IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್

IPL 2026 RCB vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿರುವ ಆರ್​ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್
Rcb

Updated on: May 09, 2026 | 2:08 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾಯ್​ಪುರ್​ನಲ್ಲಿ ನಾಳೆ (ಮೆ.9) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಏಕೆಂದರೆ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ ಕಳೆದ ಎರಡು ಮ್ಯಾಚ್​ಗಳಲ್ಲೂ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬ್ಯಾಟಿಂಗ್. ಅದರಲ್ಲೂ ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ ಅವರ ಕಳಪೆ ಫಾರ್ಮ್ ಆರ್​ಸಿಬಿ ಪಾಲಿಗೆ ಮುಳುವಾಗುತ್ತಿದೆ. ಹೀಗಾಗಿ ಈ ಇಬ್ಬರನ್ನು ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿದೆ.

ಅದರಂತೆ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕರಾಗಿ ಜೇಕಬ್ ಬೆಥೆಲ್ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಐದನೇ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಕಾಣಿಸಿಕೊಂಡರೆ, ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಜೋಡರ್ನ್ ಕಾಕ್ಸ್​ ಕಣಕ್ಕಿಳಿಯಲಿದ್ದಾರೆ.

ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯ ಕಣಕ್ಕಿಳಿದರೆ, ರೊಮಾರಿಯೋ ಶೆಫರ್ಡ್ ಬದಲಿಗೆ ಫಿನಿಶರ್ ಪಾತ್ರದಲ್ಲಿ ವೆಂಕಟೇಶ್ ಅಯ್ಯರ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಐಪಿಎಲ್ ವೀಕ್ಷಕರನ್ನು ಹೆಚ್ಚಿಸಲು ಖ್ಯಾತ ಉದ್ಯಮಿ ನೀಡಿದ ಸಲಹೆಗಳು ಹೀಗಿವೆ

ಇನ್ನು ಬೌಲರ್​ಗಳಾಗಿ​ ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ದಾರ್ ಕಣಕ್ಕಿಳಿಯಲಿದ್ದಾರೆ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸುಯಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

    • ವಿರಾಟ್ ಕೊಹ್ಲಿ
    • ಜೇಕಬ್ ಬೆಥೆಲ್
    • ದೇವದತ್ ಪಡಿಕ್ಕಲ್
    • ರಜತ್ ಪಾಟಿದಾರ್ (ನಾಯಕ)
    • ಟಿಮ್ ಡೇವಿಡ್
    • ಜೋರ್ಡನ್ ಕಾಕ್ಸ್​ (ವಿಕೆಟ್ ಕೀಪರ್)
    • ಕೃನಾಲ್ ಪಾಂಡ್ಯ
    • ವೆಂಕಟೇಶ್ ಅಯ್ಯರ್
    • ಜೋಶ್ ಹೇಝಲ್​ವುಡ್
    • ಭುವನೇಶ್ವರ್ ಕುಮಾರ್
    • ರಾಸಿಖ್ ದಾರ್
    • ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

 

Follow Us