India T20 Squad: ಟೀಮ್ ಇಂಡಿಯಾದಿಂದ ಜಡೇಜಾ ಔಟ್: ಯುವ ಆಲ್​ರೌಂಡರ್​ಗೆ ಸ್ಥಾನ

| Updated By: ಝಾಹಿರ್ ಯೂಸುಫ್

Updated on: Sep 12, 2022 | 6:31 PM

Ravindra Jadeja: ಈ ಪಟ್ಟಿಯಲ್ಲಿ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್ ಹೆಸರಿದೆ. ಇದಾಗ್ಯೂ ಪ್ರಮುಖ ಆಲ್​ರೌಂಡರ್​ಗೆ ಸ್ಥಾನ ನೀಡಿಲ್ಲ.

India T20 Squad: ಟೀಮ್ ಇಂಡಿಯಾದಿಂದ ಜಡೇಜಾ ಔಟ್: ಯುವ ಆಲ್​ರೌಂಡರ್​ಗೆ ಸ್ಥಾನ
Ravindra Jadeja
Follow us on

India Squad For T20 World Cup 2022: ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. 15 ಸದ್ಯಸರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಳಗದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಏಷ್ಯಾಕಪ್​ ವೇಳೆ ಗಾಯಗೊಂಡಿದ್ದ ಜಡೇಜಾ ಇತ್ತೀಚೆಗೆ ಮೊಣಕಾಲಿನ ಸರ್ಜರಿಗೆ ಒಳಗಾಗಿದ್ದರು.

ಸದ್ಯ ಚೇತರಿಸಿಕೊಳ್ಳುತ್ತಿರುವ ಕಾರಣ ಜಡೇಜಾ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಅಷ್ಟೇ ಅಲ್ಲದೆ ಮೀಸಲು ಆಟಗಾರರ ಪಟ್ಟಿಗೂ ಆಯ್ಕೆ ಮಾಡಿಲ್ಲ. ಅಂದರೆ 15 ಸದಸ್ಯರ ಮುಖ್ಯ ಬಳಗದ ಜೊತೆ ನಾಲ್ವರು ಮೀಸಲು ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್ ಹೆಸರಿದೆ. ಇದಾಗ್ಯೂ ಜಡೇಜಾ ಅವರನ್ನು ಹೆಚ್ಚುವರಿ ಆಟಗಾರನ ಪಟ್ಟಿಗೂ ಸೇರ್ಪಡೆಗೊಳಿಸಿಲ್ಲ. ಹೀಗಾಗಿ ಟಿ20 ವಿಶ್ವಕಪ್​ನಿಂದ ರವೀಂದ್ರ ಜಡೇಜಾ ಹೊರಗುಳಿಯುವುದು ಖಚಿತವಾಗಿದೆ.

ಏಕೆಂದರೆ ಮೀಸಲು ಆಟಗಾರರ ಪಟ್ಟಿಯಲ್ಲಿದ್ದರೆ, ಗಾಯದಿಂದ ಚೇತರಿಸಿಕೊಂಡ ಬಳಿಕ ತಂಡವನ್ನು ಕೂಡಿಕೊಳ್ಳುವ ಅವಕಾಶವಿತ್ತು. ಅಂದರೆ 15 ಸದಸ್ಯರ ಬಳಗದಿಂದ ಯಾವುದಾದರು ಆಟಗಾರರು ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ರವೀಂದ್ರ ಜಡೇಜಾ ಅವರನ್ನು ಸೇರಿಸಿಕೊಳ್ಳಬಹುದಿತ್ತು.

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆದರೆ ಅಕ್ಟೋಬರ್​ ವೇಳೆಗೆ ರವೀಂದ್ರ ಜಡೇಜಾ ಚೇತರಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಜಡೇಜಾ ಬದಲಿಗೆ ಎಡಗೈ ಆಲ್​ರೌಂಡರ್ ಆಗಿ ಅಕ್ಷರ್ ಪಟೇಲ್​ಗೆ ಸ್ಥಾನ ನೀಡಲಾಗಿದೆ.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

 ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್.