AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್ತುಳಿತದ ‘ಕಪ್’​ಚುಕ್ಕೆ: ಸಂತ್ರಸ್ತರ ಕುಟುಂಬಗಳಿಗೆ 25 ಲಕ್ಷ ರೂ. ನೀಡಿದ RCB

IPL 2025: ಐಪಿಎಲ್​ 2025ರ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 184 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ 6 ರನ್​ಗಳ ರೋಚಕ ಜಯದೊಂದಿಗೆ ಆರ್​ಸಿಬಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಕಾಲ್ತುಳಿತದ 'ಕಪ್'​ಚುಕ್ಕೆ: ಸಂತ್ರಸ್ತರ ಕುಟುಂಬಗಳಿಗೆ 25 ಲಕ್ಷ ರೂ. ನೀಡಿದ RCB
Rcb Cares
ಝಾಹಿರ್ ಯೂಸುಫ್
|

Updated on: Aug 30, 2025 | 10:59 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL)​ 2025 ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಜೂನ್ 4 ‘ಕಪ್​’ಚುಕ್ಕೆ. ಜೂನ್ 4, 2025 ರಂದು ಬೆಂಗಳೂರಿನಲ್ಲಿ ನಡೆದ  RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು. ಈ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸಹಾಯಹಸ್ತ ಚಾಚಿದೆ.

ಆರ್​ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ. ಈ ನೆರವಿನೊಂದಿಗೆ ಆರ್​ಸಿಬಿ ಹೊಸ ಅಧ್ಯಾಯವನ್ನು ಸಹ ಶುರು ಮಾಡಿದೆ.

ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್​ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ನೀಡಿದೆ. ಅಲ್ಲದೆ ಆರ್​ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದ್ದಾರೆ.

ಆರ್​ಸಿಬಿ ಕೇರ್ಸ್​ನ ಅಧಿಕೃತ ಪ್ರಕಟಣೆ ಹೀಗಿದೆ:

ಜನವರಿ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.

ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.

ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್ಸಿಬಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.

ಇದು ಆರ್ಸಿಬಿ ಕೇರ್ಸ್ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆಯಾಗಿದೆ.

ಆರ್ಸಿಬಿ ಕೇರ್ಸ್ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ… ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಇದನ್ನೂ ಓದಿ: IPL 2026: ಐಪಿಎಲ್ ನಿಯಮ… RCB ಈ ಇಬ್ಬರನ್ನು ಬಿಡುಗಡೆ ಮಾಡಲೇಬೇಕು!

ಇದೀಗ ಅಭಿಮಾನಿಗಳ ಮೇಲಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಕಾಳಜಿಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಆರ್​ಸಿಬಿ ಕೇರ್ಸ್​ನ ನಡೆಯನ್ನು ಸ್ವಾಗತಿಸಿದ್ದಾರೆ.

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?