
ಐಪಿಎಲ್ 2025 ರ (IPL 2025) 52 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ಮುಖಾಮುಖಿಯಾಗಿವೆ. ಈ ಸೀಸನ್‌ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಎರಡನೇ ಬಾರಿ. ಮೊದಲ ಸಲ ಚೆನ್ನೈನಲ್ಲಿ ಸಿಎಸ್ಕೆ ತಂಡವನ್ನು ಎದುರಿಸಿದ್ದ ಆರ್‌ಸಿಬಿ 50 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಬಾರಿ ಪಂದ್ಯ ಬೆಂಗಳೂರಿನ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವನ್ನು ಗೆದ್ದರೆ ಆರ್‌ಸಿಬಿ ಅಧಿಕೃತವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆಯಲಿದೆ. ಇತ್ತ ಸಿಎಸ್ಕೆ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಈ ಪಂದ್ಯ ಅವರಿಗೆ ಕೇವಲ ಔಪಚಾರಿಕವಾಗಿದೆ.
ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ತಂಡದ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಿದ್ದಾರೆ. ಇತ್ತ ಟಾಸ್ ಸೋತ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ರಜತ್ ಪಾಟಿದರ್ ನಮಗೆ 4 ಪಂದ್ಯಗಳಿದ್ದು, ಎಲ್ಲಾ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇವೆ ಎಂದರು. ಇದಾದ ಬಳಿಕ ಆಡುವ ಹನ್ನೊಂದರ ಬಳಗದ ಬಗ್ಗೆ ಮಾಹಿತಿ ನೀಡಿದ ರಜತ್, ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದು, ವೇಗಿ ಜೋಸ್ ಹೇಜಲ್ವುಡ್ ಬದಲಿಗೆ ಲುಂಗಿ ಎನ್‌ಗಿಡಿ ಅವರನ್ನು ಆಡಿಸಲಾಗುತ್ತಿದೆ. ಎಂದರು.
𝗠𝗦𝗗 𝗿𝗲𝗰𝗲𝗶𝘃𝗲𝘀 𝗹𝗼𝘂𝗱 𝗰𝗵𝗲𝗲𝗿𝘀 𝗳𝗼𝗿 𝘄𝗵𝗮𝘁 𝗰𝗼𝘂𝗹𝗱 𝗯𝗲 𝗵𝗶𝘀 𝗹𝗮𝘀𝘁 𝗴𝗮𝗺𝗲 𝗮𝘁 𝗖𝗵𝗶𝗻𝗻𝗮𝘀𝘄𝗮𝗺𝘆 🥹
No changes in Chennai's camp
RCB replace 𝗟𝘂𝗻𝗴𝗶 𝘄𝗶𝘁𝗵 𝗛𝗼𝗳𝗳 🤝 #RCBvCSK #IPL2025pic.twitter.com/GQgXiRDzkj
— CREX (@Crex_live) May 3, 2025
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಳ್.
ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಾಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಖ್ ದಾರ್ ಸಲಾಂ, ಮನೋಜ್ ಭಾಂಡಗೆ, ಸ್ವಪ್ನಿಲ್ ಸಿಂಗ್.
ಚೆನ್ನೈ ಸೂಪರ್ ಕಿಂಗ್ಸ್: ಶೇಖ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕರನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ದೀಪಕ್ ಹೂಡಾ, ಎಂಎಸ್ ಧೋನಿ (ವಿಕೆಟ್ ಕೀಪರ್/ ನಾಯಕ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಾಂಬೋಜ್, ಮತಿಶಾ ಪತಿರಾನ.
ಇಂಪ್ಯಾಕ್ಟ್ ಪ್ಲೇಯರ್ಸ್: ಶಿವಂ ದುಬೆ, ರವಿಚಂದ್ರನ್ ಅಶ್ವಿನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್, ಜೇಮಿ ಓವರ್ಟನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:25 pm, Sat, 3 May 25