Team India: ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್..!

India vs West Indies: ದೀರ್ಘ ವಿಶ್ರಾಂತಿಯ ಬಳಿಕ ಇಂಗ್ಲೆಂಡ್ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇದೀಗ ಟಿ20 ವಿಶ್ವಕಪ್​ಗಾಗಿ ಸಿದ್ದತೆಗಳನ್ನು ಶುರು ಮಾಡಿಕೊಳ್ಳಬೇಕಿದೆ.

Team India: ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್..!
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 23, 2022 | 12:25 PM

ವೆಸ್ಟ್ ಇಂಡೀಸ್ (WI vs IND) ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಆದರೆ ಈ ಸರಣಿಗೆ ಉಪನಾಯರಾಗಿ ಆಯ್ಕೆಯಾಗಿದ್ದ ರವೀಂದ್ರ ಜಡೇಜಾ (Ravindra Jadeja) ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಗಾಯಗೊಂಡಿರುವ ಕಾರಣ ಸ್ಟಾರ್ ಆಲ್ ರೌಂಡರ್ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಬೇಕಾಯಿತು. ಅಲ್ಲದೆ ಜಡೇಜಾ ಬದಲಿಗೆ 28ರ ಹರೆಯದ ಆಲ್ ರೌಂಡರ್ ಆಟಗಾರ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಇನ್ನು ಉಪನಾಯಕನ ಅನುಪಸ್ಥಿತಿಯಲ್ಲಿ  ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ವೈಸ್ ಕ್ಯಾಪ್ಟನ್ ಜವಾಬ್ದಾರಿಯನ್ನು ನಿಭಾಯಿಸಿದ್ದರು.

ಇದೀಗ ಇದೇ ಪ್ಲೇಯಿಂಗ್ ಇಲೆವೆನ್​ 2ನೇ ಪಂದ್ಯಕ್ಕೂ ಮುಂದುವರೆಯಲಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ಮೊಣಕಾಲಿಗೆ ಗಾಯ ಮಾಡಿಕೊಂಡಿರುವ ರವೀಂದ್ರ ಜಡೇಜಾ 2ನೇ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ. ಸದ್ಯ ಟೀಮ್ ಇಂಡಿಯಾ ವೈದ್ಯಕೀಯ ತಂಡ ಜಡೇಜಾ ಮೇಲೆ ತೀವ್ರ ನಿಗಾ ಇರಿಸಿದ್ದಾರೆ. ಹೀಗಾಗಿಯೇ ಮೂರನೇ ಏಕದಿನ ಪಂದ್ಯದಲ್ಲಿ ಜಡೇಜಾ ಭಾಗವಹಿಸುತ್ತಾರೋ ಇಲ್ಲವೋ ಎಂಬುದ ಬಗ್ಗೆ ಸ್ಪಷ್ಟತೆ ಇಲ್ಲ. ಏಕೆಂದರೆ ಜಡೇಜಾ ಅವರ ಗಾಯದ ರಿಪೋರ್ಟ್ ಸಿಗುವುದು ಜುಲೈ 27 ಕ್ಕೆ ಎಂದು ಹೇಳಲಾಗಿದೆ.

ಅಂದರೆ ಭಾರತ ತಂಡವು ಜುಲೈ 27 ರಂದು ಮೂರನೇ ಏಕದಿನ ಪಂದ್ಯವಾಡಲಿದೆ. ಅದಕ್ಕೂ ಮುನ್ನ ಮೊಣಕಾಲಿನ ಸಮಸ್ಯೆಯಲ್ಲಿ ಚೇತರಿಕೆ ಕಂಡು ಬಂದರೆ ಮಾತ್ರ ರವೀಂದ್ರ ಜಡೇಜಾ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿ ಆಡಲಿದ್ದಾರೆ. ಆದರೆ ಮುಂಬರುವ ಸರಣಿಗಳ ದೃಷ್ಟಿಯಿಂದ ಜಡೇಜಾ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.  ಏಕೆಂದರೆ ಭಾರತ ತಂಡವು ಏಕದಿನ ಸರಣಿ ಬೆನ್ನಲ್ಲೇ ವೆಸ್ಟ್ ಇಂಡೀಸ್ ವಿರುದ್ದ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಇದಾದ ಬಳಿಕ ಏಷ್ಯಾಕಪ್ ಟೂರ್ನಿ ಕೂಡ ನಡೆಯಲಿದೆ. ಹೀಗಾಗಿ ಪ್ರಮುಖ ಆಟಗಾರನ ಗಾಯವು ಉಲ್ಬಣಗೊಳ್ಳದಂತೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಎಚ್ಚರಿಕೆವಹಿಸಲಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಕ್ಕೂ ಮುನ್ನ ಗಾಯದ ಕಾರಣ ಜಡೇಜಾ ಸೌತ್ ಆಫ್ರಿಕಾ ವಿರುದ್ದದ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ದೀರ್ಘ ವಿಶ್ರಾಂತಿಯ ಬಳಿಕ ಇಂಗ್ಲೆಂಡ್ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇದೀಗ ಟಿ20 ವಿಶ್ವಕಪ್​ಗಾಗಿ ಸಿದ್ದತೆಗಳನ್ನು ಶುರು ಮಾಡಿಕೊಳ್ಳಬೇಕಿದೆ. ಇಂತಹ ಸಂದರ್ಭದಲ್ಲಿ ಗಂಭೀರ ಗಾಯವಾದರೆ ಪ್ರಮುಖ ಟೂರ್ನಿಯಿಂದ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಸಣ್ಣ ಪುಟ್ಟ ಗಾಯಗಳಾದರೆ ಆಟಗಾರರಿಗೆ ವಿಶ್ರಾಂತಿ ನೀಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ರವೀಂದ್ರ ಜಡೇಜಾ ಸಂಪೂರ್ಣವಾಗಿ ಹೊರಗುಳಿಯುವ ಸಾಧ್ಯತೆಯಿದೆ.

ಭಾರತ ಏಕದಿನ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್‌), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಏಕದಿನ ಸರಣಿಯ ವೇಳಾಪಟ್ಟಿ:

  • ಜುಲೈ 22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)

ಟಿ20 ಸರಣಿ ವೇಳಾಪಟ್ಟಿ:

  • ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 1​- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
  • ಆಗಸ್ಟ್​ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
  • ಆಗಸ್ಟ್​ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)

Published On - 12:25 pm, Sat, 23 July 22

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?