AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಕೊಹ್ಲಿ- ಪಡಿಕ್ಕಲ್ ಅರ್ಧಶತಕ; ಆರ್​ಸಿಬಿಗೆ ಚಿನ್ನಸ್ವಾಮಿಯಲ್ಲಿ 50ನೇ ಜಯ

RCB Dominates GT: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದು ಚಿನ್ನಸ್ವಾಮಿಯಲ್ಲಿ ಆರ್​ಸಿಬಿಯ 50ನೇ ಐತಿಹಾಸಿಕ ಗೆಲುವು. ಈ ವಿಜಯದೊಂದಿಗೆ, ಆರ್​ಸಿಬಿ ಐಪಿಎಲ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಗುಜರಾತ್ ನೀಡಿದ 206 ರನ್ ಗುರಿಯನ್ನು ಆರ್​ಸಿಬಿ 19ನೇ ಓವರ್‌ನಲ್ಲಿ ಯಶಸ್ವಿಯಾಗಿ ಬೆನ್ನಟ್ಟಿತು.

RCB vs GT: ಕೊಹ್ಲಿ- ಪಡಿಕ್ಕಲ್ ಅರ್ಧಶತಕ; ಆರ್​ಸಿಬಿಗೆ ಚಿನ್ನಸ್ವಾಮಿಯಲ್ಲಿ 50ನೇ ಜಯ
Rcb Vs Gt
ಪೃಥ್ವಿಶಂಕರ
|

Updated on:Apr 24, 2026 | 11:25 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿದ ಆರ್​ಸಿಬಿ (RCB), ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಎದುರಿಸಿತ್ತು. ಕಳೆದ ಪಂದ್ಯದಲ್ಲಿ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಇದೀಗ ಗುಜರಾತ್ ವಿರುದ್ಧ 5 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಎರಡನೇ ಸ್ಥಾನವನ್ನು ಅಲಂಕರಿಸಿತು. ಇನ್ನು ಚಿನ್ನಸ್ವಾಮಿ ಮೈದಾನದಲ್ಲಿ ಆರ್​​ಸಿಬಿಗೆ ಇದು 50ನೇ ಗೆಲುವಾಗಿದ್ದು, ಮತ್ತಷ್ಟು ವಿಶೇಷವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 19ನೇ ಓವರ್​ನಲ್ಲಿ ಗೆಲುವಿನ ದಡ ಮುಟ್ಟಿತು.

205 ರನ್ ಕಲೆಹಾಕಿದ ಗುಜರಾತ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ತಂಡದ ಪರ ಸಾಯಿ ಸುದರ್ಶನ್ ಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಮೊದಲ ವಿಕೆಟ್​ಗೆ ಶತಕದ ಜೊತೆಯಾಟವನ್ನು ಕಟ್ಟಿದರು. ಇವರಿಬ್ಬರು ಆಡುವಾಗ ಗುಜರಾತ್ ಬೃಹತ್ ಮೊತ್ತ ಕಲೆಹಾಕುವಂತೆ ತೋರುತ್ತಿತ್ತು. ಆದರೆ ನಾಯಕ ಶುಭಮನ್ ಗಿಲ್ 32 ರನ್ ಗಳಿಸಿ ಔಟಾಗುವುರೊಂದಿಗೆ ಇವರಿಬ್ಬರ ಜೊತೆಯಾಟ ಮುರಿದುಬಿತ್ತು. ಆ ಬಳಿಕ ಬಂದ ಜೋಸ್ ಬಟ್ಲರ್ ಕೂಡ 25 ರನ್ ಗಳಿಸಿ ಔಟಾದರು. ಇಲ್ಲಿಂದ ಗುಜರಾತ್ ಇನ್ನಿಂಗ್ಸ್ ಕುಸಿಯಿತು. ಕೊನೆಯಲ್ಲಿ ಜೇಸನ್ ಹೋಲ್ಡರ್ 23 ರನ್ ಗಳಿಸಿ ತಂಡವನ್ನು 200 ರನ್​ಗಳ ಗಡಿ ದಾಟಿಸಿದರು. ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ತಲಾ 1 ವಿಕೆಟ್ ಪಡೆದರು.

ಕೊಹ್ಲಿ- ಪಡಿಕ್ಕಲ್ ಜೊತೆಯಾಟ

206 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ತಂಡ ಕಳಪೆ ಆರಂಭ ಪಡೆಯಿತು. ಈ ಆವೃತ್ತಿಯಲ್ಲಿ ಮೊದಲ ಪಂದ್ಯವನ್ನು ಆಡುತ್ತಿದ್ದ ಜಾಕೋಬ್ ಬೆಥೆಲ್ ಅವರನ್ನು ಸಿರಾಜ್ 14 ರನ್‌ಗಳಿಗೆ ಔಟ್ ಮಾಡಿದರು. ಆದರೆ ಅದಕ್ಕೂ ಮುನ್ನ ಮೊದಲ ಓವರ್​ನಲ್ಲಿಯೇ ವಿರಾಟ್ ಕೊಹ್ಲಿಗೆ ಜೀವದಾನ ನೀಡಲಾಯಿತು. ಸಿರಾಜ್ ಬೌಲಿಂಗ್‌ನಲ್ಲಿ, ಸುಂದರ್ ಸರಳ ಕ್ಯಾಚ್ ಕೈಬಿಟ್ಟರು. ವಿರಾಟ್‌ಗೆ ಜೀವದಾನ ನೀಡಿದ ಬಳಿಕ, ಗುಜರಾತ್ ಸಂಕಷ್ಟಕ್ಕೆ ಸಿಲುಕಿತು. ವಿರಾಟ್ ಕೊಹ್ಲಿ, ಪಡಿಕ್ಕಲ್ ಜೊತೆ ಸೇರಿ ಉತ್ತಮ ಜೊತೆಯಾಟ ಕಟ್ಟಿದರು. ಈ ಇಬ್ಬರು ಕೇವಲ 26 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು. ಹೀಗಾಗಿ ಆರ್‌ಸಿಬಿ ಒಂಬತ್ತು ಓವರ್‌ಗಳಲ್ಲಿ 100 ರನ್​ಗಳ ಗಡಿ ದಾಟಿತು.

RCB vs GT IPL 2026 Highlights: ಗುಜರಾತ್ ವಿರುದ್ಧ ಆರ್​​ಸಿಬಿಗೆ ಸುಲಭ ಜಯ

ಕೊಹ್ಲಿ- ಪಡಿಕ್ಕಲ್ ಅರ್ಧಶತಕ

ಪಡಿಕ್ಕಲ್ 20 ಎಸೆತಗಳಲ್ಲಿ ಆರು ಸಿಕ್ಸರ್‌ಗಳ ಮೂಲಕ ಅರ್ಧಶತಕ ಪೂರೈಸಿದರೆ, ವಿರಾಟ್ ಕೊಹ್ಲಿ ಅರ್ಧಶತಕ ಪೂರೈಸಲು 30 ಎಸೆತಗಳನ್ನು ತೆಗೆದುಕೊಂಡರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳು 47 ಎಸೆತಗಳಲ್ಲಿ ಶತಕದ ಜೊತೆಯಾಟ ನಡೆಸಿ ಗುಜರಾತ್ ತಂಡವನ್ನು ಪಂದ್ಯದಿಂದ ಹೊರದಬ್ಬಿದರು. ಆದಾಗ್ಯೂ, ವಿರಾಟ್ ಕೊಹ್ಲಿ ಶತಕ ಗಳಿಸುವ ಅವಕಾಶವನ್ನು ಕಳೆದುಕೊಂಡರಾದರೂ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಕೊನೆಯಲ್ಲಿ ಕೃನಾಲ್ ಪಾಂಡ್ಯ ಅಜೇಯ 23 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 pm, Fri, 24 April 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!