Ravindra Jadeja Retirement: ಕೊಹ್ಲಿ-ರೋಹಿತ್ ನಂತರ ಟಿ20 ಮಾದರಿಗೆ ವಿದಾಯ ಹೇಳಿದ ರವೀಂದ್ರ ಜಡೇಜಾ..!

Ravindra Jadeja Retirement: ಐತಿಹಾಸಿಕ ವಿಜಯದ ನಂತರ, ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ತಕ್ಷಣವೇ ಅಂತರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದರೆ, ಇದೀಗ ಒಂದು ದಿನದ ನಂತರ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ.

Ravindra Jadeja Retirement: ಕೊಹ್ಲಿ-ರೋಹಿತ್ ನಂತರ ಟಿ20 ಮಾದರಿಗೆ ವಿದಾಯ ಹೇಳಿದ ರವೀಂದ್ರ ಜಡೇಜಾ..!
ರವೀಂದ್ರ ಜಡೇಜಾ
Follow us
|

Updated on:Jun 30, 2024 | 5:52 PM

ಒಂದೆಡೆ ಟೀಂ ಇಂಡಿಯಾ ಟಿ20 ವಿಶ್ವ ಚಾಂಪಿಯನ್ ಆಗಿರುವ ಸಂತಸ ಅಭಿಮಾನಿಗಳ ಮನದಲ್ಲಿ ಮೂಡಿದ್ದರೆ, ಇನ್ನೊಂದೆಡೆ ತಂಡದಲ್ಲಿನ ಅನುಭವಿ ಆಟಗಾರರ ವಿದಾಯದ ಪರ್ವ ಒಂದರ ಹಿಂದೆ ಒಂದರಂತೆ ಬರಸಿಡಿಲಿನಂತೆ ಬಂದೆರಗುತ್ತಿದೆ. ನಿನ್ನೆ ಟೀಂ ಇಂಡಿಯಾ ವಿಶ್ವಕಪ್ ಗೆದ್ದ ಬಳಿಕ ತಂಡದ ಮಾಜಿ ನಾಯಕ ಹಾಗೂ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಸ್ವಲ್ಪ ಸಮಯದ ನಂತರ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಈ ಸ್ವರೂಪಕ್ಕೆ ವಿದಾಯ ಹೇಳಿದ್ದರು. ಇದೀಗ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ಇದೇ ಮಾದರಿಯಲ್ಲಿ ನೀಲಿ ಜೆರ್ಸಿಯನ್ನು ಶಾಶ್ವತವಾಗಿ ತೊರೆಯುವುದಾಗಿ ಘೋಷಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಟಿ20 ವಿಶ್ವಕಪ್ ಟ್ರೋಫಿಯೊಂದಿಗಿರುವ ಫೋಟೋವನ್ನು ಶೇರ್ ಮಾಡುವ ಮೂಲಕ ಜಡೇಜಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಜಡೇಜಾ

ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭಾವನಾತ್ಮಕ ಸಂದೇಶ ಬರೆದಿರುವ ರವೀಂದ್ರ ಜಡೇಜಾ, ನಾನು ಹೃದಯ ತುಂಬಿದ ಸಂತೋಷದಿಂದ ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳುತ್ತಿದ್ದೇನೆ. ಓಡುವ ಕುದುರೆಯಂತೆ ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದುದನ್ನು ನೀಡಲು ಪ್ರಯತ್ನಿಸಿದ್ದೇನೆ. ಇದೀಗ ಇತರ ಸ್ವರೂಪಗಳಲ್ಲಿಯೂ ಅದೇ ರೀತಿಯ ಪ್ರದರ್ಶನವನ್ನು ಮುಂದುವರಿಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ಟಿ20 ವಿಶ್ವಕಪ್ ಟ್ರೋಫಿಯನ್ನು ಗೆಲ್ಲುವ ಕನಸು ನನಸಾಗಿದೆ ಮತ್ತು ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಅತಿದೊಡ್ಡ ಕ್ಷಣವಾಗಿದೆ. ಈ ನೆನಪುಗಳಿಗಾಗಿ ಮತ್ತು ನಿಮ್ಮ ನಿರಂತರ ಪ್ರೋತ್ಸಾಹಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಸಪ್ಪೆ ಪ್ರದರ್ಶನ

ಟಿ20 ಮಾದರಿಗೆ ವಿದಾಯ ಹೇಳಿರುವ ರವೀಂದ್ರ ಜಡೇಜಾ ಈ ಬಾರಿಯ ಟಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಎಲ್ಲಾ 8 ಪಂದ್ಯಗಳನ್ನು ಆಡಿದರು. ಆದಾಗ್ಯೂ, ಈ ಪಂದ್ಯಾವಳಿಯಲ್ಲಿ ಅವರಿಗೆ ಬ್ಯಾಟಿಂಗ್ ಅಥವಾ ಬೌಲಿಂಗ್‌ನಲ್ಲಿ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಪಂದ್ಯಾವಳಿಯ 7 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡುವ ಅವಕಾಶ ಪಡೆದಿದ್ದ ಜಡೇಜಾ ಕೇವಲ 1 ವಿಕೆಟ್ ಮಾತ್ರ ಪಡೆದರು. 5 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದ್ದ ಜಡೇಜಾ ಕೇವಲ 35 ರನ್ ಕಲೆಹಾಕಿದ್ದರು. ಆದರೆ ಫೀಲ್ಡಿಂಗ್‌ನಲ್ಲಿ ಮಾತ್ರ ಜಡೇಜಾ ಎಂದಿನಂತೆ ತಮ್ಮ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದರು.

ಟಿ20 ವೃತ್ತಿ ಬದುಕು ಹೀಗಿತ್ತು

ರವೀಂದ್ರ ಜಡೇಜಾ ಅವರ ಅಂತಾರಾಷ್ಟ್ರೀಯ ಟಿ20 ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಇದುವರೆಗೆ 74 ಪಂದ್ಯಗಳನ್ನಾಡಿರುವ ಜಡೇಜಾ, 21.46 ರ ಸರಾಸರಿಯಲ್ಲಿ 515 ರನ್​ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್‌ನಲ್ಲಿ ಜಡೇಜಾ 71 ಇನ್ನಿಂಗ್ಸ್‌ಗಳಲ್ಲಿ 29.85 ಸರಾಸರಿಯಲ್ಲಿ 54 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರಲ್ಲಿ ಜಡೇಜಾ 15 ರನ್‌ಗಳಿಗೆ 3 ವಿಕೆಟ್‌ ಪಡೆದಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Sun, 30 June 24

ತಾಜಾ ಸುದ್ದಿ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಬಸ್​ಗೆ ಚಾಲನೆ ನೀಡಿ ಜನರ ಕುಂದು-ಕೊರತೆ ಅಲಿಸಿದ ಶಾಸಕ ಸಿಮೆಂಟ್ ಮಂಜು
ಹಾಸನ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ
ಹಾಸನ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ