Ravindra Jadeja: ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಚೆನ್ನೈನಲ್ಲಿ ಅಖಾಡಕ್ಕಿಳಿಯಲಿದ್ದಾರೆ ರವೀಂದ್ರ ಜಡೇಜಾ

Ravindra Jadeja: ಬರೋಬ್ಬರಿ 4 ತಿಂಗಳ ನಂತರ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಕ್ರಿಕೆಟ್ ಮೈದಾನಕ್ಕೆ ಮರಳುವುದು ಖಚಿತವಾಗಿದೆ. ನಿರೀಕ್ಷೆಯಂತೆ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ 17 ಸದಸ್ಯರ ಟೆಸ್ಟ್ ತಂಡದಲ್ಲಿ ಆಯ್ಕೆಯಾಗಿದ್ದಾರೆ.

Ravindra Jadeja: ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಚೆನ್ನೈನಲ್ಲಿ ಅಖಾಡಕ್ಕಿಳಿಯಲಿದ್ದಾರೆ ರವೀಂದ್ರ ಜಡೇಜಾ
ರವೀಂದ್ರ ಜಡೇಜಾ
Follow us
TV9 Web
| Updated By: ಪೃಥ್ವಿಶಂಕರ

Updated on:Jan 15, 2023 | 10:27 AM

ಬರೋಬ್ಬರಿ 4 ತಿಂಗಳ ನಂತರ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಕ್ರಿಕೆಟ್ ಮೈದಾನಕ್ಕೆ ಮರಳುವುದು ಖಚಿತವಾಗಿದೆ. ನಿರೀಕ್ಷೆಯಂತೆ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ 17 ಸದಸ್ಯರ ಟೆಸ್ಟ್ ತಂಡದಲ್ಲಿ (India Vs Australia) ಆಯ್ಕೆಯಾಗಿದ್ದಾರೆ. ಆದರೆ ಅದಕ್ಕೂ ಮುನ್ನ ಚೆನ್ನೈನಲ್ಲಿ ರಣಜಿ (Ranji Trophy) ಪಂದ್ಯ ಆಡಲಿದ್ದಾರೆ ಎಂಬ ಸುದ್ದಿ ಈಗಷ್ಟೆ ಹೊರಬಿದ್ದಿದೆ. ನಿಗದಿಯಂತೆ ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಜನವರಿ 24 ರಿಂದ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ದೇಶಿ ಪಂದ್ಯ ಆಡಲಿದ್ದಾರೆ. ರವೀಂದ್ರ ಜಡೇಜಾ ಕಳೆದ ವರ್ಷ ಸೆಪ್ಟೆಂಬರ್‌ನಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇಂಜುರಿಯಿಂದಾಗಿ ಜಡೇಜಾ ಏಷ್ಯಾಕಪ್ ಜೊತೆಗೆ ಟಿ20 ವಿಶ್ವಕಪ್ ಕೂಡ ಆಡಲಿಲ್ಲ. ಬಳಿಕ ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜಡೇಜಾ, ಇದರಿಂದಾಗಿ ಕ್ರಿಕೆಟ್‌ನಿಂದ ಸಾಕಷ್ಟು ತಿಂಗಳು ದೂರ ಉಳಿಯಬೇಕಾಯಿತು.

ತಮಿಳುನಾಡು ವಿರುದ್ಧ ಆಡಬಹುದು

ಆದರೆ, ಈಗ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ 17 ಸದಸ್ಯರ ಟೆಸ್ಟ್ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಅದಕ್ಕೂ ಮೊದಲು ಅವರು ರಣಜಿ ಟ್ರೋಫಿಯಲ್ಲಿ ಪಂದ್ಯವನ್ನು ಆಡುವುದನ್ನು ನಾವು ಕಾಣಬಹುದಾಗಿದೆ. ವರದಿಯಾಗಿರುಂತೆ ರಣಜಿ ಟ್ರೋಫಿಯ ಅಂತಿಮ ಸುತ್ತಿನಲ್ಲಿ ಸೌರಾಷ್ಟ್ರ ಪರ ಜಡೇಜಾ ಕಣಕ್ಕಿಳಿಯಲಿದ್ದು ಈ ಪಂದ್ಯ ಚೆನ್ನೈ ಮೈದಾನದಲ್ಲಿ ತಮಿಳುನಾಡು ವಿರುದ್ಧ ನಡೆಯಲಿದೆ.

IND vs BAN: ಜಡೇಜಾ, ಶಮಿ ಬದಲು ಯುವ ದೇಶೀ ಪ್ರತಿಭೆಗಳಿಗೆ ಮಣೆ ಹಾಕಿದ ಬಿಸಿಸಿಐ

ಫಿಟ್ನೆಸ್ ಪುರಾವೆಗಾಗಿ ಈ ಪಂದ್ಯ

ಎನ್​ಸಿಎ ಕ್ಲೀನ್ ಚಿಟ್ ನೀಡಿದ ನಂತರ ಭಾರತದ ಆಯ್ಕೆಗಾರರು ರವೀಂದ್ರ ಜಡೇಜಾ ಅವರನ್ನು ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿದ್ದಾರೆ. ಆದರೆ ಆಯ್ಕೆಗಾರರ ಪ್ರಕಾರ, ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಪ್ರವೇಶಿಸಲು ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಭಾರತೀಯ ಆಲ್‌ರೌಂಡರ್ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿರುವುದನ್ನು ಗಮನದಲ್ಲಿಟ್ಟುಕೊಂಡು, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಫೀಲ್ಡಿಂಗ್ ಮಾಡುವ ಮೊದಲು ಜಡೇಜಾ ರಣಜಿ ಪಂದ್ಯಗಳನ್ನು ಆಡಬೇಕೆಂದು ಆಯ್ಕೆಗಾರರು ಮತ್ತು NCA ನಿರ್ಧರಿಸಿದೆ.

ಟೆಸ್ಟ್‌ನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಜಡೇಜಾ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಎರಡನೆಯದು ದೆಹಲಿ, ಹಾಗೂ ಮೂರನೇ ಟೆಸ್ಟ್ ಧರ್ಮಶಾಲಾದಲ್ಲಿ ಮತ್ತು ನಾಲ್ಕನೇ ಟೆಸ್ಟ್ ಅಹಮದಾಬಾದ್‌ನಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ರಿಷಬ್ ಪಂತ್ ಟೀಂ ಇಂಡಿಯಾದ ಭಾಗವಾಗಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ರವೀಂದ್ರ ಜಡೇಜಾ ಮಧ್ಯಮ ಕ್ರಮಾಂಕದಲ್ಲಿ 5 ಅಥವಾ 6 ನೇ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಎಡಗೈ ಆಲ್-ರೌಂಡರ್ ಜಡೇಜಾ, ಅಶ್ವಿನ್ ಜೊತೆಗೆ ಸ್ಪಿನ್ನರ್ ವಿಭಾಗದಲ್ಲಿ ಪರಿಣಾಮಕಾರಿಯಾಗಬಹುದು. ಇದಲ್ಲದೆ, ಅವರ ಪಾತ್ರವೂ ಪ್ರಮುಖವಾಗಿರುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Sun, 15 January 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ