
2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮೊದಲ 20 ಪಂದ್ಯಗಳ ವೇಳಾಪಟ್ಟಿಯ ಪ್ರಕಾರ, ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಮೊದಲ ಪಂದ್ಯಕ್ಕೆ ಆರ್ಸಿಬಿಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹದ ನಡುವೆ ತಂಡದ ಮಾಜಿ ಆಟಗಾರ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ (Dinesh Karthik) ಆರ್ಸಿಬಿಯ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ. ದಿನೇಶ್ ಕಾರ್ತಿಕ್ ಹೆಸರಿಸಿರುವ ತಂಡದಲ್ಲಿ ಕಿಂಗ್ ಕೊಹ್ಲಿ (Virat Kohli) ಇದ್ದಾರೆಯಾದರೂ, ತಂಡವನ್ನು ಚಾಂಪಿಯನ್ ಮಾಡಿದ ರಜತ್ ಪಾಟಿದರ್ಗೆ ನಾಯಕತ್ವ ನೀಡಿದ್ದಾರೆ.
ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್ ಅವರನ್ನು ತಮ್ಮ ತಂಡದ ನಾಯಕನನ್ನಾಗಿ ಆಯ್ಕೆ ಮಾಡಲು ಕಾರಣವೂ ಇದೆ. ಅದೆನೆಂದರೆ ಬರೋಬ್ಬರಿ 17 ವರ್ಷಗಳಿಂದ ಒಂದೇ ಒಂದು ಐಪಿಎಲ್ ಟ್ರೋಫಿ ಗೆಲ್ಲದ ಆರ್‌ಸಿಬಿ, ರಜತ್ ಪಾಟಿದರ್ ನಾಯಕನಾದ ಮೊದಲ ಆವೃತ್ತಿಯಲ್ಲೇ ತನ್ನ ಟ್ರೋಫಿ ಬರವನ್ನು ನೀಗಿಸಿಕೊಂಡಿತ್ತು. ಹೀಗಾಗಿ ಆರ್ಸಿಬಿಯ ಈ ಐತಿಹಾಸಿಕ ಗೆಲುವಿನಲ್ಲಿ ನಾಯಕನಾಗಿ ರಜತ್ ಪಾಟಿದಾರ್ ವಹಿಸಿದ ಪಾತ್ರವನ್ನು ಶ್ಲಾಘಿಸಿರುವ ಕಾರ್ತಿಕ, ‘ವಿರಾಟ್ ಕೊಹ್ಲಿ ಹಲವು ವರ್ಷಗಳ ಕಾಲ ತಂಡವನ್ನು ಮುನ್ನಡೆಸಿ ಯಶಸ್ವಿಯಾಗಿದ್ದಾರೆ. ಆದರೆ ರಜತ್ ಪಾಟಿದಾರ್ ತಂಡಕ್ಕೆ ಕಪ್ ನೀಡಿದ ನಾಯಕ. ಬ್ಯಾಟ್ಸ್‌ಮನ್ ಆಗಿ ಅವರು ಕಡಿಮೆ ಅವಧಿಯಲ್ಲಿ ಮಾಡಿದ ಪ್ರಭಾವ ಅಸಾಧಾರಣವಾಗಿದೆ’ ಎಂದು ಕಾರ್ತಿಕ್ ವಿವರಿಸಿದ್ದಾರೆ.
ಉಳಿದಂತೆ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಹೊಸ ಪ್ರಯೋಗ ಮಾಡಿರುವ ಡಿಕೆ, ‘ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಮತ್ತು ಫಾಫ್ ಡು ಪ್ಲೆಸಿಸ್ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಸ್ಥಾನ ಪಡೆದರೆ, ನಾಯಕ ರಜತ್ ಪಾಟಿದಾರ್ ನಾಲ್ಕನೇ ಸ್ಥಾನವನ್ನುನ ಪಡೆದುಕೊಂಡಿದ್ದಾರೆ. ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್ ಐದನೇ ಸ್ಥಾನ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಆರನೇ ಕ್ರಮಾಂಕದಲ್ಲಿ ಸ್ಥಾನ ಪಡೆದಿದ್ದಾರೆ. ಕೃನಾಲ್ ಪಾಂಡ್ಯ ಆಲ್ ರೌಂಡರ್ ಕೋಟಾದಲ್ಲಿ ಸ್ಥಾನ ಪಡೆದಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಅನುಭವಿ ಮತ್ತು ಹೊಸಬರ ಮಿಶ್ರಣವಿದೆ. ಆರ್‌ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆದಿರುವ ಯುಜ್ವೇಂದ್ರ ಚಾಹಲ್ ಮತ್ತು ಹರ್ಷಲ್ ಪಟೇಲ್‌ಗೆ ಸ್ಥಾನ ನೀಡಲಾಗಿದೆ. ವೇಗದ ಬೌಲಿಂಗ್ ಜವಾಬ್ದಾರಿಗಳನ್ನು ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹೇಜಲ್‌ವುಡ್‌ಗೆ ವಹಿಸಲಾಗಿದೆ. ಆರ್‌ಸಿಬಿ ಕಪ್ ಗೆಲ್ಲುವಲ್ಲಿ ಹೇಜಲ್‌ವುಡ್ ಪ್ರಮುಖ ಪಾತ್ರ ವಹಿಸಿದ್ದರಿಂದ ಅವರನ್ನು ತಂಡದಲ್ಲಿ ಸೇರಿಸಲಾಗಿದೆ ಎಂದು ಡಿಕೆ ಹೇಳಿಕೊಂಡಿದ್ದಾರೆ.
IPL 2026: 49, 158.. ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್; ಕೆರಳಿ ಕೆಂಡವಾದ ಫ್ಯಾನ್ಸ್
ದಿನೇಶ್ ಕಾರ್ತಿಕ್ ಸಾರ್ವಕಾಲಿಕ ಆರ್‌ಸಿಬಿ ಪ್ಲೇಯಿಂಗ್ 11: ಕ್ರಿಸ್ ಗೇಲ್, ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಎಬಿ ಡಿವಿಲಿಯರ್ಸ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಜೋಶ್ ಹೇಜಲ್‌ವುಡ್,
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ