ಡ್ಯಾನ್ಸ್ ಕೊಹ್ಲಿ ಡ್ಯಾನ್ಸ್​: RCB ಪಾರ್ಟಿ ವಿಡಿಯೋ ವೈರಲ್

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್​ಗಳಲ್ಲಿ 161 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಡ್ಯಾನ್ಸ್ ಕೊಹ್ಲಿ ಡ್ಯಾನ್ಸ್​: RCB ಪಾರ್ಟಿ ವಿಡಿಯೋ ವೈರಲ್
Virat Kohli - Anushka Sharma
Image Credit source: RCB

Updated on: Jun 01, 2026 | 10:42 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ, ಇಡೀ ದೇಶಾದ್ಯಂತ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ಅಹಮದಾಬಾದ್‌ನಲ್ಲಿ ನಡೆದ ಆರ್‌ಸಿಬಿ ತಂಡದ ಪಾರ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.

ಆರ್‌ಸಿಬಿ ಫ್ರಾಂಚೈಸಿ ಹಂಚಿಕೊಂಡಿರುವ ವಿಶೇಷ ವಿಡಿಯೋದಲ್ಲಿ, ವಿರಾಟ್ ಕೊಹ್ಲಿ ತಮ್ಮ ಎಂದಿನ ಎನರ್ಜಿಟಿಕ್ ಶೈಲಿಯಲ್ಲಿ ಬಾಲಿವುಡ್ ಮತ್ತು ಪಾಪ್ ಹಾಡುಗಳಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಕೊಹ್ಲಿ ಅವರ ಈ ದಿಢೀರ್ ಮತ್ತು ಮಾಸ್ ಡ್ಯಾನ್ಸ್ ಮೂವ್ಸ್ ನೋಡಿ ಪಕ್ಕದಲ್ಲೇ ಇದ್ದ ಅನುಷ್ಕಾ ಶರ್ಮಾ ಕಣ್ಣರಳಿಸಿ, ಆಶ್ಚರ್ಯದಿಂದ ನಗುತ್ತಾ ಸಖತ್ ಎಂಜಾಯ್ ಮಾಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿ ಜೊತೆ ದಿನೇಶ್ ಕಾರ್ತಿಕ್ ಸೇರಿದಂತೆ ಆರ್‌ಸಿಬಿ ತಂಡದ ಇತರ ಆಟಗಾರರು ಕೂಡ ಕುಣಿದು ಕುಪ್ಪಳಿಸಿ ಎಂಜಾಯ್ ಮಾಡಿದ್ದಾರೆ. ಇದೀಗ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿರಾಟ್ ಕೊಹ್ಲಿ ಡ್ಯಾನ್ಸ್ ವಿಡಿಯೋ:

ಗೆದ್ದು ಬೀಗಿದ ಚಾಂಪಿಯನ್ಸ್​:

ಈ ಬಾರಿಯ ಐಪಿಎಲ್​ನಲ್ಲಿ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲುಣಿಸಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್​ಗಳಲ್ಲಿ 161 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದ ಮೂರನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಸಾಧಣೆ ಮಾಡಿದ್ದರು.

ಇದನ್ನೂ ಓದಿ: ಕೊಹ್ಲಿಯನ್ನು ಕೆಣಕಿ ಸಿಕ್ಕಿಹಾಕಿಕೊಂಡ ಸಾಯಿ!

ಚೆನ್ನೈ ಸೂಪರ್ ಕಿಂಗ್ಸ್ ತಂಡವು 2010 ಹಾಗೂ 2011 ರಲ್ಲಿ ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದರೆ, ಮುಂಬೈ ಇಂಡಿಯನ್ಸ್ ತಂಡವು 2019 ಹಾಗೂ 2020 ರಲ್ಲಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು 2025, 2026 ರಲ್ಲಿ ಚಾಂಪಿಯನ್ ಪಟ್ಟಕ್ಕೇರುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

 

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us