ಇಂದು RCB = ರಾಯಲ್ ಚಾಲೆಂಜರ್ಸ್​ ಬಾಂಬೆ..!

IPL 2022: ಆಡಿರುವ 13 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಕೇವಲ 3 ಗೆಲುವು ದಾಖಲಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂಬೈ ಗೆದ್ದರೆ ಆರ್​ಸಿಬಿಗೆ ಪ್ಲೇಆಫ್​ ಚಾನ್ಸ್ ಸಿಗಲಿದೆ​.

ಇಂದು RCB = ರಾಯಲ್ ಚಾಲೆಂಜರ್ಸ್​ ಬಾಂಬೆ..!
ಸಾಂದರ್ಭಿಕ ಚಿತ್ರ
Follow us
| Edited By: Zahir Yusuf

Updated on: May 21, 2022 | 2:59 PM

IPL 2022: ಐಪಿಎಲ್​ನ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ (DC vs MI) ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ (RCB) ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಮಾತ್ರ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. ಹಾಗೆಯೇ ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿಗೆ ಪ್ಲೇಆಫ್​ ಚಾನ್ಸ್ ಸಿಗಲಿದೆ. ಹಾಗಾಗಿ ಡೆಲ್ಲಿ – ಮುಂಬೈ (MI vs DC)  ಕದನವು ಆರ್​ಸಿಬಿ ತಂಡದ ಪ್ಲೇಆಫ್​ ಅನ್ನು ನಿರ್ಧರಿಸಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಬೇಕೆಂದು ಆರ್​ಸಿಬಿ ಅಭಿಮಾನಿಗಳು ಬಯಸುತ್ತಿದ್ದಾರೆ. ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಆರ್​ಸಿಬಿ ತಂಡವು ಐಪಿಎಲ್​ನಿಂದ ಹೊರಬೀಳಲಿದೆ. ಇದಾಗ್ಯೂ ಈ ಪಂದ್ಯದ ಫಲಿತಾಂಶ ಮುಂಬೈ ಇಂಡಿಯನ್ಸ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಏಕೆಂದರೆ ಆಡಿರುವ 13 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಕೇವಲ 3 ಗೆಲುವು ದಾಖಲಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಮುಂಬೈ ಗೆದ್ದರೆ ಆರ್​ಸಿಬಿಗೆ ಪ್ಲೇಆಫ್​ ಚಾನ್ಸ್ ಸಿಗಲಿದೆ​. ಸೋತರೆ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇಆಫ್​ ಪ್ರವೇಶಿಸಲಿದೆ. ಹೀಗಾಗಿಯೇ ಖುದ್ದು ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಸೇರಿದಂತೆ ಬಹುತೇಕ ಆರ್​ಸಿಬಿ ಆಟಗಾರರು ಮುಂಬೈ ಇಂಡಿಯನ್ಸ್ ಗೆಲ್ಲಲಿ ಎಂದು ಬಯಸಿದ್ದಾರೆ.

ಇದನ್ನೂ ಓದಿ
Image
IPL 2022: ಎಬಿಡಿ, ಕ್ರಿಸ್ ಗೇಲ್​ಗೆ RCB ಯ ಹಾಲ್ ಆಫ್ ಫೇಮ್ ಗೌರವ
Image
IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ವಿರಾಟ್ ಕೊಹ್ಲಿ, ಶನಿವಾರ ಮುಂಬೈ ಇಂಡಿಯನ್ಸ್​ಗೆ ಹೆಚ್ಚುವರಿ 25 ಮಂದಿ ಬೆಂಬಲಿಗರು (ಆರ್‌ಸಿಬಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ) ಇರಲಿದ್ದಾರೆ. ಅವರು ಕ್ರೀಡಾಂಗಣದಿಂದ ಹುರಿದುಂಬಿಸುವುದನ್ನು ಸಹ ಕಾಣಬಹುದು ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮುಂಬೈ ಇಂಡಿಯನ್ಸ್​ ನಮ್ಮ ಸಪೋರ್ಟ್ ಎಂದು ತಿಳಿಸಿದ್ದಾರೆ. ಇತ್ತ ಆರ್​ಸಿಬಿ ಅಭಿಮಾನಿಗಳು ಕೂಡ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಬೇಕೆಂದು ಬಯಸುತ್ತಿದ್ದಾರೆ.

ಇದರ ಬೆನ್ನಲ್ಲೇ ಮಾಜಿ ಆರ್​ಸಿಬಿ ಆಟಗಾರ ವಾಸಿಂ ಜಾಫರ್ ಹಂಚಿಕೊಂಡಿರುವ ಪೋಸ್ಟ್​ವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಪಂದ್ಯವಾಡುತ್ತಿರುವುದು ಅವರು, ಆದರೆ ಪಂದ್ಯ ನಮ್ಮದು ಎಂಬ ಪೋಸ್ಟ್​ವೊಂದನ್ನು ಜಾಫರ್ ಟ್ವಿಟರ್​ನಲ್ಲಿ ಶೇರ್ ಮಾಡಿದ್ದಾರೆ. ಜೊತೆಗೆ ಇವತ್ತು ಆರ್​ಸಿಬಿ ಅಂದರೆ ರಾಯಲ್ ಚಾಲೆಂಜರ್ಸ್ ಬಾಂಬೆ (RCB=Royal Challengers Bombay) ಎಂಬ ಕ್ಯಾಪ್ಷನ್ ನೀಡಿದ್ದಾರೆ.

ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯವಾಡುತ್ತಿದ್ದರೂ, ಪಂದ್ಯದ ಫಲಿತಾಂಶ ಆರ್​ಸಿಬಿಗೆ ಮುಖ್ಯ. ಹೀಗಾಗಿ ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಇದು ರಾಯಲ್ ಚಾಲೆಂಜರ್ಸ್ ಬಾಂಬೆ (ಮುಂಬೈ) ಪಂದ್ಯ ಎಂದು ವಾಸಿಂ ಜಾಫರ್ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಒಟ್ಟಿನಲ್ಲಿ ಇಂದಿನ ಪಂದ್ಯವು ಮುಂಬೈ ಇಂಡಿಯನ್ಸ್​ ಅಭಿಮಾನಿಗಳಿಗಿಂತ ಆರ್​ಸಿಬಿ ಅಭಿಮಾನಿಗಳಿಗೆ ಬಹುಮುಖ್ಯ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾರು ಗೆಲ್ತಾರೆ ಎಂಬುದೇ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಅಭಿಮಾನಿಗಳ ಕುತೂಹಲ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ