರ್ ಫೀಲ್ಡರ್​ಗಳೆಂದು ಖ್ಯಾತಿ ಪಡೆದಿರುವ, ಯಾವುದೇ ಕಷ್ಟಕರವಾದ ಕ್ಯಾಚ್ ಅನ್ನು ಸುಲಭವಾಗಿ ಹಿಡಿಯುವ ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ ಅವರೇ ಸುಲಭ ಕ್ಯಾಚ್, ರನೌಟ್ ಅನ್ನು ಮಿಸ್ ಮಾಡಿಕೊಂಡರು. ಇದರ ಜೊತೆಗೆ ರವಿಚಂದ್ರನ್ ಅಶ್ವಿನ್ (R Ashwin) ಕೂಡ ಮಂಕಡಿಂಗ್ ಮಾಡುವ ಅವಕಾಶವನ್ನು ತಪ್ಪಿಸಿಕೊಂಡರು. ಐಸಿಸಿಯ ನೂತನ ನಿಯಮದಲ್ಲಿ ಮಂಕಡಿಂಗ್ ಮಾಡಬಹುದು ಎಂಬ ಆಯ್ಕೆ ನೀಡಿದ್ದರೂ ಅಶ್ವಿನ್ ಇದಕ್ಕೆ ಮನಸ್ಸು ಮಾಡಲಿಲ್ಲ.

ದಕ್ಷಿಣ ಆಫ್ರಿಕಾ ಬ್ಯಾಟಿಂಗ್​ ಇನ್ನಿಂಗ್ಸ್​ನ 18ನೇ ಓವರ್​ನಲ್ಲಿ ಈ ಘಟನೆ ನಡೆಯಿತು. ಆರ್. ಅಶ್ವಿನ್ ಅವರು ಕೊನೆಯ ಎಸೆತ ಹಾಕಲು ಮುಂದೆ ಬಂದಾಗ ನಾನ್ ಸ್ಟ್ರೈಕರ್​​ನಲ್ಲಿದ್ದ ಡೇವಿಡ್ ಮಿಲ್ಲರ್ ಚೆಂಡು ಎಸೆಯುವ ಮುನ್ನವೇ ಕ್ರೀಸ್ ಬಿಟ್ಟರು. ಇದನ್ನು ತಕ್ಷಣ ಗಮನಿಸಿದ ಅಶ್ವಿನ್ ಬಾಲ್ ಎಸೆಯದೆ ಸುಮ್ಮನಾದರು. ಈ ಸಂದರ್ಭ ಅಶ್ವಿನ್​ಗೆ ಮಿಲ್ಲರ್ ಅವರನ್ನು ಮಂಕಡಿಂಗ್ ಮಾಡುವ ಅವಕಾಶವಿತ್ತು. ಆದರೆ, ಆರೀತಿ ಮಾಡದೆ ಪುನಃ ಬೌಲಿಂಗ್ ಮಾಡಲು ಹಿಂತಿರುಗಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಇದನ್ನೂ ಓದಿ
Image
Dinesh Karthik Injury: ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಶಾಕ್: ಸ್ಟಾರ್ ಆಟಗಾರನಿಗೆ ಇಂಜುರಿ
Image
Rohit Sharma: ಪಂದ್ಯ ಮುಗಿದ ಬಳಿಕ ತಂಡದ ಸೋಲಿಗೆ ನಾಯಕ ರೋಹಿತ್ ಶರ್ಮಾ ದೂರಿದ್ದು ಯಾರನ್ನು ಗೊತ್ತೇ?
Image
T20 World Cup 2022 Point Table: ಟೀಮ್ ಇಂಡಿಯಾಗೆ ಸೋಲು: ಪಾಯಿಂಟ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ
Image
T20 World Cup: ಸೆಮಿಫೈನಲ್​ ಪ್ರವೇಶಿಸಲು ಪಾಕಿಸ್ತಾನಕ್ಕೆ ಇರುವುದು ಇದೊಂದು ದಾರಿ..!
View this post on Instagram

A post shared by ICC (@icc)

18ನೇ ಓವರ್ ಮಾಡಿದ ಅಶ್ವಿನ್:

ಪಂದ್ಯ ರೋಚಕತೆ ಸೃಷ್ಟಿಸಿದ್ದ ಸಂದರ್ಭ 18ನೇ ಓವರ್ ಬೌಲಿಂಗ್ ಮಾಡಲು ಆರ್. ಅಶ್ವಿನ್ ಅವರಿಗೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈರೀತಿಯ ಸಂದರ್ಭದಲ್ಲಿ ಸ್ನಿನ್ನರ್​ಗೆ ಬೌಲಿಂಗ್ ನೀಡಿದ್ದು ಸರಿಯೇ? ಎಂದು ಅನೇಕ ಪ್ರಶ್ನಿಸುತ್ತಿದ್ದಾರೆ. ಇದರ ನಡುವೆ ನಾಯಕ ರೋಹಿತ್ ಶರ್ಮಾ ತಾವು ತೆಗೆದುಕೊಂಡ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ”ಕೊನೆಯ ಓವರ್​​ನಲ್ಲಿ ಸ್ಪಿನ್ನರ್​ಗೆ ಬೌಲಿಂಗ್ ನೀಡಿದರೆ ಏನು ಆಗುತ್ತದೆ ಎಂಬುದನ್ನು ನಾನು ನೋಡಿದ್ದೇನೆ. ಹೀಗಾಗಿ ನಾನು ಬೇರೆ ದಾರಿಯನ್ನು ಆಯ್ಕೆ ಮಾಡಿಕೊಂಡೆ. ಅಶ್ವಿನ್ ಅವರ ಓವರ್ ಮುಗಿಸಿ ಬಿಟ್ಟರೆ ವೇಗಿಗಳು ಸರಿಯಾದ ಓವರ್ ಬೌಲಿಂಗ್ ಮಾಡಲು ಸಾಧ್ಯವಾಗುತ್ತದೆ ಎಂಬುದು ತಲೆಯಲ್ಲಿತ್ತು. ಕೆಲ ಸಂದರ್ಭದಲ್ಲಿ ಈರೀತಿಯಾಗಿ ಯೋಜನೆ ಮಾಡಬೇಕಾಗುತ್ತದೆ,” ಎಂದು ರೋಹಿತ್ ಹೇಳಿದ್ದಾರೆ.

ಕಾರ್ತಿಕ್ ಇಂಜುರಿ:

ಸೋಲಿನ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್, ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಗಾಯಕ್ಕೆ ತುತ್ತಾಗಿದ್ದು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ಪಂದ್ಯದ ಮಧ್ಯೆ ಭಾರತ ಫೀಲ್ಡಿಂಗ್ ಮಾಡುವಾಗ 16ನೇ ಓವರ್​​ ವೇಳೆ ಕಾರ್ತಿಕ್​ಗೆ ಜೋರಾಗಿ ಬೆನ್ನು ನೋವು ಕಾಣಿಸಿಕೊಂಡಿದೆ. ಈ ಸಂದರ್ಭ ಕಾರ್ತಿಕ್​ಗೆ ಕೀಪಿಂಗ್ ಕೂಡ ಮಾಡಲಾಗಿಲ್ಲ. ಹೀಗಾಗಿ ಮೈದಾನ ತೊರೆದು ಇವರ ಬದಲು ರಿಷಭ್ ಪಂತ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದರು. ಕಾರ್ತಿಕ್ ಇಂಜುರಿ ಬಗ್ಗೆ ಬಿಸಿಸಿಐ ಇನ್ನಷ್ಟೆ ಅಧಿಕೃತ ಮಾಹಿತಿ ನೀಡಬೇಕಿದೆ.

ಸೋತ ಭಾರತ:

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿತು. ಸೂರ್ಯಕುಮಾರ್ ಯಾದವ್ 40 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್ ಬಾರಿಸಿ 68 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ 15 ರನ್ ಬಾರಿಸಿದ್ದೇ ಹೆಚ್ಚು. ಉಳಿದ ಬ್ಯಾಟರ್​ಗಳು ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಪೆವಿಲಿಯನ್ ಸೇರಿಕೊಂಡರು. ಆಫ್ರಿಕಾ ಪರ ಲುಂಗಿ ಎನ್​ಗಿಡಿ 4 ವಿಕೆಟ್ ಕಿತ್ತರು. ಟಾರ್ಗೆಟ್ ಬೆನ್ನಟ್ಟಿದ ಆಫ್ರಿಕಾ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಆ್ಯಡಂ ಮರ್ಕ್ರಮ್ (52) ಹಾಗೂ ಡೇವಿಡ್ ಮಿಲ್ಲರ್ (ಅಜೇಯ 59) ಅವರ 73 ರನ್​ಗಳ ಜೊತೆಯಾಟದ ನೆರವಿನಿಂದ 19.4 ಓವರ್​ನಲ್ಲಿ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಹರಿಣಗಳ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದರೆ ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

Published On - 10:32 am, Mon, 31 October 22

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ