Ravindra Jadeja: ಐಪಿಎಲ್ಗಾಗಿ ರವೀಂದ್ರ ಜಡೇಜಾ ಕಸರತ್ತು ಶುರು..!
IPL 2023: ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಐಪಿಎಲ್ ವೇಳೆ ಸಂಪೂರ್ಣ ಗುಣಮುಖರಾಗಿ ಕಾಣಿಸಿಕೊಳ್ಳುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
ಟೀಮ್ ಇಂಡಿಯಾದ (Team India) ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಗಾಯದ ಸಮಸ್ಯೆಯ ಕಾರಣ ಟಿ20 ವಿಶ್ವಕಪ್ನಿಂದ (T20 World Cup 2022) ಹೊರಗುಳಿದಿದ್ದರು. ಏಷ್ಯಾಕಪ್ 2022 ರ ವೇಳೆ ಜಡೇಜಾ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜಡೇಜಾ ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿದಿದ್ದರು. ಇದೀಗ ಜಡ್ಡು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಕಾಣಿಸಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಗಾಯದಿಂದ ಚೇತರಿಸಿಕೊಂಡಿರುವ ಜಡೇಜಾ ಬೆಂಗಳೂರಿನ ಎನ್ಸಿಎಯಲ್ಲಿ ಫಿಟ್ನೆಸ್ಗಾಗಿ ಕರಸತ್ತು ಶುರು ಮಾಡಿಕೊಂಡಿದ್ದು, ಇದರ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸದ್ಯ ಫಿಟ್ನೆಸ್ ಕಡೆ ಗಮನ ನೀಡಿರುವ ಜಡೇಜಾ ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಈಗಾಗಲೇ ಟಿ20 ವಿಶ್ವಕಪ್ಗಾಗಿ 15 ಸದಸ್ಯರ ಪಟ್ಟಿಯನ್ನು ಸಲ್ಲಿಸಲಾಗಿದೆ. ಇನ್ನು ತಂಡದಲ್ಲಿ ಗಾಯದ ಕಾರಣ ಬದಲಾವಣೆ ಮಾಡಿದರೂ ಮೀಸಲು ಆಟಗಾರರ ಪಟ್ಟಿಯಿಂದ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಹೀಗಾಗಿ ಗಾಯದಿಂದ ಚೇತರಿಸಿಕೊಂಡಿರುವ ಜಡ್ಡು ಸದ್ಯದಲ್ಲಿ ತಂಡಕ್ಕೆ ಮರಳುವುದು ಅನುಮಾನ.
ಇನ್ನು ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡಲಿದೆ. ಈ ವೇಳೆಗೆ ಸಂಪೂರ್ಣ ಚೇತರಿಸಿಕೊಂಡರೆ ಮಾತ್ರ ಅವರಿಗೆ ತಂಡದಲ್ಲಿ ಅವಕಾಶ ನೀಡಬಹುದು. ಮತ್ತೊಂದೆಡೆ ಡಿಸೆಂಬರ್ ತಿಂಗಳಲ್ಲಿ ಐಪಿಎಲ್ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ಫಿಟ್ನೆಸ್ ಸಾಬೀತುಪಡಿಸಲು ಜಡೇಜಾ ಕಸರತ್ತನ್ನು ಆರಂಭಿಸಿದ್ದಾರೆ ಎನ್ನಲಾಗಿದೆ.
View this post on Instagram
ಏಕೆಂದರೆ ಈಗಾಗಲೇ ಎಲ್ಲಾ ಫ್ರಾಂಚೈಸಿಗಳಿಗೆ ತಂಡದಲ್ಲೇ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ನವೆಂಬರ್ 15 ರೊಳಗೆ ಸಲ್ಲಿಸಬೇಕೆಂದು ಐಪಿಎಲ್ ಆಡಳಿತ ಮಂಡಳಿ ಸೂಚಿಸಿದೆ. ಅತ್ತ ಜಡೇಜಾ ಸಿಎಸ್ಕೆ ತಂಡದಿಂದ ಹೊರಬರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಹೀಗಾಗಿ ಅದಕ್ಕೂ ಮುನ್ನ ತಮ್ಮ ಫಿಟ್ನೆಸ್ ಸಾಬೀತುಪಡಿಸುವ ಮೂಲಕ ಇತರೆ ಫ್ರಾಂಚೈಸಿಗಳ ಗಮನ ಸೆಳೆಯಲು ರವೀಂದ್ರ ಜಡೇಜಾ ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: T20 World Cup 2022 All Squad: ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
ಒಟ್ಟಿನಲ್ಲಿ ಟೀಮ್ ಇಂಡಿಯಾದ ಆಟಗಾರರ ಗಾಯದ ಸಮಸ್ಯೆಯು ಇದೀಗ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ತಲೆನೋವು ಸೃಷ್ಟಿಸಿದ್ದು, ಇದರ ನಡುವೆ ಸ್ಟಾರ್ ಆಟಗಾರರು ಐಪಿಎಲ್ ವೇಳೆ ಸಂಪೂರ್ಣ ಗುಣಮುಖರಾಗಿ ಕಾಣಿಸಿಕೊಳ್ಳುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.