Ravindra Jadeja: ಭರ್ಜರಿ ಫಾರ್ಮ್​ನಲ್ಲಿರುವಾಗಲೇ ನಿವೃತ್ತಿ ನೀಡಲು ಮುಂದಾದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ

Ravindra Jadeja retirement: ರವೀಂದ್ರ ಜಡೇಜಾಗೆ ಇಂಜುರಿ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಅಲ್ಲದೆ ಗಾಯದ ಸಮಸ್ಯೆಯಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಇವರು ಹೊರಗುಳಿದಿದ್ದಾರೆ. ಇದೇ ಕಾರಣಕ್ಕೆ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿಯಾಗಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Ravindra Jadeja: ಭರ್ಜರಿ ಫಾರ್ಮ್​ನಲ್ಲಿರುವಾಗಲೇ ನಿವೃತ್ತಿ ನೀಡಲು ಮುಂದಾದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ
Team India
Follow us
TV9 Web
| Updated By: Vinay Bhat

Updated on: Dec 14, 2021 | 12:32 PM

ಇತ್ತೀಚೆಗಷ್ಟೆ ಟೀಮ್ ಇಂಡಿಯಾದ (Team India) ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರು ಟೆಸ್ಟ್ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೆ ಸದ್ಯ ಮತ್ತೊಬ್ಬ ಟೀಮ್ ಇಂಡಿಯಾ ಆಟಗಾರ ನಿವೃತ್ತಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಮೂಲಗಳ ಪ್ರಕಾರ, ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ಭಾರತದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರು ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಕಾರಣ ಜಡೇಜಾ ಇತ್ತೀಚೆಗೆ ಪದೇ ಪದೇ ಗಾಯಕ್ಕೊಳಗಾಗುತ್ತಿರುವುದು (Ravindra Jadeja Injury). ಇದೇ ಕಾರಣಕ್ಕೆ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿಯಾಗಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ಹೆಚ್ಚು ಗಮನ ಕೊಡುವ ದೃಷ್ಟಿಯಿಂದ ಟೆಸ್ಟ್ ಕ್ರಿಕೆಟ್​ಗೆ ಅವರು ವಿದಾಯ (Ravindra Jadeja retirement) ಹೇಳಬಹುದು ಎನ್ನುತ್ತಿವೆ ಈ ವರದಿಗಳು.

ಹೌದು, ರವೀಂದ್ರ ಜಡೇಜಾಗೆ ಇಂಜುರಿ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಅಲ್ಲದೆ ಗಾಯದ ಸಮಸ್ಯೆಯಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಇವರು ಹೊರಗುಳಿದಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ವೇಳೆ ಮುಂದೋಳಿನ ಗಾಯಕ್ಕೆ ತುತ್ತಾಗಿದ್ದ ಜಡೇಜಾ, ಬಳಿಕ 2ನೇ ಟೆಸ್ಟ್‌ನಿಂದ ಹೊರಗುಳಿದಿದ್ದರು. ಮೊಣಕಾಲು ಗಾಯವೂ ಕಾಡಿರುವುದರಿಂದ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಗೂ ಅಲಭ್ಯರಾಗಿದ್ದಾರೆ.

ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ ಮಾದರಿಗೆ ನಿವೃತ್ತಿ ಘೋಷಿಸಲು ಯೋಚಿಸುತ್ತಿರುವ ಬಗ್ಗೆ ದೈನಿಕ್ ಜಾಗರಣ್ ಪತ್ರಿಕೆ ವರದಿ ಮಾಡಿದೆ. ಜಡೇಜಾಗೆ ಮೊಣಕಾಲು ಗಾಯವೂ ಕಾಡಿರುವುದರಿಂದ ಶೀಘ್ರದಲ್ಲೇ ಶಸಚಿಕಿತ್ಸೆ ಒಳಗಾಗುವ ಸಾಧ್ಯತೆ ಇದ್ದು, ಇದರಿಂದಾಗಿ ಅವರು ಬರೋಬ್ಬರಿ 6 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಬೇಕಾಗುತ್ತದೆ. ಹೀಗಾಗಿ ಮುಂದಿನ ವರ್ಷ ತವರಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಗೂ ಅವರು ಗೈರಾಗಲಿದ್ದಾರೆ. ಜೊತೆಗೆ ಐಪಿಎಲ್ 2022ರ ವರೆಗೂ ಜಡೇಜಾ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ.

33 ವರ್ಷದ ರವೀಂದ್ರ ಜಡೇಜಾ ಟೀಮ್ ಇಂಡಿಯಾ ಪರವಾಗಿ ಎಲ್ಲಾ ಮಾದರಿಯ ತಂಡದಲ್ಲಿಯೂ ಖಾಯಂ ಸದಸ್ಯನಾಗಿ ಗುರುತಿಸಿಕೊಂಡಿದ್ದು ಅನೇಕ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದಾರೆ. ತವರಿನಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಮಿಂಚಿರುವ ಜಡ್ಡು ಬ್ಯಾಟಿಂಗ್ ಬೌಲಿಂಗ್ ಜೊತೆಗೆ ಅಮೋಘ ಫಿಲ್ಡಿಂಗ್‌ನಿಂದಲೂ ಎದುರಾಳಿಗೆ ಆಘಾತ ನಿಡುವ ಸಾಮರ್ಥ್ಯಹೊಂದಿದ್ದು ಇದೇ ಕಾರಣದಿಂದಾಗಿ ಅವರು ತ್ರಿ ಡೈಮೆನ್ಶನ್ ಆಟಗಾರ ಎನಿಸಿಕೊಂಡಿದ್ದಾರೆ. ಜಡೇಜಾ ಭಾರತ ಪರ ಇದುವರೆಗೆ 56 ಟೆಸ್ಟ್ ಆಡಿದ್ದು, 223 ವಿಕೆಟ್ ಮತ್ತು 1 ಶತಕ ಸಹಿತ 2,145 ರನ್ ಗಳಿಸಿದ್ದಾರೆ.

Virat Kohli: ಏಕದಿನ ಸರಣಿಯಿಂದ ಕೊಹ್ಲಿ ಹೊರಗುಳಿಯಲು ಕಾರಣ ಇದಂತೆ: ಅಂತೆ-ಕಂತೆಗಳಿಗೆ ಬಿಸಿಸಿಐ ಖಡಕ್ ಉತ್ತರ

Pakistan vs West Indies T20I: ವೆಸ್ಟ್​ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಪಾಕಿಸ್ತಾನ

(Ravindra Jadeja decides to retire team india test cricket amid he is in good form)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ