AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 6ನೇ ಟೆಸ್ಟ್ ಶತಕ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ ರವೀಂದ್ರ ಜಡೇಜಾ

Ravindra Jadeja's 6th Test Century: 36ನೇ ವಯಸ್ಸಿನಲ್ಲಿ ಉಪನಾಯಕತ್ವ ವಹಿಸಿಕೊಂಡಿರುವ ರವೀಂದ್ರ ಜಡೇಜಾ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ 6ನೇ ಟೆಸ್ಟ್ ಶತಕ ಗಳಿಸಿ ಮಿಂಚಿದ್ದಾರೆ. ಇಂಗ್ಲೆಂಡ್ ಪ್ರವಾಸದ ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ ಜಡೇಜಾ, 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಎಂ.ಎಸ್. ಧೋನಿ ಅವರ 6 ಟೆಸ್ಟ್ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ವೃತ್ತಿಜೀವನದ ಅಂತ್ಯದಲ್ಲಿಯೂ ಅವರ ಈ ಸಾಧನೆ ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಮೂಡಿಸಿದೆ.

IND vs WI: 6ನೇ ಟೆಸ್ಟ್ ಶತಕ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ ರವೀಂದ್ರ ಜಡೇಜಾ
Ravindra Jadeja
ಪೃಥ್ವಿಶಂಕರ
|

Updated on:Oct 03, 2025 | 5:11 PM

Share

36ನೇ ವಯಸ್ಸಿನಲ್ಲಿ ಅಂದರೆ ವೃತ್ತಿಜೀವನದ ಅಂತ್ಯದ ದಿನಗಳಲ್ಲಿ ಟೀಂ ಇಂಡಿಯಾದ ಉಪನಾಯಕತ್ವ ವಹಿಸಿಕೊಂಡು ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿದಿರುವ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja), ಇಂಗ್ಲೆಂಡ್ ಪ್ರವಾಸದಲ್ಲಿ ಯಾವ ರೀತಿಯ ಪ್ರದರ್ಶನ ನೀಡಿದ್ದರೋ ಅದೇ ಪ್ರದರ್ಶನವನ್ನು ಇದೀಗ ವಿಂಡೀಸ್ ವಿರುದ್ಧ ಮುಂದುವರೆಸಿದ್ದಾರೆ. ವಿಂಡೀಸ್ ವಿರುದ್ಧ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರವೀಂದ್ರ ಜಡೇಜಾ 168 ಎಸೆತಗಳಲ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ 6ನೇ ಶತಕವನ್ನು ಪೂರೈಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆರು ಶತಕಗಳನ್ನುಬಾರಿಸಿದ್ದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಅಜೇಯ ಶತಕ ಬಾರಿಸಿದ ಜಡೇಜಾ

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರವೀಂದ್ರ ಜಡೇಜಾ, ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿಯೂ ತಮ್ಮ ಅದ್ಭುತ ಪ್ರದರ್ಶನವನ್ನು ಪುನರಾವರ್ತಿಸಿದರು ಶತಕ ಗಳಿಸಿದರು. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 168 ಎಸೆತಗಳನ್ನು ಎದುರಿಸಿದ ಜಡೇಜಾ 5 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳನ್ನು ಬಾರಿಸಿದರು. ಇದು ಮಾತ್ರವಲ್ಲದೆ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಅವರೊಂದಿಗೆ 331 ಎಸೆತಗಳಲ್ಲಿ ಐದನೇ ವಿಕೆಟ್‌ಗೆ 206 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ದಿನದ ಅಂತ್ಯದ ವೇಳೆಗೆ, ಜಡೇಜಾ 176 ಎಸೆತಗಳಲ್ಲಿ 6 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳೊಂದಿಗೆ 104 ರನ್‌ಗಳೊಂದಿಗೆ ಅಜೇಯರಾಗಿ ಉಳಿದಿದ್ದಾರೆ.

ಧೋನಿಯನ್ನು ಹಿಂದಿಕ್ಕಿದ ಜಡೇಜಾ

ತಮ್ಮ ಟೆಸ್ಟ್ ವೃತ್ತಿಜೀವನದ 6ನೇ ಟೆಸ್ಟ್ ಶತಕವನ್ನು ಬಾರಿಸಿರುವ ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಧೋನಿ ತಮ್ಮ ಟೆಸ್ಟ್ ಬದುಕಿನಲ್ಲಿ ಆರು ಟೆಸ್ಟ್ ಶತಕಗಳನ್ನು ಬಾರಿಸಿದ್ದರು. ಇದೀಗ ಜಡೇಜಾ ತಮ್ಮ 6ನೇ ಶತಕದೊಂದಿಗೆ ಧೋನಿಯನ್ನು ಸರಿಗಟ್ಟಿದ್ದಾರೆ. ಹಾಗೆಯೇ ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಷಯದಲ್ಲಿ ಜಡೇಜಾ, ಧೋನಿಯನ್ನು ಹಿಂದಿಕ್ಕಿದ್ದಾರೆ. ಜಡೇಜಾ ಇದುವರೆಗೆ 7,213 ಎಸೆತಗಳನ್ನು ಎದುರಿಸಿ 80 ಟೆಸ್ಟ್ ಸಿಕ್ಸರ್​ಗಳನ್ನು ಬಾರಿಸಿದ್ದರೆ, ಮಹೇಂದ್ರ ಸಿಂಗ್ ಧೋನಿ 8,104 ಎಸೆತಗಳಲ್ಲಿ 76 ಸಿಕ್ಸರ್‌ಗಳನ್ನು ಬಾರಿಸಿದ್ದರು.

IND vs WI: ವೃತ್ತಿಜೀವನದ ಅಂತ್ಯದಲ್ಲಿ ರವೀಂದ್ರ ಜಡೇಜಾಗೆ ಟೆಸ್ಟ್ ಉಪನಾಯಕತ್ವ ನೀಡಲು ಕಾರಣವೇನು?

ಇದರ ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಜಡೇಜಾ ಮೂರನೇ ಸ್ಥಾನಕ್ಕೇರಿದ್ದಾರೆ. ರಿಷಭ್ ಪಂತ್ ಮತ್ತು ವೀರೇಂದ್ರ ಸೆಹ್ವಾಗ್ ತಲಾ 90 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಉಳಿದಂತೆ ರೋಹಿತ್ ಶರ್ಮಾ 88 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Fri, 3 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ