India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾ ಔಟ್

| Updated By: Vinay Bhat

Updated on: Nov 24, 2022 | 8:05 AM

India Squad For Bangladesh Series: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಾಂಗ್ಲಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ಕೆಲ ಮಹತ್ವದ ತೀರ್ಮಾನ ಕೈಗೊಂಡಿರುವ ಬಿಸಿಸಿಐ ರವೀಂದ್ರ ಜಡೇಜಾ ಹಾಗೂ ಯಶ್ ದಯಾಳ್ ಅವರನ್ನು ಆಯ್ಕೆ ಮಾಡಿಲ್ಲ.

India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾ ಔಟ್
IND Squad vs BAN
Follow us on

ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ ಪ್ರವಾಸದಲ್ಲಿದೆ. ಕಿವೀಸ್ ನಾಡಲ್ಲಿ ಈಗಾಗಲೇ ಟಿ20 ಸರಣಿಯನ್ನು ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ (Team India) ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಶುಕ್ರವಾರ ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಈ ಸರಣಿ ಬಳಿಕ ಭಾರತ ಬಾಂಗ್ಲಾದೇಶ (India vs Bangladesh) ಪ್ರವಾಸ ಕೈಗೊಳ್ಳಲಿದೆ. ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಾಂಗ್ಲಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ಕೆಲ ಮಹತ್ವದ ತೀರ್ಮಾನ ಕೈಗೊಂಡಿರುವ ಬಿಸಿಸಿಐ ರವೀಂದ್ರ ಜಡೇಜಾ (Ravindra Jadeja) ಹಾಗೂ ಯಶ್ ದಯಾಳ್ ಅವರನ್ನು ಆಯ್ಕೆ ಮಾಡಿಲ್ಲ.

ಆಲ್‌ರೌಂಡರ್ ಜಡೇಜ ಅವರಿಗೆ ಕೆಲವು ತಿಂಗಳುಗಳ ಹಿಂದೆ ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವರಿನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಬಿಸಿಸಿಐ ಹೇಳಿದ್ದು ಈ ಕಾರಣಕ್ಕಾಗಿ ಜಡೇಜಾರನ್ನು ಆಯ್ಕೆಗೆ ಪರಿಗಣಿಸಿಲ್ಲವಂತೆ. ಇತ್ತ ಬೆನ್ನುನೋವಿನಿಂದ ಬಳಲಿರುವ ಯಶ್ ದಯಾಳ್ ಕೂಡ ಹೊರಬಿದ್ದಿದ್ದಾರೆ. ಇನ್ನು ಬಾಂಗ್ಲಾ ವಿರುದ್ಧದ ಸರಣಿಗೆ ಹಿರಿಯ ಆಟಗಾರರು ತಂಡ ಸೇರಿಕೊಂಡಿದ್ದಾರೆ. ನ್ಯೂಜಿಲೆಂಡ್‌ನಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬಾಂಗ್ಲಾ ಸರಣಿಗೆ ರೋಹಿತ್ ತಂಡಕ್ಕೆ ಮರಳಿದ್ದು ಕೆಎಲ್. ರಾಹುಲ್, ವಿರಾಟ್ ಕೊಹ್ಲಿ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
India vs New Zealand: ಭಾರತ-ನ್ಯೂಜಿಲೆಂಡ್ ನಡುವಣ ಏಕದಿನ ಸರಣಿ ವೇಳಾಪಟ್ಟಿ ಹಾಗೂ ತಂಡ ಹೀಗಿದೆ
IPL 2023: ತಂಡದಿಂದ ಕೈಬಿಡುವ ಬಗ್ಗೆ ನನಗೆ ತಿಳಿಸಿರಲಿಲ್ಲ: ಮನೀಷ್ ಪಾಂಡೆ
Hardik Pandya: ಸಂಜು ಸ್ಯಾಮ್ಸನ್​​ಗೆ ಯಾಕೆ ಚಾನ್ಸ್ ನೀಡಿಲ್ಲ: ಇದು ನನ್ನ ತಂಡ, ಬೇಕಾದವರಿಗೆ ಅವಕಾಶ ನೀಡಿರುವೆ..!
Suryakumar Yadav: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್

ಜಡೇಜಾ ಜಾಗಕ್ಕೆ ಶಹ್ಬಾಜ್ ಅಹ್ಮದ್?:

ಜಡೇಜಾ ಹೊರಬಿದ್ದ ಕಾರಣ ಇವರ ಜಾಗಕ್ಕೆ ಬೆಂಗಾಲ್ ಆಲ್ರೌಂಡರ್ ಶಹ್ಬಾಜ್ ಅಹ್ಹದ್ ಆಯ್ಕೆ ಆಗಲಿದ್ದಾರೆ ಎಂದು ಹೇಳಲಾಗಿದೆ. ಇವರು ಸದ್ಯ ನ್ಯೂಜಿಲೆಂಡ್ ವಿರುದ್ಧದದ ಏಕದಿನ ಸರಣಿಯಲ್ಲೂ ಸ್ಥಾನ ಪಡೆದುಕೊಂಡಿದ್ದಾರೆ. ಕಳೆದ ಸಪ್ಟೆಂಬರ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶಹ್ಬಾಜ್ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ವಿಜಯ್ ಹಜಾರೆ ಟ್ರೋಫಿಯಲ್ಲಿ ಶಹ್ಬಾಜ್ ಭರ್ಜರಿ ಪ್ರದರ್ಶನ ತೋರಿದ್ದರು. ಆಡಿದ 6 ಪಂದ್ಯಗಳಲ್ಲಿ 51.2 ಓವರ್ ಬೌಲಿಂಗ್ ಮಾಡಿ 4.87 ಎಕಾನಮಿ ಮೂಲಕ 11 ವಿಕೆಟ್ ಪಡೆದಿದ್ದರು. ಅಲ್ಲದೆ ಬ್ಯಾಟಿಂಗ್​ನಲ್ಲೂ ಎರಡು ಅರ್ಧಶತಕ ಸಿಡಿಸಿದ್ದರು.

 

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಇಶಾನ್ ಕಿಶನ್, ಶಾಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.

Published On - 8:05 am, Thu, 24 November 22