AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಗದ್ದುಗೆ ಏರಿದ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ

RCB Beats Delhi Capitals: ದೆಹಲಿಯ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡವು 162 ರನ್ ಗಳಿಸಿದರೆ, ಆರ್‌ಸಿಬಿ ತಂಡವು 9 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

IPL 2025: ಡೆಲ್ಲಿ ಗದ್ದುಗೆ ಏರಿದ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ
Rcb
ಪೃಥ್ವಿಶಂಕರ
|

Updated on:Apr 27, 2025 | 11:41 PM

Share

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವಿನ ಹೈವೋಲ್ಟೇಜ್ ಕದನಲ್ಲಿ ರಜತ್ ಪಡೆ ಡೆಲ್ಲಿ ತಂಡವನ್ನು ಅವರ ನೆಲದಲ್ಲೇ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಆರ್​ಸಿಬಿ ಬೌಲರ್​ಗಳ ಕರಾರುವಕ್ಕಾದ ದಾಳಿಯ ಮುಂದೆ ಮುಕ್ತವಾಗಿ ಬ್ಯಾಟಿಂಗ್‌ ಮಾಡಲು ಸಾಧ್ಯವಾಗದೆ 20 ಓವರ್​ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ (RCB) ಕೇವಲ 4 ವಿಕೆಟ್ ಕಳೆದುಕೊಂಡು ಇನ್ನು 9 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಈ ಗೆಲುವಿನೊಂದಿಗೆ ಆರ್​ಸಿಬಿ,  ಡೆಲ್ಲಿ ವಿರುದ್ಧ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಂಡಿದಲ್ಲದೆ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿತು. ಆರ್​ಸಿಬಿ ಈಗ 10 ಪಂದ್ಯಗಳಿಂದ 14 ಅಂಕಗಳನ್ನು ಗಳಿಸಿದ್ದು, ಪ್ಲೇಆಫ್ ಅರ್ಹತೆಗೆ ಬಹಳ ಹತ್ತಿರದಲ್ಲಿದೆ.

ಏಪ್ರಿಲ್ 27, ಭಾನುವಾರ ಸಂಜೆ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದೆಹಲಿ ಮತ್ತು ಕೆಎಲ್ ರಾಹುಲ್ ಮಾಡಿದ ಮ್ಯಾಜಿಕ್ ಅನ್ನು ವಿರಾಟ್ ಕೊಹ್ಲಿ ಮತ್ತು ಬೆಂಗಳೂರು ತಂಡ ಮಾಡಲು ಸಾಧ್ಯವಾಗುತ್ತದೆಯೇ ಎಂಬುದರ ಮೇಲೆ ಎಲ್ಲರ ದೃಷ್ಟಿ ನೆಟ್ಟಿತ್ತು. ಎಲ್ಲರ ನಿರೀಕ್ಷೆಯಂತೆ ಕೊಹ್ಲಿ ಮತ್ತು ಆರ್​ಸಿಬಿ ತಂಡ ಅದನ್ನೇ ಮಾಡಿತು. ಒಂದೇ ವ್ಯತ್ಯಾಸವೆಂದರೆ ಕೊಹ್ಲಿ ಬದಲಿಗೆ ಕೃನಾಲ್, ರಾಹುಲ್ ಪಾತ್ರವನ್ನು ನಿರ್ವಹಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಕೊಹ್ಲಿ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿದರು.

ಭುವಿ ಮ್ಯಾಜಿಕ್ ದೆಹಲಿಯ ದಿಗ್ಗಜರು ವಿಫಲ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಪರ ಅಭಿಷೇಕ್ ಪೊರೆಲ್ ಅವರಿಗೆ ತ್ವರಿತ ಆರಂಭ ನೀಡಿದರು ಆದರೆ ಜೋಶ್ ಹೇಜಲ್‌ವುಡ್ ನಾಲ್ಕನೇ ಓವರ್‌ನಲ್ಲಿ ಅವರನ್ನು ಔಟ್ ಮಾಡುವ ಮೂಲಕ ಡೆಲ್ಲಿಗೆ ಮೊದಲ ಹೊಡೆತ ನೀಡಿದರು. ಮುಂದಿನ ಓವರ್‌ನಲ್ಲಿಯೇ ಕರುಣ್ ನಾಯರ್ ಅವರನ್ನು ಯಶ್ ದಯಾಳ್ ಔಟ್ ಮಾಡಿದರು. ಇಲ್ಲಿಂದ ಮುಂದೆ ಡೆಲ್ಲಿ ವೇಗ ಪಡೆಯಲು ಕಷ್ಟಪಡಬೇಕಾಯಿತು. ಫಾಫ್ ಡು ಪ್ಲೆಸಿಸ್ ಕೂಡ ಬೇಗ ಪೆವಿಲಿಯನ್ ಸೇರಿಕೊಂಡರು. ಕೆಎಲ್ ರಾಹುಲ್ ದೀರ್ಘಕಾಲ ಆಟವಾಡಿದರೂ ವೇಗವಾಗಿ ರನ್ ಗಳಿಸಲು ಸಾಧ್ಯವಾಗಲಿಲ್ಲ.

ಕೃನಾಲ್ ಪಾಂಡ್ಯ ಡು ಪ್ಲೆಸಿಸ್ ವಿಕೆಟ್ ಪಡೆದರೆ, ಹೇಜಲ್‌ವುಡ್ ಡೆಲ್ಲಿ ನಾಯಕ ಅಕ್ಷರ್ ಅವರನ್ನು ಔಟ್ ಮಾಡಿದರು. ನಂತರ 17ನೇ ಓವರ್‌ನಲ್ಲಿ ಭುವನೇಶ್ವರ್ ಕುಮಾರ್ ಡೆಲ್ಲಿಗೆ ದೊಡ್ಡ ಹೊಡೆತಗಳನ್ನು ನೀಡಿದರು. ಮೊದಲು ಅವರು ಕೆಎಲ್ ರಾಹುಲ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರೆ, ನಂತರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಅಶುತೋಷ್ ಶರ್ಮಾ ಅವರನ್ನು ಔಟ್ ಮಾಡಿದರು. ಆದಾಗ್ಯೂ, ಕೊನೆಯಲ್ಲಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ವಿಪ್ರಾಜ್ ನಿಗಮ್ ಕೊನೆಯ 3 ಓವರ್‌ಗಳಲ್ಲಿ 40 ರನ್‌ಗಳನ್ನು ತ್ವರಿತವಾಗಿ ಸೇರಿಸುವ ಮೂಲಕ ತಂಡವನ್ನು ಪಂದ್ಯಕ್ಕೆ ಯೋಗ್ಯವಾದ ಸ್ಕೋರ್ 162ಕ್ಕೆ ಕೊಂಡೊಯ್ದರು. ಬೆಂಗಳೂರು ಪರ ಭುವನೇಶ್ವರ್ ಗರಿಷ್ಠ 3 ವಿಕೆಟ್‌ಗಳನ್ನು ಪಡೆದರು.

ಆರ್​ಸಿಬಿಗೆ ಆರಂಭಿಕ ಆಘಾತ

ಈ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ಹೊಸ ಆರಂಭಿಕ ಆಟಗಾರ ಜಾಕೋಬ್ ಬೆಥೆಲ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಆದರೆ ಮೂರನೇ ಓವರ್‌ನಲ್ಲಿಯೇ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಅದೇ ಓವರ್‌ನಲ್ಲಿ, ಹೊಸ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ ಕೂಡ ಖಾತೆ ತೆರೆಯದೆ ಹಿಂತಿರುಗಿದರು. ನಾಲ್ಕನೇ ಓವರ್‌ನಲ್ಲಿ ನಾಯಕ ರಜತ್ ಪಾಟಿದಾರ್ ರನೌಟ್ ಆದರು. ಹೀಗಾಗಿ ಬೆಂಗಳೂರು ತಂಡ ಕೇವಲ 26 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಜೊತೆಯಾದ ಕೃನಾಲ್ ಪಾಂಡ್ಯ ವಿರಾಟ್ ಕೊಹ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು.

IPL 2025: ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್ ಸಂಭ್ರಮ ನೋಡಿ

ಕೊಹ್ಲಿ- ಕೃನಾಲ್ ಸೂಪರ್ ಬ್ಯಾಟಿಂಗ್

ಇಬ್ಬರೂ ಸಮಯೋಜಿತ ಬ್ಯಾಟಿಂಗ್ ಮಾಡಿ 14 ನೇ ಓವರ್‌ನಲ್ಲಿ ತಂಡವನ್ನು 100 ರನ್‌ಗಳ ಗಡಿ ದಾಟಿಸಿದರು. ಇಲ್ಲಿಂದ ಆಕ್ರಮಣಕಾರಿ ಆಟ ಆರಂಭಿಸಿದ ಕೃನಾಲ್, 9 ವರ್ಷಗಳ ನಂತರ ಐಪಿಎಲ್‌ನಲ್ಲಿ ಎರಡನೇ ಅರ್ಧಶತಕ ಪೂರ್ಣಗೊಳಿಸಿದರು. ಶೀಘ್ರದಲ್ಲೇ ಕೊಹ್ಲಿ ಕೂಡ ಈ ಸೀಸನ್​ನ ಆರನೇ ಅರ್ಧಶತಕವನ್ನು ಕಲೆಹಾಕಿದರು. ಇವರಿಬ್ಬರ ನಡುವೆ 84 ಎಸೆತಗಳಲ್ಲಿ 119 ರನ್‌ಗಳ ಪಂದ್ಯ ಗೆಲ್ಲುವ ಪಾಲುದಾರಿಕೆ ಇತ್ತು. ಆದರೆ 18ನೇ ಓವರ್‌ನಲ್ಲಿ ಕೊಹ್ಲಿ ಔಟಾದ ಕಾರಣ, ಇದು ಡೆಲ್ಲಿ ತಂಡದ ಗೆಲುವಿನ ಭರವಸೆಯನ್ನು ಹೆಚ್ಚಿಸಿತು. ಆದರೆ ಹೊಸ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ ಮುಂದಿನ 5 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿ 18.3 ಓವರ್‌ಗಳಲ್ಲಿ ಪಂದ್ಯವನ್ನು ಕೊನೆಗೊಳಿಸಿದರು. ಕೃನಾಲ್ 47 ಎಸೆತಗಳಲ್ಲಿ 73 ರನ್ ಗಳಿಸಿ ಸ್ಮರಣೀಯ ಇನ್ನಿಂಗ್ಸ್ ಆಡಿದ ನಂತರ ಅಜೇಯರಾಗಿ ಮರಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 pm, Sun, 27 April 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ