Ravindra Jadeja: ಪಂದ್ಯ ಮುಗಿದ ಬಳಿಕ ಈ ಬಾರಿ ರವೀಂದ್ರ ಜಡೇಜಾ ಸೋಲಿಗೆ ನೀಡಿದ ಕಾರಣವೇನು ಗೊತ್ತೇ?

PBKS vs CSK: ಪಂಜಾಬ್ 4 ವಿಕೆಟ್‌ಗೆ 187 ರನ್ ಕಲೆಹಾಕಿದರೆ ಸಿಎಸ್‌ಕೆ ತಂಡ 6 ವಿಕೆಟ್‌ಗೆ 176 ರನ್‌ಗಳಿಸಲಷ್ಟೇ ಶಕ್ತವಾಯಿತು. ಪಂದ್ಯ ಮುಗಿದ ಬಳಿಕ ತಂಡದ ಸೋಲಿನ ಬಗ್ಗೆ ಚೆನ್ನೈ ನಾಯಕ ರವೀಂದ್ರ ಜಡೇಜಾ (Ravindra Jadeja) ಮಾತನಾಡಿದ್ದು ಏನು ಹೇಳಿದರು ಎಂಬುದನ್ನು ಕೇಳಿ.

Ravindra Jadeja: ಪಂದ್ಯ ಮುಗಿದ ಬಳಿಕ ಈ ಬಾರಿ ರವೀಂದ್ರ ಜಡೇಜಾ ಸೋಲಿಗೆ ನೀಡಿದ ಕಾರಣವೇನು ಗೊತ್ತೇ?
Jadeja post-match presentation PBKS vs CSK
Follow us
TV9 Web
| Updated By: Vinay Bhat

Updated on: Apr 26, 2022 | 8:57 AM

ಐಪಿಎಲ್ 2022 ರಲ್ಲಿ (IPL 2022) ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕಳಪೆ ಪ್ರದರ್ಶನ ಮತ್ತೆ ಮುಂದುವರೆದಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸಿಎಸ್​​ಕೆ (PBKS vs CSK) ಇದೀಗ ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ. ಶಿಖರ್ ಧವನ್ (88*ರನ್, 59 ಎಸೆತ, 9 ಬೌಂಡರಿ, 2 ಸಿಕ್ಸರ್) ಏಕಾಂಗಿ ಬ್ಯಾಟಿಂಗ್ ನಿರ್ವಹಣೆ ಹಾಗೂ ಬೌಲರ್‌ಗಳ ಸಂಘಟಿತ ಹೋರಾಟದ ಫಲವಾಗಿ ಪಂಜಾಬ್ ಕಿಂಗ್ಸ್ ರೋಚಕ ಗೆಲುವಿನ ನಗೆ ಬೀರಿತು. ಹಾಲಿ ಚಾಂಪಿಯನ್ನರು 11 ರನ್‌ಗಳಿಂದ ಸೋತರು. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದರೂ ಚೆನ್ನೈ ಟಾರ್ಗೆಟ್ ಬೆನ್ನಟ್ಟುವಲ್ಲಿ ಮತ್ತೆ ಎಡವಿತು. ಪಂಜಾಬ್ 4 ವಿಕೆಟ್‌ಗೆ 187 ರನ್ ಕಲೆಹಾಕಿದರೆ ಸಿಎಸ್‌ಕೆ ತಂಡ 6 ವಿಕೆಟ್‌ಗೆ 176 ರನ್‌ಗಳಿಸಲಷ್ಟೇ ಶಕ್ತವಾಯಿತು. ಪಂದ್ಯ ಮುಗಿದ ಬಳಿಕ ತಂಡದ ಸೋಲಿನ ಬಗ್ಗೆ ಚೆನ್ನೈ ನಾಯಕ ರವೀಂದ್ರ ಜಡೇಜಾ (Ravindra Jadeja) ಮಾತನಾಡಿದ್ದು ಏನು ಹೇಳಿದರು ಎಂಬುದನ್ನು ಕೇಳಿ.

“ನಮ್ಮ ಆರಂಭ ಅತ್ಯುತ್ತಮವಾಗಿತ್ತು. ಹೊಸ ಬಾಲ್ ಮೂಲಕ ಚೆಂಡನ್ನು ಸರಿಯಾದ ಜಾಗದಲ್ಲಿ ಹಾಕಿದೆವು. ಆದರೆ, ಕೊನೆಯ 2-3 ಓವರ್​ಗಳಲ್ಲಿ 10-15 ರನ್​​ಗಳನ್ನು ಹೆಚ್ಚು ಬಿಟ್ಟುಕೊಟ್ಟೆವು. ನಾವು ಯೋಜನೆ ಮಾಡಿಕೊಂಡ ರೀತಿ ಅದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಲಿಲ್ಲ,” ಎಂದು ಹೇಳುವ ಮೂಲಕ ಬೌಲರ್​ಗಳು ಸೋಲಿಗೆ ಕಾರಣರಾದರು ಎಂದು ಹೇಳಿದ್ದಾರೆ. “ಅಂಬಟಿ ರಾಯುಡು ಬ್ಯಾಟಿಂಗ್ ಉತ್ತಮವಾಗಿತ್ತು. ಆದರೆ, ಈಗಾಗಲೇ ಹೇಳಿರುವಂತೆ ಅವರನ್ನು 170 ರನ್​​ಗಳ ಒಳಗೆ ಕಟ್ಟಿಹಾಕಬೇಕಿತ್ತು,” ಎಂದಿದ್ದಾರೆ.

“ಚೇಸಿಂಗ್ ಮಾಡುವ ವೇಳೆ ಮೊದಲ ಆರು ಓವರ್​ನಲ್ಲಿ ನಾವು ಉತ್ತಮ ಆರಂಭ ಪಡೆದುಕೊಳ್ಳಲಿಲ್ಲ. ಪವರ್ ಪ್ಲೇನಲ್ಲಿ ನಾವು ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಕೆಲವು ವಿಭಾಗಗಳಲ್ಲಿ ಸುಧಾರಿಸಿ ಇನ್ನಷ್ಟು ಬಲಿಷ್ಠವಾಗಿ ಕಮ್​ಬ್ಯಾಕ್ ಮಾಡುತ್ತೇವೆ,” ಎಂದು ರವೀಂದ್ರ ಜಡೇಜಾ ಪಂದ್ಯ ಮುಗಿದ ಬಳಿಕ ಹೇಳಿದ್ದಾರೆ. ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಮೇ 1 ರಂದು ಸನ್​​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡಲಿದೆ.

ಗೆದ್ದ ತಂಡದ ನಾಯಕ ಮಯಾಂಕ್ ಅಗರ್ವಾಲ್ ಮಾತನಾಡಿ, “ನಮ್ಮ ಬೌಲಿಂಗ್ ಚೆನ್ನಾಗಿತ್ತು. ಅರ್ಶ್​​ದೀಪ್ ಸಿಂಗ್ ಓವರ್ ಕಠಿಣವಾಗಿತ್ತು. ಅವರು ನಮಗೆ ಸಿಕ್ಕಿದ್ದು ಅದೃಷ್ಟ. ರಾಯುಡು ಹಾಗೂ ರುತುರಾಜ್ ವಿಕೆಟ್ ಕಿತ್ತ ರಬಾಡ ಬೌಲಿಂಗ್ ಕೂಡ ಉತ್ತಮವಾಗಿತ್ತು. ಇವರಿಬ್ಬರು ನಮ್ಮ ಆಸ್ತಿ. ತಂಡವಾಗಿ ನಾವು ಕೆಲ ಯೋಜನೆಗಳನ್ನು ಜಾರಿಗೆ ತಬೇಕಾಗುತ್ತದೆ. ಈ ಗೆಲುವು ಸಂತಸ ತಂದಿದೆ. ಇದೇ ಪ್ರದರ್ಶನವನ್ನು ಮುಂದಿನ ಪಂದ್ಯದಲ್ಲೂ ಮುಂದುವರೆಸುತ್ತೇವೆ. ನಾವು ಸತತವಾಗಿ ಇನ್ನಷ್ಟು ಪಂದ್ಯವನ್ನು ಗೆಲ್ಲಬೇಕಿದೆ,” ಎಂಬುದು ಮಯಾಂಕ್ ಮಾತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಓಪನರ್ ಶಿಖರ್ ಧವನ್ ಅಮೋಘ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್‌ ಸ್ಪರ್ಧಾತ್ಮಕ ಮೊತ್ತವನ್ನ ಕಲೆಹಾಕಿತು. ಧವನ್ ಹಾಗೂ ರಾಜಪಕ್ಷೆ ಶತಕದ ಜೊತೆಯಾಟವಾಡಿದರು. ಧವನ್ ತನ್ನ 200ನೇ ಐಪಿಎಲ್ ಪಂದ್ಯದಲ್ಲಿ ಸ್ಫೋಟಕ ಆಟವಾಡುವುದುರ ಜೊತೆಗೆ ತಂಡದ ಸ್ಕೋರನ್ನ ಹೆಚ್ಚಿಸಿದರು. 59 ಎಸೆತಗಳಲ್ಲಿ ಅಜೇಯ 88 ರನ್ಪಂಜಾಬ್ 4 ವಿಕೆಟ್‌ಗೆ 187 ರನ್ ಕಲೆಹಾಕಿದರೆ ಸಿಎಸ್‌ಕೆ ತಂಡ 6 ವಿಕೆಟ್‌ಗೆ 176 ರನ್‌ಗಳಿಸಲಷ್ಟೇ ಶಕ್ತವಾಯಿತು. ಪಂದ್ಯ ಮುಗಿದ ಬಳಿಕ ತಂಡದ ಸೋಲಿನ ಬಗ್ಗೆ ಚೆನ್ನೈ ನಾಯಕ ರವೀಂದ್ರ ಜಡೇಜಾ (Ravindra Jadeja) ಮಾತನಾಡಿದ್ದು ಏನು ಹೇಳಿದರು ಎಂಬುದನ್ನು ಕೇಳಿ. ಕಲೆಹಾಕಿದರು. ರಾಜಪಕ್ಷ 32 ಎಸೆತಗಳಲ್ಲಿ 42 ರನ್ ಕಲೆಹಾಕಿದರು. 20 ಓವರ್‌ಗಳಲ್ಲಿ ಪಂಜಾಬ್ ಕಿಂಗ್ಸ್‌ 187 ರನ್ ಕಲೆಹಾಕಿತು. ಚೆನ್ನೈಗೆ ಆರಂಭ ಉತ್ತಮವಾಗಿರಲಿಲ್ಲ. ಆದರೆ, ರುತುರಾಜ್ ಗಾಯಕ್ವಾಡ್ ಹಾಗೂ ಅಂಬಟಿ ರಾಯುಡು 49 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ರಾಯುಡು 28 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಕೊನೆಯ ಓವರ್‌ನಲ್ಲಿ ಗೆಲುವಿಗೆ 27 ರನ್ ಬೇಕಾಗಿತ್ತು. ಆದರೆ ಈ ಬಾರಿ ಫಿನಿಶರ್ ಧೋನಿಗೆ (12) ಪಂದ್ಯ ಗೆಲ್ಲಿಸಲು ಸಾಧ್ಯವಾಗಲಿಲ್ಲ. ಸಿಎಸ್​ಕೆ 176 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲುಂಡಿತು.

PBKS vs CSK: ಈ ಬಾರಿ ನಡೆಯಲಿಲ್ಲ ಧೋನಿ ಆಟ: ಐಪಿಎಲ್ 2022 ರಲ್ಲಿ ಸಿಎಸ್​​ಕೆ ಹಾದಿ ಬಹುತೇಕ ಅಂತ್ಯ

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ