Ravindra Jadeja: ಐಪಿಎಲ್​ಗಾಗಿ ರವೀಂದ್ರ ಜಡೇಜಾ ಕಸರತ್ತು ಶುರು..!

| Updated By: ಝಾಹಿರ್ ಯೂಸುಫ್

Updated on: Oct 20, 2022 | 9:24 PM

IPL 2023: ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಐಪಿಎಲ್​ ವೇಳೆ ಸಂಪೂರ್ಣ ಗುಣಮುಖರಾಗಿ ಕಾಣಿಸಿಕೊಳ್ಳುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

Ravindra Jadeja: ಐಪಿಎಲ್​ಗಾಗಿ ರವೀಂದ್ರ ಜಡೇಜಾ ಕಸರತ್ತು ಶುರು..!
Ravindra Jadeja
Follow us on

ಟೀಮ್ ಇಂಡಿಯಾದ (Team India) ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಗಾಯದ ಸಮಸ್ಯೆಯ ಕಾರಣ ಟಿ20 ವಿಶ್ವಕಪ್​ನಿಂದ (T20 World Cup 2022) ಹೊರಗುಳಿದಿದ್ದರು. ಏಷ್ಯಾಕಪ್​ 2022 ರ ವೇಳೆ ಜಡೇಜಾ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜಡೇಜಾ ಒಂದು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿದಿದ್ದರು. ಇದೀಗ ಜಡ್ಡು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಕಾಣಿಸಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಗಾಯದಿಂದ ಚೇತರಿಸಿಕೊಂಡಿರುವ ಜಡೇಜಾ ಬೆಂಗಳೂರಿನ ಎನ್​ಸಿಎಯಲ್ಲಿ ಫಿಟ್​ನೆಸ್​ಗಾಗಿ ಕರಸತ್ತು ಶುರು ಮಾಡಿಕೊಂಡಿದ್ದು, ಇದರ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಫಿಟ್​ನೆಸ್ ಕಡೆ ಗಮನ ನೀಡಿರುವ ಜಡೇಜಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಈಗಾಗಲೇ ಟಿ20 ವಿಶ್ವಕಪ್​ಗಾಗಿ 15 ಸದಸ್ಯರ ಪಟ್ಟಿಯನ್ನು ಸಲ್ಲಿಸಲಾಗಿದೆ. ಇನ್ನು ತಂಡದಲ್ಲಿ ಗಾಯದ ಕಾರಣ ಬದಲಾವಣೆ ಮಾಡಿದರೂ ಮೀಸಲು ಆಟಗಾರರ ಪಟ್ಟಿಯಿಂದ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಹೀಗಾಗಿ ಗಾಯದಿಂದ ಚೇತರಿಸಿಕೊಂಡಿರುವ ಜಡ್ಡು ಸದ್ಯದಲ್ಲಿ ತಂಡಕ್ಕೆ ಮರಳುವುದು ಅನುಮಾನ.

ಇದನ್ನೂ ಓದಿ
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಇನ್ನು ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡಲಿದೆ. ಈ ವೇಳೆಗೆ ಸಂಪೂರ್ಣ ಚೇತರಿಸಿಕೊಂಡರೆ ಮಾತ್ರ ಅವರಿಗೆ ತಂಡದಲ್ಲಿ ಅವಕಾಶ ನೀಡಬಹುದು. ಮತ್ತೊಂದೆಡೆ ಡಿಸೆಂಬರ್ ತಿಂಗಳಲ್ಲಿ ಐಪಿಎಲ್​ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ಫಿಟ್​ನೆಸ್ ಸಾಬೀತುಪಡಿಸಲು ಜಡೇಜಾ ಕಸರತ್ತನ್ನು ಆರಂಭಿಸಿದ್ದಾರೆ ಎನ್ನಲಾಗಿದೆ.

ಏಕೆಂದರೆ ಈಗಾಗಲೇ ಎಲ್ಲಾ ಫ್ರಾಂಚೈಸಿಗಳಿಗೆ ತಂಡದಲ್ಲೇ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ನವೆಂಬರ್ 15 ರೊಳಗೆ ಸಲ್ಲಿಸಬೇಕೆಂದು ಐಪಿಎಲ್ ಆಡಳಿತ ಮಂಡಳಿ ಸೂಚಿಸಿದೆ. ಅತ್ತ ಜಡೇಜಾ ಸಿಎಸ್​ಕೆ ತಂಡದಿಂದ ಹೊರಬರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಹೀಗಾಗಿ ಅದಕ್ಕೂ ಮುನ್ನ ತಮ್ಮ ಫಿಟ್​ನೆಸ್ ಸಾಬೀತುಪಡಿಸುವ ಮೂಲಕ ಇತರೆ ಫ್ರಾಂಚೈಸಿಗಳ ಗಮನ ಸೆಳೆಯಲು ರವೀಂದ್ರ ಜಡೇಜಾ ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ

ಒಟ್ಟಿನಲ್ಲಿ ಟೀಮ್ ಇಂಡಿಯಾದ ಆಟಗಾರರ ಗಾಯದ ಸಮಸ್ಯೆಯು ಇದೀಗ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ತಲೆನೋವು ಸೃಷ್ಟಿಸಿದ್ದು, ಇದರ ನಡುವೆ ಸ್ಟಾರ್ ಆಟಗಾರರು ಐಪಿಎಲ್​ ವೇಳೆ ಸಂಪೂರ್ಣ ಗುಣಮುಖರಾಗಿ ಕಾಣಿಸಿಕೊಳ್ಳುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.