AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR: ಸೋತರೂ ಪಾಯಿಂಟ್ಸ್ ಟೇಬಲ್​ನಲ್ಲಿ ಕುಸಿಯದ ಆರ್​ಸಿಬಿ: ಕೊಹ್ಲಿ ಕೈಗೆ ಬಂತು ಆರೆಂಜ್ ಕ್ಯಾಪ್

IPL 2024 Points Table: ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನದಲ್ಲೇ ಉಳಿದಿದೆ. ಆಡಿದ 3 ಪಂದ್ಯದಲ್ಲಿ ಎರಡು ಸೋಲು, ಒಂದು ಜಯ ಕಂಡು 2 ಅಂಕ ಪಡೆದು ಕೊಂಡಿದೆ. ಇವರ ನೆಟ್​ ರನ್​ರೇಟ್ -0.711 ಆಗಿದೆ. ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ, ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

RCB vs KKR: ಸೋತರೂ ಪಾಯಿಂಟ್ಸ್ ಟೇಬಲ್​ನಲ್ಲಿ ಕುಸಿಯದ ಆರ್​ಸಿಬಿ: ಕೊಹ್ಲಿ ಕೈಗೆ ಬಂತು ಆರೆಂಜ್ ಕ್ಯಾಪ್
Virat Kohli and IPL Points Table
Vinay Bhat
|

Updated on: Mar 30, 2024 | 7:04 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಟೂರ್ನಿ ಆರಂಭವಾಗಿ ಒಂದು ವಾರ ಕಳೆದಿದ್ದು, ಈವರೆಗೆ ಒಟ್ಟು ಹತ್ತು ಪಂದ್ಯಗಳು ನಡೆದಿವೆ. ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಆರ್​ಸಿಬಿ ಬೌಲಿಂಗ್​ನಲ್ಲಿ ಮತ್ತೊಮ್ಮೆ ಸಂಪೂರ್ಣ ವಿಫಲವಾಯಿತು. ಬ್ಯಾಟಿಂಗ್​ನಲ್ಲಿ ಕೊಹ್ಲಿ ಬಿಟ್ಟರೆ ಮತ್ಯಾರು ಮಿಂಚಲಿಲ್ಲ. ಇಂದು ಐಪಿಎಲ್​ನಲ್ಲಿ ಲಖನೌ ಸೂಪರ್ ಜೇಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಲಖನೌದಲ್ಲಿ ಹೈವೋಲ್ಟೇಜ್ ಪಂದ್ಯ ಆಯೋಜಿಸಲಾಗಿದೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

  1. ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಇವರು ಆಡಿರುವ ಎರಡು ಪಂದ್ಯಗಳ ಪೈಕಿ ಎರಡರಲ್ಲೂ ಜಯ ಸಾಧಿಸಿ ನಾಲ್ಕು ಅಂಕ ಪಡೆದು +1.979 ರನ್​ರೇಟ್ ಹೊಂದಿದೆ.
  2. ಆರ್​ಸಿಬಿ ವಿರುದ್ಧ ಗೆದ್ದು ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ 4 ಪಾಯಿಂಟ್ಸ್ ಪಡೆದಿದೆ. ಇವರ ನೆಟ್​ ರನ್​ರೇಟ್ +1.047 ಆಗಿದೆ.
  3. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಜಯ ಸಾಧಿಸಿ ನಾಲ್ಕು ಅಂಕ ಪಡೆದು +0.800 ರನ್​ರೇಟ್ ಹೊಂದಿದೆ.
  4. ಇನ್ನು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಸೋಲು- ಒಂದು ಜಯ ಕಂಡು 2 ಪಾಯಿಂಟ್ಸ್ ಪಡೆದು ನಾಲ್ಕನೇ ಸ್ಥಾನಕ್ಕೇರಿದೆ. ಇವರ ನೆಟ್​ ರನ್​ರೇಟ್ +0.675 ಆಗಿದೆ.
  5. ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಆಡಿದ ಎರಡು ಪಂದ್ಯದಲ್ಲಿ ಒಂದು ಜಯ, ಒಂದು ಸೋಲು ಕಂಡು 2 ಪಾಯಿಂಟ್ಸ್ ಪಡೆದು ಐದನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.025 ಆಗಿದೆ.
  6. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನದಲ್ಲೇ ಉಳಿದಿದೆ. ಆಡಿದ 3 ಪಂದ್ಯದಲ್ಲಿ ಎರಡು ಸೋಲು, ಒಂದು ಜಯ ಕಂಡು 2 ಅಂಕ ಪಡೆದು ಕೊಂಡಿದೆ. ಇವರ ನೆಟ್​ ರನ್​ರೇಟ್ -0.711 ಆಗಿದೆ.
  7. ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಜಯ-ಮತ್ತೊಂದರಲ್ಲಿ ಸೋಲು ಕಂಡು 2 ಪಾಯಿಂಟ್ಸ್ ಪಡೆದು ಏಳನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -1.425 ಆಗಿದೆ.
  8. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಎಂಟನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.528 ಆಗಿದೆ.
  9. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಆಡಿದ ಎರಡೂ ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಒಂಬತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.925 ಆಗಿದೆ.
  10. ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಖಾತೆ ತೆರೆಯದೆ ಹತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -1.000 ಆಗಿದೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ, ಆರ್​ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಒಟ್ಟು 181 ರನ್ ಗಳಿಸಿದ್ದಾರೆ. ಹೈದರಾಬಾದ್ ತಂಡದ ಹೆನ್ರಿಚ್ ಕ್ಲಾಸೆನ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಎರಡು ಪಂದ್ಯಗಳಲ್ಲಿ 143 ರನ್ ಕಲೆಹಾಕಿದ್ದಾರೆ. ರಾಜಸ್ಥಾನ್ ತಂಡದ ರಿಯಾನ್ ಪರಾಗ್ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಇವರು ಆಡಿರುವ ಎರಡು ಪಂದ್ಯಗಳಿಂದ 127 ರನ್ ಸಿಡಿಸಿದ್ದಾರೆ.

ಪರ್ಪಲ್-ಕ್ಯಾಪ್ ಪಟ್ಟಿಯಲ್ಲಿ, ಸಿಎಸ್​ಕೆ ತಂಡದ ಮುಸ್ತಫಿಜುರ್ ರೆಹಮಾನ್ ಒಟ್ಟು 6 ವಿಕೆಟ್ ಪಡೆದು ಅಗ್ರ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ. ಅವರ ಹಿಂದೆ ಕೋಲ್ಕತ್ತಾ ತಂಡದ ಹರ್ಷಿತ್ ರಾಣ ಇದ್ದು, ಇವರು ಆಡಿರುವ ಎರಡು ಪಂದ್ಯಗಳಿಂದ 5 ವಿಕೆಟ್ ಪಡೆದಿದ್ದಾರೆ. ಆಂಡ್ರೆ ರಸೆಲ್ ಮೂರನೇ ಸ್ಥಾನದಲ್ಲಿದ್ದು, ಇವರು 4 ವಿಕೆಟ್ ಕಿತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್