Ravindra Jadeja: ದೃಢ ಹೆಜ್ಜೆ…ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ತಾರಾ ರವೀಂದ್ರ ಜಡೇಜಾ..?

| Updated By: ಝಾಹಿರ್ ಯೂಸುಫ್

Updated on: Sep 15, 2022 | 12:31 PM

India T20 Squad: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್.

Ravindra Jadeja: ದೃಢ ಹೆಜ್ಜೆ...ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ತಾರಾ ರವೀಂದ್ರ ಜಡೇಜಾ..?
Ravindra Jadeja
Follow us on

T20 World Cup 2022: ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಆಯ್ಕೆ ಮಾಡಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಪ್ರಮುಖ ಆಲ್​ರೌಂಡರ್​ ರವೀಂದ್ರ ಜಡೇಜಾಗೆ (Ravindra Jadeja) ಸ್ಥಾನ ನೀಡಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಏಷ್ಯಾಕಪ್​ ವೇಳೆ ಗಾಯಗೊಂಡಿದ್ದ ಜಡೇಜಾ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ತಂಡದ ಆಯ್ಕೆಗೆ ಪರಿಗಣಿಸಲಾಗಿರಲಿಲ್ಲ.

ಇದೀಗ ವಿಶ್ರಾಂತಿಯಲ್ಲಿರುವ ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಜಡ್ಡು ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಅಲ್ಲದೆ ಸಂಪೂರ್ಣ ಫಿಟ್ನೆಸ್ ಕಡೆಗೆ ನಿಧಾನವಾಗಿ ಮುನ್ನಡೆಯಲು ಒಂದೊಂದೇ ಹೆಜ್ಜೆ ಇಡುತ್ತಿದ್ದೇನೆ ಎಂದು ಜಡೇಜಾ ಬರೆದುಕೊಂಡಿದ್ದಾರೆ.

ಆದಾಗ್ಯೂ, ಅವರು ತಮ್ಮ ಫಿಟ್ನೆಸ್ ಮಟ್ಟಕ್ಕೆ ಮರಳಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಆದರೆ ಟಿ20 ವಿಶ್ವಕಪ್​ಗೆ ಇನ್ನೂ ಒಂದು ತಿಂಗಳ ಸಮಯವಿದೆ. ಒಂದು ವೇಳೆ ಟೂರ್ನಿ ಆರಂಭಕ್ಕೂ ಮುನ್ನ ಜಡೇಜಾ ಚೇತರಿಸಿಕೊಂಡರೆ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಕೆಂದರೆ ಟಿ20 ವಿಶ್ವಕಪ್​ ಆರಂಭಕ್ಕೂ ಒಂದು ವಾರಗಳ ಮುಂಚಿತವಾಗಿ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಒಂದು ವೇಳೆ ಈ ಅವಧಿಯೊಳಗೆ ಜಡೇಜಾ ಸಂಪೂರ್ಣ ಚೇತರಿಸಿಕೊಂಡರೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದರೂ ಅಚ್ಚರಿಯಿಲ್ಲ.

ಸದ್ಯ ರವೀಂದ್ರ ಜಡೇಜಾ ಸ್ಥಾನದಲ್ಲಿ ಬದಲಿ ಎಡಗೈ ಆಲ್​ರೌಂಡರ್​ ಆಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಇದಾಗ್ಯೂ ಫೀಲ್ಡಿಂಗ್, ಬೌಲಿಂಗ್ ಹಾಗೂ ಬ್ಯಾಟಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ರವೀಂದ್ರ ಜಡೇಜಾ ಅವರ ಅಲಭ್ಯತೆಯು ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗಬಹುದು.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.