Ravindra Jadeja: ನಾಯಕನಾಗಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ
IPL 2022 Ravindra Jadeja: ರವೀಂದ್ರ ಜಡೇಜಾ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್, ಗುಜರಾತ್ ಲಯನ್ಸ್, ಕೊಚ್ಚಿನ್ ಟಸ್ಕರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ.
ಐಪಿಎಲ್ ಸೀಸನ್ 15 (IPL 2022) ಶುರುವಾಗಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (CSK vs KKR) ಮುಖಾಮುಖಿಯಾಗಿತ್ತು. ಈ ಪಂದ್ಯದ ಮೂಲಕ ಸಿಎಸ್ಕೆ ಪರ ರವೀಂದ್ರ ಜಡೇಜಾ (Ravindra Jadeja) ಹಾಗೂ ಕೆಕೆಆರ್ ಶ್ರೇಯಸ್ ಅಯ್ಯರ್ (Shreyas Iyer) ನಾಯಕರಾಗಿ ಪದಾರ್ಪಣೆ ಮಾಡಿದ್ದರು. ವಿಶೇಷ ಎಂದರೆ ಈ ಪಂದ್ಯದಲ್ಲಿ ಟಾಸ್ ಹಾಕುವ ಮೂಲಕ ರವೀಂದ್ರ ಜಡೇಜಾ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದರು. ಹೌದು, ಐಪಿಎಲ್ನಲ್ಲಿ ಅತೀ ಹೆಚ್ಚು ಪಂದ್ಯವಾಡಿದ ಬಳಿಕ ನಾಯಕನಾದ ಆಟಗಾರ ಎಂಬ ದಾಖಲೆ ಇದೀಗ ಜಡೇಜಾ ಪಾಲಾಗಿದೆ. ಈ ಹಿಂದೆ ಈ ದಾಖಲೆ ಕನ್ನಡಿಗ ಮನೀಷ್ ಪಾಂಡೆ ಹೆಸರಿನಲ್ಲಿತ್ತು. ಮನೀಷ್ ಪಾಂಡೆ 153 ಪಂದ್ಯಗಳನ್ನು ಆಡಿದ ಬಳಿಕ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಿದ್ದರು.
ಇದೀಗ ರವೀಂದ್ರ ಜಡೇಜಾ ಬರೋಬ್ಬರಿ 200 ಪಂದ್ಯಗಳ ಬಳಿಕ ನಾಯಕನಾಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಸಿಎಸ್ಕೆ ತಂಡವನ್ನು ಮುನ್ನಡೆಸಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಹಾಗೂ ಸುರೇಶ್ ರೈನಾ ಮುನ್ನಡೆಸಿದ್ದರು. ಇದೀಗ 200 ಪಂದ್ಯಗಳ ಬಳಿಕ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.
ರವೀಂದ್ರ ಜಡೇಜಾ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್, ಗುಜರಾತ್ ಲಯನ್ಸ್, ಕೊಚ್ಚಿನ್ ಟಸ್ಕರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ 200 ಪಂದ್ಯಗಳನ್ನಾಡಿರುವ ಜಡ್ಡು 2388 ರನ್ ಕಲೆಹಾಕಿದ್ದಾರೆ. ಅಲ್ಲದೆ 127 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಐಪಿಎಲ್ನಲ್ಲಿ ಅತೀ ಹೆಚ್ಚು ಪಂದ್ಯವಾಡಿದ ಬಳಿಕ ನಾಯಕರಾದ ಆಟಗಾರರು: 200 ಪಂದ್ಯಗಳು: ರವೀಂದ್ರ ಜಡೇಜಾ 153 ಪಂದ್ಯಗಳು: ಮನೀಷ್ ಪಾಂಡೆ 137 ಪಂದ್ಯಗಳು: ಕೀರನ್ ಪೊಲಾರ್ಡ್ 111 ಪಂದ್ಯಗಳು: ರವಿಚಂದ್ರನ್ ಅಶ್ವಿನ್ 107 ಪಂದ್ಯಗಳು: ಸಂಜು ಸ್ಯಾಮ್ಸನ್ 103 ಪಂದ್ಯಗಳು: ಭುವನೇಶ್ವರ್ ಕುಮಾರ್
ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು