AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಅಲಭ್ಯ! ಕಾರಣವೇನು ಗೊತ್ತಾ?

Ravindra Jadeja: ರವೀಂದ್ರ ಜಡೇಜಾ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ಶ್ರೀಲಂಕಾ ವಿರುದ್ಧದ ತವರಿನ ಟೆಸ್ಟ್ ಸರಣಿಯ ಮೂಲಕ ತಂಡಕ್ಕೆ ಪುನರಾಗಮನ ಮಾಡಬಹುದು ಎಂದು ವರದಿಯಾಗಿದೆ.

IND vs WI: ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಅಲಭ್ಯ! ಕಾರಣವೇನು ಗೊತ್ತಾ?
TV9 Web
| Edited By: |

Updated on: Jan 26, 2022 | 4:20 PM

Share

ರವೀಂದ್ರ ಜಡೇಜಾ ಭಾರತ ಕ್ರಿಕೆಟ್ ತಂಡಕ್ಕೆ ಮರಳುವ ಲಕ್ಷಣ ಕಾಣುತ್ತಿಲ್ಲ . ಟಿ20 ವಿಶ್ವಕಪ್‌ನಿಂದ ಭಾರತ ತಂಡದಿಂದ ಹೊರಗುಳಿದಿರುವ ಈ ಆಟಗಾರ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ. ಬಲಗೈ ಗಾಯದಿಂದಾಗಿ ರವೀಂದ್ರ ಜಡೇಜಾ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಈ ಗಾಯದಿಂದಾಗಿ ಅವರು ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಡಲಿಲ್ಲ. ನಂತರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರು ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗೆ ಸಿದ್ಧರಾಗಲು ಸಾಧ್ಯವಾಗಲಿಲ್ಲ. ಇದೀಗ ಅವರು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ODI ಮತ್ತು T20 ಸರಣಿಯಲ್ಲಿ ಆಡುವುದಿಲ್ಲ ಎಂದು ವರದಿಯಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ರವೀಂದ್ರ ಜಡೇಜಾ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ಶ್ರೀಲಂಕಾ ವಿರುದ್ಧದ ತವರಿನ ಟೆಸ್ಟ್ ಸರಣಿಯ ಮೂಲಕ ತಂಡಕ್ಕೆ ಪುನರಾಗಮನ ಮಾಡಬಹುದು ಎಂದು ವರದಿಯಾಗಿದೆ. ಈ ಸರಣಿಯು ಫೆಬ್ರವರಿ ಅಂತ್ಯದಲ್ಲಿ ನಡೆಯಲಿದ್ದು, ಜಡೇಜಾ ಈ ಸರಣಿಯಲ್ಲೂ ಆಡದಿದ್ದರೆ, ಐಪಿಎಲ್ 2022 ರಿಂದ ನೇರವಾಗಿ ಕ್ರಿಕೆಟ್ ಮೈದಾನದಲ್ಲಿ ಆಡುವುದನ್ನು ಕಾಣಬಹುದು. ಜಡೇಜಾ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದು, ಧೋನಿ ನಂತರ ತಂಡದ ಮುಂದಿನ ನಾಯಕರಾಗಬಹುದು ಎಂದು ವರದಿಯಾಗಿದೆ.

ಫೆಬ್ರವರಿ ಮೊದಲ ವಾರದಲ್ಲಿ ವಿಂಡೀಸ್ ತಂಡ ಬರಲಿದೆ ವೆಸ್ಟ್ ಇಂಡೀಸ್ ವಿರುದ್ಧ ಫೆ.16ರಿಂದ 20ರವರೆಗೆ ಕೋಲ್ಕತ್ತಾದಲ್ಲಿ ಮೂರು ಟಿ20 ಪಂದ್ಯಗಳು ನಡೆಯಲಿವೆ. ಇದಕ್ಕೂ ಮುನ್ನ ಫೆ.6ರಿಂದ 9ರ ನಡುವೆ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿ ನಡೆಯಲಿದೆ. ಭಾರತ-ವೆಸ್ಟ್ ಇಂಡೀಸ್ ಸರಣಿಗೆ ರವೀಂದ್ರ ಜಡೇಜಾ ಆಯ್ಕೆಯಾಗದಿದ್ದರೆ, ಬದಲಿಗೆ ಅಕ್ಷರ್ ಪಟೇಲ್ ಅಥವಾ ಕೃನಾಲ್ ಪಾಂಡ್ಯ ಅವರಂತಹ ಆಟಗಾರರನ್ನು ಟೀಮ್ ಇಂಡಿಯಾದಲ್ಲಿ ಆಯ್ಕೆ ಮಾಡಬಹುದು.

ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ಒಂದೋ ಎರಡೋ ದಿನದಲ್ಲಿ ಪ್ರಕಟವಾಗಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್ ಅವರಂತಹ ವೇಗದ ಬೌಲರ್‌ಗಳಿಗೆ ಅವಕಾಶ ಸಿಗಬಹುದು. ಈ ಇಬ್ಬರು ಆಟಗಾರರು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೂ ಆಯ್ಕೆಯಾಗಿದ್ದರು.

ಅಶ್ವಿನ್-ಭುವಿ ಔಟ್ ವೆಸ್ಟ್ ಇಂಡೀಸ್ ಸರಣಿಗೆ ಭುವನೇಶ್ವರ್ ಕುಮಾರ್, ಆರ್ ಅಶ್ವಿನ್ ಅವರಂತಹ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಅಶ್ವಿನ್ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ವೇಳೆ ನೋವು ನಿವಾರಕ ಚುಚ್ಚುಮದ್ದು ಸೇವಿಸಿ ಆಡುತ್ತಿದ್ದರು ಎಂದು ವರದಿಯಾಗಿದೆ. ಮತ್ತೊಂದೆಡೆ, ಭುವಿ ಅವರ ಇತ್ತೀಚಿನ ಪ್ರದರ್ಶನ ಕಳಪೆಯಾಗಿದ್ದು ಅವರನ್ನು ತಂಡದಿಂದ ಕೈಬಿಡಬಹುದು ಎಂಬ ವರದಿಗಳಿವೆ.

ಇದನ್ನೂ ಓದಿ:Ravindra Jadeja: ‘ಪುಷ್ಪ ಅಂದ್ರೆ ಹೂವಲ್ಲ; ಬೆಂಕಿ!’; ಮಾಸ್ ಅವತಾರದಲ್ಲಿ ಕಾಣಿಸಿಕೊಂಡು ಮಸ್ತ್ ಡೈಲಾಗ್ ಹೇಳಿದ ಜಡೇಜಾ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ