IPL 2022 Points Table: ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್​ಸಿಬಿ ಗೆಲುವು: ಇಲ್ಲಿದೆ ನೂತನ ಅಂಕಪಟ್ಟಿ

IPL 2022 Orange Cap and Purple Cap: ಐಪಿಎಲ್ 2022 ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂನೇ ಸ್ಥಾನಕ್ಕೆ ಜಿಗಿದಿದೆ.

IPL 2022 Points Table: ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್​ಸಿಬಿ ಗೆಲುವು: ಇಲ್ಲಿದೆ ನೂತನ ಅಂಕಪಟ್ಟಿ
IPL 2022 Updated Points Table
Follow us
TV9 Web
| Updated By: Vinay Bhat

Updated on: Apr 17, 2022 | 11:06 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಸತತ ನಾಲ್ಕು ಸೋಲಿನ ಬಳಿಕ ಗೆಲುವು ಕಂಡಿದ್ದರೆ ಇತ್ತ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ಆರೂ ಪಂದ್ಯಗಳಲ್ಲಿಯು ಸೋಲುಂಡು ಕೆಟ್ಟ ದಾಖಲೆ ಬರೆದಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ರಾಜಸ್ಥಾನ್ ವಿರುದ್ಧದ ಗೆಲುವಿನ ಬಳಿಕ ಆಡಿದ ಐದು ಪಂದ್ಯದಲ್ಲಿ ಒಂದರಲ್ಲಿ ಸೋಲು ನಾಲ್ಕರಲ್ಲಿ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.450.
  • ಐದನೇ ಸ್ಥಾನದಲ್ಲಿದ್ದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಮುಂಬೈ ವಿರುದ್ಧದ ಗೆಲುವಿನ ಬಳಿಕ ಇದೀಗ ಎರಡನೇ ಸ್ಥಾನಕ್ಕೇರಿದೆ. ಒಟ್ಟು 8 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.296.
  • ಇತ್ತ ಆರನೇ ಸ್ಥಾನದಲ್ಲಿದ್ದ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂನೇ ಸ್ಥಾನಕ್ಕೆ ಜಿಗಿದಿದೆ. ಎಂಟು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.142 ಆಗಿದೆ.
  • ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಐದು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 6 ಅಂಕದೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಆರ್​ಆರ್​ +0.389 ರನ್​​ರೇಟ್ ಹೊಂದಿದೆ.
  • ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಐದನೇ ಸ್ಥಾನದಲ್ಲಿದೆ. 6 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ 0.239 ಆಗಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಮೂರರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.223 ರನ್​​ರೇಟ್​ನೊಂದಿಗೆ 4ನೇ ಸ್ಥಾನದಲ್ಲಿದೆ.
  • ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಆಡಿದ ಐದು ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿದ್ದು 6 ಅಂಕ ಸಂಪಾದಿಸಿ ಏಳನೇ ಸ್ಥಾನದಲ್ಲಿದೆ. ಹೈದರಾಬಾದ್ ನಿವ್ವಳ ರನ್ ರೇಟ್ -0.196.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ 0.219 ಆಗಿದೆ.
  • ಇತ್ತ ಆಡಿದ ನಾಲ್ಕು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಪೈಕಿ 4 ರಲ್ಲಿ ಸೋಲು ಒಂದರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಅಂಕದೊಂದಿಗೆ -0.745 ರನ್​ರೇಟ್​​ನೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಆರೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.048.

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ಇದ್ದು ಇವರು ಐದು ಪಂದ್ಯಗಳಿಂದ 272 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಎರಡನೇ ಸ್ಥಾನಕ್ಕೆ ದಿಢೀರ್ ಆಗಿ ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಜಿಗಿದಿದ್ದಾರೆ. ಶತಕದ ಮೂಲಕ ಇವರು 235 ರನ್ ಸಿಡಿಸಿದ್ದಾರೆ. ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದು ಇವರು ಐದು ಪಂದ್ಯಗಳಿಂದ 228 ರನ್ ಸಿಡಿಸಿದ್ದಾರೆ. ಕ್ವಿಂಟನ್ ಡಿಕಾಕ್ 212 ರನ್​ಗಳೊಂದಿಗೆ 4ನೇ ಸ್ಥಾನಕ್ಕೇರಿದ್ದಾರೆ. ಸಿಎಸ್​ಕೆ ತಂಡದ ಶಿವಂ ದುಬೆ ಐದನೇ ಸ್ಥಾನದಲ್ಲಿದ್ದು, 5 ಪಂದ್ಯಗಳಲ್ಲಿ 207 ರನ್ ಗಳಿಸಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ ಐದು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 12 ವಿಕೆಟ್ ಕಬಳಿಸಿದ್ದಾರೆ. ಕುಲ್ದೀಪ್ ಯಾದವ್ ಎರಡನೇ ಸ್ಥಾನಕ್ಕೇರಿದ್ದು 5 ಪಂದ್ಯಗಳಿಂದ 11 ವಿಕೆಟ್ ಕಿತ್ತಿದ್ದಾರೆ. ಆವೇಶ್ ಖಾನ್ ಕೂಡ 11 ವಿಕೆಟ್​ನೊಂದಿಗೆ ಮೂರನೇ ಸ್ಥಾನ, ವನಿಂದು ಹಸರಂಗ ಕೂಡ 11 ವಿಕೆಟ್​ನೊಂದಿಗೆ 4ನೇ ಸ್ಥಾನ ಹಾಗೂ ಹೈದರಾಬಾದ್ ತಂಡದ ಟಿ. ನಟರಾಜನ್ 5 ಪಂದ್ಯಗಳಿಂದ 11 ವಿಕೆಟ್ ಪಡೆದುಕೊಂಡು ಐದನೇ ಸ್ಥಾನದಲ್ಲಿದ್ದಾರೆ.

Faf Duplessis: ಪಂದ್ಯ ಮುಗಿದ ಬಳಿಕ ಕಾರ್ತಿಕ್ ಬಗ್ಗೆ ಆರ್​ಸಿಬಿ ನಾಯಕ ಡುಪ್ಲೆಸಿಸ್ ಆಡಿದ ಮಾತು ಕೇಳಿ

GT vs CSK: ಐಪಿಎಲ್​​ನಲ್ಲಿಂದು ಎರಡು ಪಂದ್ಯ: ರೋಚಕತೆ ಸೃಷ್ಟಿಸಿದೆ ಗುಜರಾತ್-ಚೆನ್ನೈ ಕಾದಾಟ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ