ಇತ್ತೀಚೆಗಷ್ಟೆ ಟೀಮ್ ಇಂಡಿಯಾದ (Team India) ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರು ಟೆಸ್ಟ್ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೆ ಸದ್ಯ ಮತ್ತೊಬ್ಬ ಟೀಮ್ ಇಂಡಿಯಾ ಆಟಗಾರ ನಿವೃತ್ತಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಮೂಲಗಳ ಪ್ರಕಾರ, ಬ್ಯಾಟಿಂಗ್ – ಬೌಲಿಂಗ್ನಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ಭಾರತದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಕಾರಣ ಜಡೇಜಾ ಇತ್ತೀಚೆಗೆ ಪದೇ ಪದೇ ಗಾಯಕ್ಕೊಳಗಾಗುತ್ತಿರುವುದು (Ravindra Jadeja Injury). ಇದೇ ಕಾರಣಕ್ಕೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಏಕದಿನ ಮತ್ತು ಟಿ20 ಕ್ರಿಕೆಟ್ಗೆ ಹೆಚ್ಚು ಗಮನ ಕೊಡುವ ದೃಷ್ಟಿಯಿಂದ ಟೆಸ್ಟ್ ಕ್ರಿಕೆಟ್ಗೆ ಅವರು ವಿದಾಯ (Ravindra Jadeja retirement) ಹೇಳಬಹುದು ಎನ್ನುತ್ತಿವೆ ಈ ವರದಿಗಳು.
ಹೌದು, ರವೀಂದ್ರ ಜಡೇಜಾಗೆ ಇಂಜುರಿ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಅಲ್ಲದೆ ಗಾಯದ ಸಮಸ್ಯೆಯಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಇವರು ಹೊರಗುಳಿದಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ವೇಳೆ ಮುಂದೋಳಿನ ಗಾಯಕ್ಕೆ ತುತ್ತಾಗಿದ್ದ ಜಡೇಜಾ, ಬಳಿಕ 2ನೇ ಟೆಸ್ಟ್‌ನಿಂದ ಹೊರಗುಳಿದಿದ್ದರು. ಮೊಣಕಾಲು ಗಾಯವೂ ಕಾಡಿರುವುದರಿಂದ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಗೂ ಅಲಭ್ಯರಾಗಿದ್ದಾರೆ.
ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸಲು ಯೋಚಿಸುತ್ತಿರುವ ಬಗ್ಗೆ ದೈನಿಕ್ ಜಾಗರಣ್ ಪತ್ರಿಕೆ ವರದಿ ಮಾಡಿದೆ. ಜಡೇಜಾಗೆ ಮೊಣಕಾಲು ಗಾಯವೂ ಕಾಡಿರುವುದರಿಂದ ಶೀಘ್ರದಲ್ಲೇ ಶಸಚಿಕಿತ್ಸೆ ಒಳಗಾಗುವ ಸಾಧ್ಯತೆ ಇದ್ದು, ಇದರಿಂದಾಗಿ ಅವರು ಬರೋಬ್ಬರಿ 6 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಬೇಕಾಗುತ್ತದೆ. ಹೀಗಾಗಿ ಮುಂದಿನ ವರ್ಷ ತವರಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಗೂ ಅವರು ಗೈರಾಗಲಿದ್ದಾರೆ. ಜೊತೆಗೆ ಐಪಿಎಲ್ 2022ರ ವರೆಗೂ ಜಡೇಜಾ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ.
33 ವರ್ಷದ ರವೀಂದ್ರ ಜಡೇಜಾ ಟೀಮ್ ಇಂಡಿಯಾ ಪರವಾಗಿ ಎಲ್ಲಾ ಮಾದರಿಯ ತಂಡದಲ್ಲಿಯೂ ಖಾಯಂ ಸದಸ್ಯನಾಗಿ ಗುರುತಿಸಿಕೊಂಡಿದ್ದು ಅನೇಕ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದಾರೆ. ತವರಿನಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಮಿಂಚಿರುವ ಜಡ್ಡು ಬ್ಯಾಟಿಂಗ್ ಬೌಲಿಂಗ್ ಜೊತೆಗೆ ಅಮೋಘ ಫಿಲ್ಡಿಂಗ್‌ನಿಂದಲೂ ಎದುರಾಳಿಗೆ ಆಘಾತ ನಿಡುವ ಸಾಮರ್ಥ್ಯಹೊಂದಿದ್ದು ಇದೇ ಕಾರಣದಿಂದಾಗಿ ಅವರು ತ್ರಿ ಡೈಮೆನ್ಶನ್ ಆಟಗಾರ ಎನಿಸಿಕೊಂಡಿದ್ದಾರೆ. ಜಡೇಜಾ ಭಾರತ ಪರ ಇದುವರೆಗೆ 56 ಟೆಸ್ಟ್ ಆಡಿದ್ದು, 223 ವಿಕೆಟ್ ಮತ್ತು 1 ಶತಕ ಸಹಿತ 2,145 ರನ್ ಗಳಿಸಿದ್ದಾರೆ.
Virat Kohli: ಏಕದಿನ ಸರಣಿಯಿಂದ ಕೊಹ್ಲಿ ಹೊರಗುಳಿಯಲು ಕಾರಣ ಇದಂತೆ: ಅಂತೆ-ಕಂತೆಗಳಿಗೆ ಬಿಸಿಸಿಐ ಖಡಕ್ ಉತ್ತರ
(Ravindra Jadeja decides to retire team india test cricket amid he is in good form)