WPL 2023: ಆರ್​ಸಿಬಿ ಮಹಿಳಾ ತಂಡಕ್ಕೆ ನಾಯಕಿಯಾಗಿ ಸ್ಮೃತಿ ಮಂಧಾನ ಆಯ್ಕೆ..!

Smriti Mandhana: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಸ್ಮೃತಿ ಮಂಧಾನ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ.

WPL 2023: ಆರ್​ಸಿಬಿ ಮಹಿಳಾ ತಂಡಕ್ಕೆ ನಾಯಕಿಯಾಗಿ ಸ್ಮೃತಿ ಮಂಧಾನ ಆಯ್ಕೆ..!
ಸ್ಮೃತಿ ಮಂಧಾನ
Follow us
ಪೃಥ್ವಿಶಂಕರ
|

Updated on:Feb 18, 2023 | 10:40 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಸ್ಮೃತಿ ಮಂಧಾನ (Smriti Mandhana) ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಆರ್​ಸಿಬಿ ಪುರುಷರ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಹಾಲಿ ನಾಯಕ ಫಾಫ್ ಡು ಪ್ಲೆಸಿಸ್ ( Virat Kohli and Faf du Plessis), ಆರ್​ಸಿಬಿ ಮಹಿಳಾ ತಂಡದ ನಾಯಕಿ ಯಾರು ಎಂಬುದನ್ನು ರಿವಿಲ್ ಮಾಡಿದರು. ಕೆಲವು ದಿನಗಳ ಹಿಂದೆ ನಡೆದ ಮೊದಲ ಮಹಿಳಾ ಪ್ರೀಮಿಯರ್ ಲೀಗ್‌ ಆಟಗಾರ್ತಿಯರ ಹರಾಜಿನಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸ್ಮೃತಿ ಅವರನ್ನು ಆರ್​ಸಿಬಿ ಬರೋಬ್ಬರಿ 3.40 ಕೋಟಿಗೆ ಖರೀದಿಸಿತ್ತು. ವಾಸ್ತವವಾಗಿ ಹರಾಜಿನಲ್ಲಿ ಸ್ಮೃತಿ ಮಂಧಾನ ಖರೀದಿಗಾಗಿ ಮುಂಬೈ ಮತ್ತು ಆರ್‌ಸಿಬಿ ನಡುವೆ ತೀವ್ರ ಫೈಪೋಟಿ ನಡೆಯಿತು. ಅಂತಿಮವಾಗಿ ಮಂಧಾನ ಅವರನ್ನು 3.40 ಕೋಟಿ ರೂ.ಗೆ ಖರೀದಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಶಸ್ವಿಯಾಗಿತ್ತು.

ದಾಖಲೆಯ ಮೊತ್ತ ನೀಡಿ ಸ್ಮೃತಿ ಅವರನ್ನು ಖರೀದಿಸಿದಲ್ಲಾಗಲೇ ಅವರು ನಾಯಕಿಯಾಗುವುದು ಖಚಿತವೆಂತಲೇ ಹೇಳಲಾಗುತ್ತಿತ್ತು. ಇದೀಗ ತನ್ನ ಮಹಿಳಾ ತಂಡಕ್ಕೆ ನಾಯಕಿಯನ್ನು ಆಯ್ಕೆ ಮಾಡಿರುವ ಆರ್​ಸಿಬಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದೆ. ಆರ್​ಸಿಬಿ ಹಂಚಿಕೊಂಡಿರುವ ವಿಡಿಯೋದಲ್ಲಿ ಆರ್​ಸಿಬಿ ಮಾಜಿ ನಾಯಕ ಕೊಹ್ಲಿ ಮತ್ತು ಹಾಲಿ ನಾಯಕ ಡುಪ್ಲೆಸಿಸ್ ಇಬ್ಬರೂ ಆರ್​ಸಿಬಿ ಮಹಿಳಾ ತಂಡದ ಮೊದಲ ನಾಯಕಿಯ ಹೆಸರನ್ನು ಘೋಷಿಸಿದ್ದಾರೆ.

ನಾಯಕತ್ವವನ್ನು ಆನಂದಿಸಿದ್ದೆ

ಸುಮಾರು 10 ವರ್ಷಗಳ ಕಾಲ ಆರ್‌ಸಿಬಿ ತಂಡದ ನಾಯಕತ್ವ ವಹಿಸಿಕೊಂಡಿದ್ದೆ ಮತ್ತು ಈ ಕ್ಷಣವನ್ನು ತುಂಬಾ ಎಂಜಾಯ್ ಮಾಡಿದ್ದೇನೆ. ಇದು ತಮ್ಮ ವೃತ್ತಿಜೀವನದ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಈ ವಿಡಿಯೋದಲ್ಲಿ ಕೊಹ್ಲಿ ಹೇಳಿಕೊಂಡಿದ್ದಾರೆ. ನಾಯಕನ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಕಳೆದ ವರ್ಷವೂ ಡುಪ್ಲೆಸಿಸ್ ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು. ಆರ್​ಸಿಬಿ ಮಹಿಳಾ ತಂಡವು ತುಂಬಾ ಬಲಿಷ್ಠವಾಗಿದ್ದು, ಆರ್​ಸಿಬಿಯ ಮೊದಲ ಮಹಿಳಾ ನಾಯಕಿಯನ್ನು ಹೆಸರಿಸುವ ಸಮಯ ಇದೀಗ ಬಂದಿದೆ. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿಯ ವಿಶೇಷ ತಂಡದ ನಾಯಕತ್ವವನ್ನು ಮತ್ತೊಬ್ಬರು 18ನೇ ಜೆರ್ಸಿ ನಂಬರ್​ನ ಪ್ಲೇಯರ್ ವಹಿಸಿಕೊಳ್ಳಲಿದ್ದಾರೆ. ಆ ಹೆಸರು ಸ್ಮೃತಿ ಮಂಧಾನ ಎಂದು ಕೊಹ್ಲಿ ಈ ವಿಡಿಯೋದಲ್ಲಿ ಹೇಳಿಕೊಳ್ಳುವ ಮೂಲಕ ಆರ್​ಸಿಬಿ ಮಹಿಳಾ ತಂಡದ ನಾಯಕಿಯನ್ನು ಹೆಸರಿಸಿದರು.

ಟಿ20 ಕ್ರಿಕೆಟ್​ನಲ್ಲಿ ಸ್ಮೃತಿ ದಾಖಲೆ

ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದರಲ್ಲಿ 20 ಅರ್ಧಶತಕಗಳು ಸೇರಿದ್ದು, ಅಂತಾರಾಷ್ಟ್ರೀಯ ಟಿ20ಯಲ್ಲಿ ಮಂಧಾನ ಸ್ಟ್ರೈಕ್ ರೇಟ್ 123ಕ್ಕಿಂತ ಹೆಚ್ಚಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:21 am, Sat, 18 February 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ