AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ ಎಷ್ಟು ಪಂದ್ಯಗಳನ್ನಾಡಿದೆ? ತವರಿನಲ್ಲಿ ದಾಖಲೆ ಹೇಗಿದೆ?

RCB Chinnaswamy Records: ಆರ್​ಸಿಬಿ ತಂಡದ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಪ್ರದರ್ಶನವನ್ನು ಈ ಲೇಖನ ವಿವರಿಸುತ್ತದೆ. 96 ಪಂದ್ಯಗಳಲ್ಲಿ 45 ಗೆಲುವು, 46 ಸೋಲು ಕಂಡಿರುವ ಆರ್​ಸಿಬಿಯ ಮಿಶ್ರ ದಾಖಲೆಯನ್ನು ನೋಡಬಹುದು. ಅತಿ ಹೆಚ್ಚು ರನ್ (ವಿರಾಟ್ ಕೊಹ್ಲಿ), ವೈಯಕ್ತಿಕ ಗರಿಷ್ಠ ಸ್ಕೋರ್ (ಕ್ರಿಸ್ ಗೇಲ್) ಮತ್ತು ಅತಿ ಹೆಚ್ಚು ವಿಕೆಟ್ (ಯುಜ್ವೇಂದ್ರ ಚಾಹಲ್) ಸೇರಿದಂತೆ ಪ್ರಮುಖ ದಾಖಲೆಗಳನ್ನು ಒಳಗೊಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಹೋರಾಟಕ್ಕೆ ಸಿದ್ಧವಾಗಿರುವ ಆರ್​ಸಿಬಿಯ ಐತಿಹಾಸಿಕ ಪ್ರದರ್ಶನವನ್ನು ಇದು ತೋರಿಸುತ್ತದೆ.

IPL 2026: ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ ಎಷ್ಟು ಪಂದ್ಯಗಳನ್ನಾಡಿದೆ? ತವರಿನಲ್ಲಿ ದಾಖಲೆ ಹೇಗಿದೆ?
Rcb
ಪೃಥ್ವಿಶಂಕರ
|

Updated on: Mar 27, 2026 | 5:32 PM

Share

2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದ ಆರ್​ಸಿಬಿ (RCB) ಇದೀಗ ಎಲ್ಲವನ್ನು ಇತ್ಯರ್ಥ ಮಾಡಿಕೊಂಡು, ಹೊಸ ಆವೃತ್ತಿಯಲ್ಲಿ ಕಣಕ್ಕಿಳಿಯಲು ಮುಂದಾಗಿದೆ. ಇದರ ಜೊತೆಗೆ ಆರ್​ಸಿಬಿ ತವರಿನಲ್ಲಿ ತನ್ನ ಪಂದ್ಯಗಳನ್ನು ಆಡುತ್ತಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ತವರಿನಲ್ಲಿ ಅಭಿಮಾನಿಗಳ ಮುಂದೆ 19ನೇ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಲು ನೋಡುತ್ತಿರುವ ಆರ್​ಸಿಬಿಗೆ, ಸನ್‌ರೈಸರ್ಸ್ ಹೈದರಾಬಾದ್‌ ಎದುರಾಗುತ್ತಿದೆ. ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರವ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಬೇಕೆಂದರೆ ಆರ್​ಸಿಬಿ ತನ್ನ ಬಲಿಷ್ಠ ಪ್ಲೇಯಿಂಗ್ 11 ಕಟ್ಟಿಕೊಂಡು ಸಾಂಘಿಕ ಪ್ರದರ್ಶನ ನೀಡಬೇಕಿದೆ. ಆದರೆ ಅದಕ್ಕೂ ಮುನ್ನ ತವರು ಮೈದಾನದಲ್ಲಿ ಆರ್​ಸಿಬಿ ದಾಖಲೆ ಹೇಗಿದೆ ಎಂಬುದನ್ನು ನೋಡೋಣ..

  • ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಮೈದಾನದಲ್ಲಿ ಅಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ 96 ಪಂದ್ಯಗಳನ್ನು ಅಡಿದೆ. ಇದರಲ್ಲಿ 45 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ, 46 ಪಂದ್ಯಗಳಲ್ಲಿ ಸೋಲು ಕಂಡಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡರೆ, ಉಳಿದ 4 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.
  • ಈ ಮೈದಾನದಲ್ಲಿ ಆರ್​ಸಿಬಿಯ ಅತ್ಯಧಿಕ ಸ್ಕೋರ್ ಎಷ್ಟು ಎಂಬುದನ್ನು ನೋಡುವುದಾದರೆ.. 2013 ರ ಐಪಿಎಲ್​ನಲ್ಲಿ ಪುಣೆ ವಾರಿಯರ್ಸ್​ ವಿರುದ್ಧ 5 ವಿಕೆಟ್​ಗಳ ನಷ್ಟಕ್ಕೆ 263 ರನ್ ಕಲೆಹಾಕಿತ್ತು.
  • ಹಾಗೆಯೇ 2008 ರ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ 82 ರನ್​ಗಳಿಗೆ ಆಲೌಟ್ ಆಗಿದ್ದು ತಂಡದ ಅತ್ಯಂತ ಕಡಿಮೆ ಮೊತ್ತವಾಗಿದೆ.
  • ಈ ಮೈದಾನದಲ್ಲಿ ಅಜೇಯ 175 ರನ್​ಗಳ ಇನ್ನಿಂಗ್ಸ್ ಆಡಿರುವ ಕ್ರಿಸ್ ಗೇಲ್ ಅತ್ಯಧಿಕ ವೈಯಕ್ತಿಕ ಮೊತ್ತ ಕಲೆಹಾಕಿದ ದಾಖಲೆ ಮಾಡಿದ್ದಾರೆ.
  • 2017 ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ರನ್​ಗಳಿಗೆ 4 ವಿಕೆಟ್ ಉರುಳಿಸಿದ್ದ ಸ್ಯಾಮ್ಯುಯೆಲ್ ಬದ್ರಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ದಾಖಲೆ ಹೊಂದಿದ್ದಾರೆ.
  • 40.03 ರ ಸರಾಸರಿಯಲ್ಲಿ 3202 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ ಈ ಮೈದಾನದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿರುವ ದಾಖಲೆ ಮಾಡಿದ್ದಾರೆ.
  • ಹಾಗೆಯೇ 41 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಅತಿ ಹೆಚ್ಚು ಕ್ಯಾಚ್ ಹಿಡಿದ ದಾಖಲೆಯಲ್ಲೂ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
  • ಈ ಮೈದಾನದಲ್ಲಿ ಆಡಿರುವ 43 ಪಂದ್ಯಗಳಲ್ಲಿ 54 ವಿಕೆಟ್ ಪಡೆದಿರುವ ಯುಜ್ವೇಂದ್ರ ಚಾಹಲ್ ಅತ್ಯಧಿಕ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
  • 2016 ರ ಐಪಿಎಲ್‌ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ವಿರಾಟ್ ಕೊಹ್ಲಿ ಹಾಗೂ ಅಬಿ ಡಿವಿಲಿಯರ್ಸ್ 229 ರನ್​ಗಳ ಜೊತೆಯಾಟವನ್ನಾಡಿರುವುದು ಇದುವರೆಗಿನ ದಾಖಲೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!