IPL Points Table 2023: ಆರ್​ಸಿಬಿಗೆ ಶಾಕ್: ಪಾಯಿಂಟ್ ಟೇಬಲ್​ನಲ್ಲಿ ದಿಢೀರ್ ಕುಸಿತ ಕಂಡ ಫಾಫ್ ಪಡೆ

IPL 2023 Orange-Purple Cap: ಇಂದು ಮುಂಬೈ ಇಂಡಿಯನ್ಸ್ ಮತ್ತು ಆರ್​ಸಿಬಿ ಸೆಣೆಸಾಟ ನಡೆಸಲಿದೆ. ಸದ್ಯ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL Points Table 2023: ಆರ್​ಸಿಬಿಗೆ ಶಾಕ್: ಪಾಯಿಂಟ್ ಟೇಬಲ್​ನಲ್ಲಿ ದಿಢೀರ್ ಕುಸಿತ ಕಂಡ ಫಾಫ್ ಪಡೆ
RCB and KKR
Follow us
Vinay Bhat
|

Updated on: May 09, 2023 | 9:40 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 53 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಸುಲಭವಾಗಿ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಹೆಚ್ಚಾಗುತ್ತಿವೆ. ಅಲ್ಲದೆ 20ನೇ ಓವರ್​ನ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸುತ್ತಿರುವುದು ಕಂಡು ಬರುತ್ತಿದೆ. ಹೀಗೆ ಅನೇಕ ರೋಚಕ ಕಾದಾಟಕ್ಕೆಎ ಈ ಬಾರಿಯ ಐಪಿಎಲ್ ಸಾಕ್ಷಿಯಾಗುತ್ತಿದೆ. ಸೋಮವಾರ ನಡೆದ ಕೆಕೆಆರ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಮುಖಾಮುಖಿಯಲ್ಲಿ ಕೂಡ ಕೋಲ್ಕತ್ತಾ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿ ರೋಚಕ ಜಯ ಕಂಡಿತು. ಇಂದು ಮುಂಬೈ ಇಂಡಿಯನ್ಸ್ ಮತ್ತು ಆರ್​ಸಿಬಿ (MI vs RCB) ಸೆಣೆಸಾಟ ನಡೆಸಲಿದೆ. ಸದ್ಯ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಪ್ರದರ್ಶನ ತೋರಿ ಅಗ್ರಸ್ಥಾನದಲ್ಲಿ ಭದ್ರವಾಗಿದ್ದು ಪ್ಲೇ ಆಫ್​ಗೆ ಬಹುತೇಕ ಕಾಲಿಟ್ಟಿದೆ. ಆಡಿದ 11 ಪಂದ್ಯಗಳಲ್ಲಿ ಎಂಟು ಗೆಲುವು, ಮೂರು ಸೋಲುಂಡು +0.951 ರನ್​ರೇಟ್​ನೊಂದಿಗೆ 16 ಅಂಕ ಸಂಪಾದಿಸಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು ಒಟ್ಟು 13 ಅಂಕ ಸಂಪಾದಿಸಿದೆ. +0.409 ರನ್​ರೇಟ್ ಹೊಂದಿದೆ.
  • ಲಖನೌ ಸೂಪರ್ ಜೇಂಟ್ಸ್ ತಂಡ ತೃತೀಯ ಸ್ಥಾನದಲ್ಲಿದೆ. ಆಡಿದ ಹನ್ನೊಂದು ಪಂದ್ಯಗಳಲ್ಲಿ ಐದು ಗೆಲುವು, ಐದು ಸೋಲು ಕಂಡು 11 ಅಂಕ ಸಂಪಾದಿಸಿ +0.294 ರನ್​ರೇಟ್​ ಹೊಂದಿದೆ.
  • ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರು ಸೋಲುಂಡು +0.388ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ಎಂಟನೇ ಸ್ಥಾನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐದನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರರಲ್ಲಿ ಸೋಲುಂಡು -0.079 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ಕೆಕೆಆರ್ ಗೆದ್ದ ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಸ್ಥಾನ ದಿಢೀರ್ ಕುಸಿತ ಕಂಡು ಆರನೇ ಸ್ಥಾನದಲ್ಲಿದೆ. ಆಡಿದ ಹತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಐದರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.209 ರನ್​ರೇಟ್ ಹೊಂದಿದೆ.
  • ಪಂಜಾಬ್ ಕಿಂಗ್ಸ್ ಆಡಿದ 11 ಪಂದ್ಯಗಳಲ್ಲಿ ಆರು ಸೋಲು- ಐದು ಜಯ ಕಂಡು 10 ಅಂಕ ಹೊಂದಿ -0.441ರನ್​ರೇಟ್​ನೊಂದಿಗೆ ಏಳನೇ ಸ್ಥಾನಲ್ಲಿದೆ.
  • ಮುಂಬೈ ಇಂಡಿಯನ್ಸ್ ಎಂಟನೇ ಸ್ಥಾನದಲ್ಲಿದೆ. ಇವರು ಆಡಿದ 10 ಪಂದ್ಯದಲ್ಲಿ 5 ಸೋಲು, ಐದು ಗೆಲುವು ಕಂಡು 10 ಅಂಕ ಸಂಪಾದಿಸಿ -0.454 ರನ್​ರೇಟ್ ಹೊಂದಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯದಲ್ಲಿ ಆರರಲ್ಲಿ ಸೋಲು ನಾಲ್ಕರಲ್ಲಿ ಜಯ ಕಂಡು 8 ಅಂಕ ಸಂಪಾದಿಸಿ -0.472 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳ ಪೈಕಿ ನಾಲ್ಕರಲ್ಲಿ ಜಯ ಸಾಧಿಸಿ, ಆರು ಪಂದ್ಯಗಳಲ್ಲಿ ಸೋಲುಂಡು 8 ಅಂಕ ಸಂಪಾದಿಸಿ -0.529 ರನ್​ರೇಟ್ ಹೊಂದಿದೆ.

IPL 2023: ಮುಂಬೈ ಇಂಡಿಯನ್ಸ್ ವಿರುದ್ಧ RCB ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಹತ್ತು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 511 ರನ್ ಗಳಿಸಿದ್ದಾರೆ. ರಾಜಸ್ಥಾನ್ ತಂಡದ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇವರು ಆಡಿದ 11 ಪಂದ್ಯಗಳಲ್ಲಿ ಮೂರು ಅರ್ಧಶತಕ, 1 ಶತಕ ಸಿಡಿಸಿ ಒಟ್ಟು 477 ರನ್ ಕಲೆಹಾಕಿದ್ದಾರೆ. ಗುಜರಾತ್ ತಂಡದ ಶುಭ್​ಮನ್ ಗಿಲ್ ದಿಢೀರ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು 11 ಪಂದ್ಯಗಳಿಂದ 469 ರನ್ ಗಳಿಸಿದ್ದಾರೆ.

ಇದನ್ನೂ ಓದಿ
Image
Wankhede Stadium Pitch, MI vs RCB: ಮುಂಬೈನಲ್ಲಿಂದು ಬ್ಯಾಟ್ಸ್​ಮನ್​ಗಳ ದಿನ: ವಾಂಖೆಡೆ ಪಿಚ್ ಹೇಗಿದೆ?, ಆರ್​ಸಿಬಿ ರಣತಂತ್ರವೇನು?
Image
MI vs RCB, IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಫಾಫ್ ಪಡೆಗೆ ಮುಂಬೈ ಇಂಡಿಯನ್ಸ್ ಸವಾಲು
Image
IPL 2023: ದಿಗ್ಗಜರ ಸಮಾಗಮ: ಸಚಿನ್ ತೆಂಡೂಲ್ಕರ್​ ಭೇಟಿಯಾದ ವಿರಾಟ್ ಕೊಹ್ಲಿ
Image
IPL 2023: MI ವಿರುದ್ಧ RCB ಗೆ ಯಾಕೆ ಗೆಲುವು ಕಷ್ಟ..ವಾಂಖೆಡೆಯಲ್ಲಿ ಯಾರು ಬಲಿಷ್ಠ?

ಪರ್ಪಲ್ ಕ್ಯಾಪ್:

ಗುಜರಾತ್ ಟೈಟಾನ್ಸ್ ತಂಡದ ಮೊಹಮ್ಮದ್ ಶಮಿ ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿರುವ ಹನ್ನೊಂದು ಪಂದ್ಯಗಳಲ್ಲಿ 19 ವಿಕೆಟ್ ಪಡೆದುಕೊಂಡಿದ್ದಾರೆ. ಇದೇ ತಂಡದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಕೂಡ 11 ಪಂದ್ಯಗಳಿಂದ 19 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಸಿಕೆಸ್​ಕೆ ತಂಡದ ತುಷಾರ್ ದೇಶಪಾಂಡೆ ಆಡಿರುವ 11 ಪಂದ್ಯಗಳಲ್ಲಿ 19 ವಿಕೆಟ್ ಗಳಿಸಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ