ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!

ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ $1.78 ಬಿಲಿಯನ್ (₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗಿ ಹೊಸ ದಾಖಲೆ ಬರೆದಿದೆ. ಡಿಯಾಜಿಯೊದಿಂದ ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಹಾಗೂ ಅಮೆರಿಕದ ಬ್ಲ್ಯಾಕ್‌ಸ್ಟೋನ್ ಒಳಗೊಂಡ ಹೂಡಿಕೆದಾರರ ಒಕ್ಕೂಟವು ಜಂಟಿಯಾಗಿ ಈ ತಂಡವನ್ನು ಖರೀದಿಸಿದೆ. ಇದು ಐಪಿಎಲ್ ಇತಿಹಾಸದಲ್ಲಿಯೇ ಅತಿ ದೊಡ್ಡ ಮಾರಾಟವಾಗಿದೆ.

ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!
ಆರ್​​ಸಿಬಿ

Updated on: Mar 24, 2026 | 10:04 PM

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.

16,600 ಕೋಟಿ ರೂ. ಮೊತ್ತದ ಈ ಒಪ್ಪಂದವು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರಾಂಚೈಸಿ ಎಂಬ ಹೆಗ್ಗಳಿಕೆಗೆ ಆರ್‌ಸಿಬಿಯನ್ನು ಪಾತ್ರವಾಗಿಸಿದೆ. ಆರ್ಯಮಾನ್ ವಿಕ್ರಮ್ ಬಿರ್ಲಾ ಅವರು ಈ ಹೊಸ ಮಾಲೀಕತ್ವದ ಅಡಿಯಲ್ಲಿ ತಂಡದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಐಪಿಎಲ್ 2026ರ ಸೀಸನ್ ಮುಗಿದ ನಂತರ ಈ ಹೊಸ ಮಾಲೀಕತ್ವವು ಅಧಿಕೃತವಾಗಿ ಜಾರಿಗೆ ಬರಲಿದೆ. ಅಲ್ಲಿಯವರೆಗೆ ಡಿಯಾಜಿಯೊ ಸಂಸ್ಥೆಯೇ ತಂಡದ ಜವಾಬ್ದಾರಿಯನ್ನು ಮುಂದುವರಿಸಲಿದೆ.ಈ ಒಪ್ಪಂದವು ಕೇವಲ ಪುರುಷರ ತಂಡಕ್ಕೆ ಸೀಮಿತವಾಗಿಲ್ಲ, ಆರ್‌ಸಿಬಿ ಮಹಿಳಾ ತಂಡವನ್ನೂ (WPL) ಇದೇ ಒಕ್ಕೂಟವು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲೇ ದಾಖಲೆ: 15,286 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ ರಾಯಲ್ಸ್!

ಇಲ್ಲಿದೆ ನೋಡಿ ಎಕ್ಸ್​​​​ ಪೋಸ್ಟ್​​:

ಕಳೆದ 2 ದಶಕಗಳಲ್ಲಿ, ಐಪಿಎಲ್ ಜಾಗತಿಕ ಕ್ರೀಡಾ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ, ಇದು ಭಾರತೀಯ ಕ್ರಿಕೆಟ್‌ನ ಮುಖವನ್ನೇ ಬದಲಿಸಿದೆ, ಭಾರತಕ್ಕೆ ಅಗಾಧ ಮೌಲ್ಯವನ್ನು ಸೃಷ್ಟಿಸಿದೆ. ಆಧುನಿಕ ಕ್ರೀಡೆಯಲ್ಲಿ ಅತ್ಯಂತ ಪ್ರಭಾವಶಾಲಿ ಫ್ರಾಂಚೈಸಿಗಳಲ್ಲಿ ಒಂದಾದ ಆರ್‌ಸಿಬಿ, ಆದಿತ್ಯ ಬಿರ್ಲಾ ಗ್ರೂಪ್‌ಗೆ ತನ್ನ ಸಂಸ್ಥೆ-ನಿರ್ಮಾಣದ ಪರಂಪರೆಯನ್ನು ಜಾಗತಿಕ ಕ್ರೀಡಾ ಕ್ಷೇತ್ರಕ್ಕೆ ವಿಸ್ತರಿಸಲು ಒಂದು ವಿಶಿಷ್ಟ ವೇದಿಕೆಯನ್ನು ನೀಡುತ್ತದೆ. ಈ ಆಸ್ತಿಯ ಪಾಲಕರಾಗಲು ನಾವು ಸಂತೋಷಪಡುತ್ತೇವೆ ಮತ್ತು ಈ ಅಸಾಧಾರಣ ಪರಂಪರೆಯನ್ನು ಮತ್ತಷ್ಟು ನಿರ್ಮಿಸಲು ಬದ್ಧರಾಗಿದ್ದೇವೆ” ಎಂದು ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 9:52 pm, Tue, 24 March 26

Follow Us