IND vs BAN: ಬಾಂಗ್ಲಾ ಪ್ರವಾಸಕ್ಕೆ ರವೀಂದ್ರ ಜಡೇಜಾ ಡೌಟ್; ಟೆಸ್ಟ್ ಕ್ರಿಕೆಟ್​ಗೆ ಸೂರ್ಯಕುಮಾರ್ ಎಂಟ್ರಿ..?

IND vs BAN: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಆಡುವ ಸಾಧ್ಯತೆ ಕಡಿಮೆ ಇದ್ದು, ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯಬಹುದು ಎಂದು ವರದಿಯಾಗಿದೆ.

IND vs BAN: ಬಾಂಗ್ಲಾ ಪ್ರವಾಸಕ್ಕೆ ರವೀಂದ್ರ ಜಡೇಜಾ ಡೌಟ್; ಟೆಸ್ಟ್ ಕ್ರಿಕೆಟ್​ಗೆ ಸೂರ್ಯಕುಮಾರ್ ಎಂಟ್ರಿ..?
ಸೂರ್ಯ, ಕೊಹ್ಲಿ
Follow us
TV9 Web
| Updated By: ಪೃಥ್ವಿಶಂಕರ

Updated on: Nov 23, 2022 | 2:55 PM

ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ (Team India) ನ.25 ರಿಂದ ಆರಂಭವಾಗಲಿರುವ ಏಕದಿನ ಸರಣಿಗಾಗಿ ತಯಾರಿ ನಡೆಸುತ್ತಿದೆ. ಈ ಸರಣಿ ಮುಗಿದ ಬಳಿಕ ಬಾಂಗ್ಲಾದೇಶ ಪ್ರವಾಸಕ್ಕೆ ಹೊರಡಲಿದೆ. ಅಲ್ಲಿ 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಬಾಂಗ್ಲಾ ಪ್ರವಾಸಕ್ಕೆ ಈಗ ವಿಶ್ರಾಂತಿ ಪಡೆದಿರುವ ಹಿರಿಯ ಆಟಗಾರರು ತಂಡಕ್ಕೆ ಮರಳುತ್ತಿದ್ದಾರೆ. ಇವರಲ್ಲಿ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಹೆಸರನ್ನು ಸಹ ಸೇರಿಸಲಾಗಿತ್ತು. ಆದರೆ ಈಗ ಹೊರಬಿದ್ದಿರುವ ವರದಿ ಪ್ರಕಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಆಡುವ ಸಾಧ್ಯತೆ ಕಡಿಮೆ ಇದ್ದು, ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯಬಹುದು ಎಂದು ವರದಿಯಾಗಿದೆ.

ಏಷ್ಯಾಕಪ್‌ನಲ್ಲಿ ಗಾಯಗೊಂಡು ಅರ್ಧದಲ್ಲೇ ತಂಡ ತೋರಿದಿದ್ದ ರವೀಂದ್ರ ಜಡೇಜಾ ಅಂದಿನಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಹಾಗೆಯೇ ಜಡೇಜಾಗೆ ಟಿ20 ವಿಶ್ವಕಪ್‌ನಲ್ಲೂ ಆಡಲು ಸಾಧ್ಯವಾಗಲಿಲ್ಲ. ಈಗ ಇಂಜುರಿಯಿಂದ ಚೇತರಿಸಿಕೊಂಡಿರುವ ಜಡ್ಡು, ಮಡದಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಜಡೇಜಾ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿಗೆ ಅಲಭ್ಯರಾಗುವ ಸಾಧ್ಯತೆಗಳು ಹೆಚ್ಚಿವೆ. ಒಂದು ವೇಳೆ ಸೂರ್ಯಕುಮಾರ್ ಯಾದವ್ ಟೆಸ್ಟ್ ತಂಡದಲ್ಲಿ ಅವಕಾಶ ಪಡೆದರೆ, ಟಿ20 ಕ್ರಿಕೆಟ್​ನಂತೆ ಟೆಸ್ಟ್​ ಕ್ರಿಕೆಟ್​ನಲ್ಲಿ ಯಶಸ್ವಿಯಾಗುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಎಲ್ಲಾ ಕ್ರಮಾಂಕಕ್ಕೂ ಸೈ

ಟಿ20 ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಮಿಂಚಿರುವ ಸೂರ್ಯಕುಮಾರ್ ಯಾದವ್ ಟೆಸ್ಟ್​ ಕ್ರಿಕೆಟ್​ನಲ್ಲೂ ಯಶಸ್ಸು ಗಳಿಸುವ ಸಾಧ್ಯತೆಗಳು ಹೆಚ್ಚಿವೆ. ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕ, 5ನೇ ಕ್ರಮಾಂಕ, 6ನೇ ಕ್ರಮಾಂಕದಲ್ಲಿ ಎಲ್ಲಿ ಬೇಕಾದರೂ ಬ್ಯಾಟಿಂಗ್ ಮಾಡುವ ಸಾಮಥ್ಯ್ರ ಹೊಂದಿದ್ದಾರೆ. ಇದಲ್ಲದೇ 3ನೇ ಕ್ರಮಾಂಕದಲ್ಲಿಯೂ ಸೂರ್ಯ ಆಡಬಲ್ಲರು. ಸೂರ್ಯಕುಮಾರ್ ಯಾದವ್ ಅವರ ಆಟದ ಶೈಲಿ ಆಕ್ರಮಣಕಾರಿಯಾಗಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಆಕ್ರಮಣಕಾರಿ ಆಟಗಾರರು ಅದ್ಭುತ ಸಾಧನೆ ಮಾಡಿದ್ದಾರೆ ಎಂಬುದಕ್ಕೆ ಇತಿಹಾಸವೇ ಸಾಕ್ಷಿ. ವೀರೇಂದ್ರ ಸೆಹ್ವಾಗ್ ಭಾರತದ ಪರ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ, ರಿಷಬ್ ಪಂತ್ ಕೂಡ ಅಂತಹ ಬ್ಯಾಟ್ಸ್‌ಮನ್ ಆಗಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಏಕಾಂಗಿಯಲ್ಲಿ ಪಂದ್ಯ ಗೆಲ್ಲಿಸಿಕೊಡುವ ಸಾಮಥ್ಯ್ರ ಹೊಂದಿದ್ದಾರೆ. ಆಸ್ಟ್ರೇಲಿಯಾದ ಮಾಜಿ ವಿಕೆಟ್‌ಕೀಪರ್ ಆಡಮ್ ಗಿಲ್‌ಕ್ರಿಸ್ಟ್ ಕೂಡ ವೇಗದ ಬ್ಯಾಟಿಂಗ್‌ ಮೂಲಕ ಅನೇಕ ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಯಶಸ್ವಿಯಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ.

ಸೂರ್ಯಕುಮಾರ್ ತಂತ್ರಗಾರಿಕೆ ಸಖತ್ತಾಗಿದೆ

ಸೂರ್ಯಕುಮಾರ್ ಯಾದವ್ ಕೇವಲ ಸ್ಕೂಪ್ ಮತ್ತು ರಾಂಪ್ ಶಾಟ್‌ಗಳನ್ನು ಆಡುವುದಿಲ್ಲ. ಈ ಆಟಗಾರ ವಿಕೆಟ್ ಹಿಂದೆ ಎಷ್ಟು ಉತ್ತಮವಾಗಿ ಆಡುತ್ತಾರೋ, ವಿಕೆಟ್ ಮುಂದೆಯೂ ಅವರ ಆಟ ಉತ್ತಮವಾಗಿರುತ್ತದೆ. ಅಲ್ಲದೆ ಅವರ ಡ್ರೈವ್‌ಗಳು ವಿರಾಟ್ ಕೊಹ್ಲಿ ಮತ್ತು ಬಾಬರ್ ಆಜಮ್‌ ಆಡುವ ಕವರ್​ ಡ್ರೈವ್‌ಗಳಿಗಿಂತ ಏನು ಕಡಿಮೆಯಿಲ್ಲ. ಸೂರ್ಯಕುಮಾರ್ ಯಾದವ್ ಅವರ ಅತ್ಯಂತ ವಿಶೇಷವಾದ ವಿಷಯವೆಂದರೆ ಅವರು ಡ್ರೈವ್‌ಗಳ ಹೊರತಾಗಿ, ಅವರು ಟೆಸ್ಟ್ ಕ್ರಿಕೆಟ್‌ನ ವಿಷಯದಲ್ಲಿ ಅದ್ಭುತವೆಂದು ಸಾಬೀತುಪಡಿಸುವ ಚಿಪ್ ಶಾಟ್‌ಗಳನ್ನು ಸಹ ಆಡುತ್ತಾರೆ. ಇದಲ್ಲದೇ ವೇಗದ ಬೌಲರ್‌ಗಳು ಹಾಗೂ ಸ್ಪಿನ್ನರ್‌ಗಳ ವಿರುದ್ಧ ಸೂರ್ಯಕುಮಾರ್ ಯಾದವ್ ಪ್ರಬಲರಾಗಿದ್ದಾರೆ. ಸೂರ್ಯ ಸ್ವೀಪ್, ರಿವರ್ಸ್ ಸ್ವೀಪ್‌ ಶಾಟ್​ಗಳನ್ನು ಆಡುವಲ್ಲಿ ನಿಸ್ಸೀಮರು.

ರೆಡ್​ ಬಾಲ್​ನಲ್ಲಿ ಉತ್ತಮ ದಾಖಲೆ

ಸೂರ್ಯಕುಮಾರ್ ಯಾದವ್ ಅವರ ಪ್ರಥಮ ದರ್ಜೆ ದಾಖಲೆಯೂ ಅದ್ಭುತವಾಗಿದೆ. ಸೂರ್ಯಕುಮಾರ್ ಮುಂಬೈ ಪರ 77 ಪ್ರಥಮ ದರ್ಜೆ ಪಂದ್ಯಗಳಲ್ಲಿ 5326 ರನ್ ಗಳಿಸಿದ್ದಾರೆ, ಇದರಲ್ಲಿ 14 ಶತಕಗಳು ಮತ್ತು 26 ಅರ್ಧ ಶತಕಗಳು ಅವರ ಬ್ಯಾಟ್‌ನಿಂದ ಹೊರಬಂದಿವೆ. ಸೂರ್ಯ ಅವರ ಸರಾಸರಿ 44ಕ್ಕಿಂತ ಹೆಚ್ಚಿದೆ. ಹೀಗಾಗಿ ಕೆಂಪು ಚೆಂಡಿನಿಂದಲೂ ಸೂರ್ಯಕುಮಾರ್ ವಿಧ್ವಂಸಕರಾಗಬಹುದು ಎಂಬುದು ಸ್ಪಷ್ಟವಾಗಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ಗೆ ಪಾದಾರ್ಪಣೆ ಮಾಡಲು ಸೂರ್ಯಕುಮಾರ್‌ಗೆ ಅವಕಾಶ ಸಿಗುವ ನಿರೀಕ್ಷೆಯಿದೆ.

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ